Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಇಂಡಿಯಾನಾ ಆಸ್ಪತ್ರೆಯಲ್ಲಿ...

ಮಂಗಳೂರು: ಇಂಡಿಯಾನಾ ಆಸ್ಪತ್ರೆಯಲ್ಲಿ ವಿದೇಶಿ ರೋಗಿಯ ಕಿಡ್ನಿ ಕಸಿ

ವಾರ್ತಾಭಾರತಿವಾರ್ತಾಭಾರತಿ13 May 2019 8:10 PM IST
share
ಮಂಗಳೂರು: ಇಂಡಿಯಾನಾ ಆಸ್ಪತ್ರೆಯಲ್ಲಿ ವಿದೇಶಿ ರೋಗಿಯ ಕಿಡ್ನಿ ಕಸಿ

ಮಂಗಳೂರು, ಮೇ 13: ನಗರದ ಇಂಡಿಯಾನಾ ಆಸ್ಪತ್ರೆಯಲ್ಲಿ ವಿದೇಶಿ ರೋಗಿಯೊಬ್ಬರ ಕಿಡ್ನಿ ಕಸಿಯನ್ನು ಮೊದಲ ಬಾರಿಗೆ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಇಂಡಿಯಾನಾ ಹಾಸ್ಪಿಟಲ್ ಮತ್ತು ಹಾರ್ಟ್ ಇನ್‌ಸ್ಟಿಟ್ಯೂಟ್ ವ್ಯವಸ್ಥಾಪಕ ನಿರ್ದೇಶಕ ಡಾ. ಯೂಸುಫ್ ಕುಂಬ್ಳೆ ಹೇಳಿದರು.

ಸೋಮವಾರ ಆಸ್ಪತ್ರೆಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೆನ್ಯಾ ದೇಶದ ಕೃಷಿ ವಿಜ್ಞಾನಿ ಸುಮಾರು 58 ವರ್ಷ ಪ್ರಾಯದ ಫ್ರಾನ್ಸಿಸ್ ಜಾನ್ ಮುಸ್ಸೆಂಬಿಗೆ ಕಿಡ್ನಿ ತಜ್ಞರಾದ ಡಾ. ಪ್ರದೀಪ್ ಕೆ.ಜೆ. ಮತ್ತು ಡಾ. ಅಭಿಜಿತ್ ಶೆಟ್ಟಿ ನೇತೃತ್ವದ ವೈದ್ಯಕೀಯ ತಂಡವು ಮಾರ್ಚ್ 28ರಂದು ಕಿಡ್ನಿ ಕಸಿ ನಡೆಸಿತು ಎಂದರು.

ಮಂಗಳೂರಿನ ವೈದ್ಯಕೀಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇದೊಂದು ಮೈಲಿಗಲ್ಲಾಗಿದೆ. ವಿಶ್ವದಾದ್ಯಂತ ಸಾಕಷ್ಟು ರೋಗಿಗಳು ಮಂಗಳೂರಿಗೆ ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಆ ಪೈಕಿ ವಿದೇಶಿ ರೋಗಿಯೊಬ್ಬರಿಗೆ ಕಿಡ್ನಿ ಕಸಿ ಮಾಡಿದ ಮೊದಲ ಪ್ರಕರಣ ಇದಾಗಿದೆ. ರೋಗಿಯು ಇದೀಗ ಆರೋಗ್ಯದಿಂದ ಇದ್ದು, ಚಿಕಿತ್ಸೆಯಿಂದ ಹರ್ಷಿತರಾಗಿದ್ದಾರೆ ಎಂದು ಡಾ. ಯೂಸುಫ್ ಕುಂಬ್ಳೆ ನುಡಿದರು.

ಫ್ರಾನ್ಸಿಸ್ ಜಾನ್‌ಗೆ ಹಲವು ವರ್ಷಗಳಿಂದ ಮೂತ್ರಪಿಂಡದ ವೈಫಲ್ಯವಿತ್ತು. ವಾರದಲ್ಲಿ ಎರಡು ಬಾರಿ ಅವರು ಸುಮಾರು 70 ಕಿ.ಮೀ. ದೂರದಲ್ಲಿರುವ ಡಯಾಲಿಸಿಸ್ ಕೇಂದ್ರಕ್ಕೆ ಭೇಟಿ ನೀಡಬೇಕಾಗಿತ್ತು.ಅಲ್ಲದೆ ಕೆನ್ಯಾದಲ್ಲಿ ಡಯಾಲಿಸಿಸ್ ಸಾಕಷ್ಟು ತ್ರಾಸದಾಯಕ ಮತ್ತು ದುಬಾರಿ ಚಿಕಿತ್ಸೆಯಾಗಿತ್ತು. ವಿವಾಹಿತರಾಗಿದ್ದ ಜಾನ್ ಪತ್ನಿ ಮತ್ತು ಐವರು ಮಕ್ಕಳೊಂದಿಗೆ ಕೆನ್ಯಾದಲ್ಲಿ ಕೃಷಿ ವಿಜ್ಞಾನಿಯಾಗಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿಯನ್ನು ಗಮನಿಸಿದ ಅವರ ಏಳು ಮಂದಿ ಸಹೋದರರ ಪೈಕಿ ಒಬ್ಬರಾದ ಪ್ಯಾಟ್ರಿಕ್ ತನ್ನ ಕಿಡ್ನಿ ದಾನ ಮಾಡಲು ಒಪ್ಪಿದರು. ಇಂತಹ ರೋಗಿಗಳಿಗೆ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಇಂಡಿಯಾನಾ ಆಸ್ಪತ್ರೆಯು ಕೆನ್ಯಾ ಸರಕಾರದೊಂದಿಗೆ ಒಪ್ಪಂದ ಮಾಡಿಕೊಂಡಿತ್ತು. ಅದರಂತೆ ಜಾನ್ ಇಂಡಿಯಾನಾ ಅಸ್ಪತ್ರೆಗೆ ದಾಖಲಾಗಿ ಕಿಡ್ನಿ ಕಸಿ ಚಿಕಿತ್ಸೆಗೊಳಗಾದರು ಎಂದು ಯೂಸುಫ್ ಮಾಹಿತಿ ನೀಡಿದರು.

ಈ ಸಂದರ್ಭ ಕಿಡ್ನಿ ಕಸಿಗೊಳಗಾದ ಫ್ರಾನ್ಸಿಸ್ ಜಾನ್, ಕೆನ್ಯಾದ ಡಾ. ಮಚಾರಿಯಾ ಸ್ಟಾನ್ಲಿ ಮೈನ, ಇಂಡಿಯಾನಾ ಆಸ್ಪತ್ರೆಯ ಡಾ. ಪ್ರದೀಪ್ ಕೆ.ಜೆ. ಮತ್ತು ಡಾ. ಅಭಿಜಿತ್ ಶೆಟ್ಟಿ, ಆಸ್ಪತ್ರೆತ ಸಿಇಒ ಸಮೀರ್ ಪಿ.ಟಿ. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X