Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮರವಂತೆ- ತ್ರಾಸಿ ಬೀಚ್‌ನಲ್ಲಿ...

ಮರವಂತೆ- ತ್ರಾಸಿ ಬೀಚ್‌ನಲ್ಲಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ

ಕರೆಗೋಡೆಗಳ ನಿರ್ಮಾಣ: ಡಿಸೆಂಬರ್ ಅಂತ್ಯಕ್ಕೆ ಯೋಜನೆ ಪೂರ್ಣ

ವಾರ್ತಾಭಾರತಿವಾರ್ತಾಭಾರತಿ13 May 2019 7:43 PM IST
share
ಮರವಂತೆ- ತ್ರಾಸಿ ಬೀಚ್‌ನಲ್ಲಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ

ಕುಂದಾಪುರ, ಮೇ 13: ಉಡುಪಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾಗಿ ರುವ ಮರವಂತೆ ಸಮುದ್ರ ತೀರ ಪ್ರದೇಶದಲ್ಲಿ ಪ್ರತಿ ವರ್ಷ ಸಂಭವಿಸುವ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರೆಗೋಡೆಗಳ ನಿರ್ಮಾಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಇದರ ಜೊತೆ ಬೀಚ್ ಸೌಂದರ್ಯ ಹೆಚ್ಚಿಸುವ ಕಾರ್ಯ ಕೂಡ ನಡೆಯುತ್ತಿದೆ.

ಮರವಂತೆ ತ್ರಾಸಿ ಬೀಚ್‌ನ ಕೆಲವೇ ಮೀಟರ್ ಅಂತರದಲ್ಲಿ ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗಿರುವುದರಿಂದ ಹಲವು ವರ್ಷಗಳಿಂದ ಕಡಲ್ಕೊರೆತ ತಡೆಗೆ ಶಿಲೆ ಕಲ್ಲುಗಳನ್ನು ಜೋಡಿಸಲಾಗುತ್ತಿತ್ತು. ಆದರೆ ಇದು ನಿರೀಕ್ಷಿತ ಯಶಸ್ಸು ಸಿಗದೆ ಮಳೆಗಾಲದಲ್ಲಿ ಕಡಲಿನ ಅಬ್ಬರಕ್ಕೆ ಹೆದ್ದಾರಿ ಕೂಡ ತತ್ತರಿಸಿ ಹೋಗುತ್ತಿತ್ತು. ಅಲ್ಲದೆ ಕಲ್ಲುಗಳು ಸಮುದ್ರ ಪಾಲಾಗುತ್ತಿದ್ದವು.

ಇದರಿಂದ ಈ ಬೀಚ್‌ನಲ್ಲಿ ಕಡಲ್ಕೊರೆತ ಸಮಸ್ಯೆ ಪ್ರತಿವರ್ಷವೂ ಪುನಾರ ವರ್ತನೆಯಾಗುತ್ತಿತ್ತು. ಈ ಎಲ್ಲ ಕಾರಣಕ್ಕಾಗಿ ಇಲ್ಲಿ ಶಾಶ್ವತ ತಡೆಗೋಡೆ ನಿರ್ಮಿ ಸುವ ನಿಟ್ಟಿನಲ್ಲಿ ಸುಸ್ಥಿರ ಕರಾವಳಿ ತೀರ ಸಂರಕ್ಷಣೆ ಹಾಗೂ ನಿರ್ವಹಣಾ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಇದೀಗ ಕಾಮಗಾರಿ ಭರದಿಂದ ಸಾಗುತ್ತಿದೆ. ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಹಾಗೂ ಕಡಲತೀರದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ರಕ್ಷಣೆಗಾಗಿ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್(ಎಡಿಬಿ) ನೆರವಿನಿಂದ 3.50ಕಿ.ಮೀ. ಉದ್ದದ ಕಡಲತೀರದಲ್ಲಿ 88 ಕೋ.ರೂ. ವೆಚ್ಚದಲ್ಲಿ ಈ ಯೋಜನೆಯ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಇಲ್ಲಿ ಕಡಲತೀರದುದ್ದಕ್ಕೂ ಶಿಲೆಕಲ್ಲುಗಳನ್ನು ಜೋಡಿಸುವ ಬದಲು ಮುಂಬೈ ನಗರದಲ್ಲಿರುವ ಮಾದರಿಯಂತೆ ಸಮುದ್ರ ತೀರಕ್ಕೆ ಲಂಬವಾಗಿ ಗ್ರಾಯನ್ ಅಥವಾ ಕರೆಗೋಡೆ ನಿರ್ಮಾಣಗಳನ್ನು ರಚಿಸಲಾಗುತ್ತಿದೆ. ಇದು ತೀರ ಪ್ರದೇಶದ ಸವಕಳಿಯನ್ನು ತಡೆಯುವುದರ ಜೊತೆಗೆ ಒಂದು ಬದಿ ಶೇಖರಣೆ ಯಾಗುವ ಮರಳಿನ ಕಾರಣ ಸಮುದ್ರ ಹಿಂದಕ್ಕೆ ಸರಿದು ಮರಳಿನ ದಂಡೆ ವಿಸ್ತಾರಗೊಳ್ಳುತ್ತದೆ ಎಂಬುದು ತಂತ್ರಜ್ಞರ ಅಭಿಪ್ರಾಯವಾಗಿದೆ.

