ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ
ಬೆಂಗಳೂರು, ಮೇ 13: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ವ್ಯಕ್ತಿಯೋರ್ವನನ್ನು ಕೊಲೆಗೈದಿರುವ ಘಟನೆ ಇಲ್ಲಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
35 ವರ್ಷದ ಉಮೇಶ್ ಕೊಲೆಯಾದ ವ್ಯಕ್ತಿ ಎಂದು ಪೊಲೀಸರು ತಿಳಿಸಿದ್ದಾರೆ.
ಮಳವಳ್ಳಿಯಿಂದ ಬೆಂಗಳೂರಿಗೆ ಬಂದು ನೆಲೆಸಿದ್ದ ಉಮೇಶ್, ಚಿಕ್ಕ ಅಂಗಡಿಯನ್ನಿಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದರು. ರವಿವಾರ ರಾತ್ರಿ 10:30ರ ವೇಳೆಗೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂದು ಹೇಳಲಾಗಿದೆ.
ಕೊಲೆಗೆ ಹಳೇ ವೈಷಮ್ಯ ಕಾರಣವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ತನಿಖೆ ಮುಂದುವರೆಸಲಾಗಿದೆ.
Next Story