ವಿಷ ಸೇವಿಸಿ ಆತ್ಮಹತ್ಯೆ
ಕಾರ್ಕಳ, ಮೇ 13: ವಿಷರೀತ ಮದ್ಯಪಾನ ಮಾಡುವ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 13ರಂದು ಬೆಳಗ್ಗೆ ಮಾಳ ಗ್ರಾಮದ ಕೂಡಬೆಟ್ಟು ಎಂಬಲ್ಲಿ ನಡೆದಿದೆ.
ಮೃತರನ್ನು ಕೂಡಬೆಟ್ಟು ನಿವಾಸಿ ರವಿ ಪೂಜಾರಿ(55) ಎಂದು ಗುರುತಿಸ ಲಾಗಿದೆ.
ಇವರು ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥ ಗೊಂಡಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story