ಈ ಕರೆಗೋಡೆಗಳನ್ನು ಸ್ಥಳದಲ್ಲಿಯೇ ತಯಾರಿಸಿ ಜೋಡಿಸಲಾಗುತ್ತಿದೆ. ಈ ಹೊಸ ವಿಧಾನದಿಂದ ತ್ರಾಸಿ ಬೀಚ್‌ನ ಸೌಂದರ್ಯ ಕೂಡ ಹೆಚ್ಚಾಗುತ್ತದೆ. ಇದರಿಂದ ಬೀಚ್ ಸೌಂದರ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎನ್ನು ತ್ತಾರೆ ಅಧಿಕಾರಿಗಳು. ಈ ಸಂಬಂಧ ಈಗಾಗಲೇ ಶೇ.30 ಕಾಮಗಾರಿ ಪೂರ್ಣ ಗೊಂಡಿದ್ದು, ಈ ವರ್ಷದ ಡಿಸೆಂಬರ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ.

 ‘ಮರವಂತೆ-ತ್ರಾಸಿ ಸಮುದ್ರತೀರದ ರಕ್ಷಣೆಗೆ ನಿರ್ಮಾಣವಾಗುತ್ತಿರುವ ಕರೆಗೋಡೆ ಒಂದು ಹೊಸ ವಿಧಾನವಾಗಿದೆ. ಇಲ್ಲಿ ಸಮುದ್ರ ದಂಡೆಯುದ್ದಕ್ಕೆ ಕಲ್ಲು ಪೇರಿಸುವ ಬದಲು 85-90 ಮೀಟರ್ ಅಂತರದಲ್ಲಿ ಸಮುದ್ರ ದಂಡೆಗೆ ಲಂಬವಾಗಿ ಹೊರಚಾಚುವ ಕಲ್ಲಿನ ನಿರ್ಮಾಣಗಳಿರುತ್ತವೆ. ಇವು ದಂಡೆಗೆ ಬಡಿಯುವ ಅಲೆಗಳ ಅಬ್ಬರವನ್ನು ಕಡಿಮೆ ಮಾಡುವ ಮೂಲಕ ಅದರ ರಕ್ಷಣೆಯ ಜೊತೆಗೆ ಮರಳು ಶೇಖರಣೆಯಾಗುವಂತೆ ಮಾಡುತ್ತದೆ. ಆಗ ಕೊರೆತದ ಬದಲಿಗೆ ದಂಡೆಯ ಮರುನಿರ್ಮಾಣ ಮತ್ತು ವಿಸ್ತರಣೆಯಾಗುತ್ತದೆ’ ಎನ್ನುತ್ತಾರೆ ಮರವಂತೆ ಗ್ರಾಪಂ ಮಾಜಿ ಅಧ್ಯಕ್ಷ ಎಸ್. ಜನಾರ್ದನ ಮರವಂತೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X