ಮೇ 15: ಕೌಡೂರಿನಲ್ಲಿ ಮಲ್ಲಿಗೆ ಕೃಷಿ ಮಾಹಿತಿ
ಉಡುಪಿ, ಮೇ 13:ಉಡುಪಿ ಜಿಲ್ಲಾ ಕೃಷಿಕ ಸಂಘ, ಶ್ರೀಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಕೌಡೂರು ಇವರ ವತಿಯಿಂದ ಮಲ್ಲಿಗೆ ಕೃಷಿ ಮಾಹಿತಿ ಕಾರ್ಯಕ್ರಮ ಮೇ 15ರ ಬುಧವಾರ ಬೆಳಗ್ಗೆ 10:30ಕ್ಕೆ ಕೌಡೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.
ಕೌಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿ ವಿಶ್ವನಾಥ ಕೆ. ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ದೇವಸ್ಥಾನದ ಪ್ರಧಾನ ಅರ್ಚಕ ಬಿಂದುಮಾಧವ ಭಟ್ ಕೌಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಪನ್ಮೂಲ ವ್ಯಕ್ತಿ ಗಳಾಗಿ ಉಡುಪಿ ಜಿಲ್ಲಾ ಕೃಷಿಕ ಸಂಘದ ರಾಮಕೃಷ್ಣ ಶರ್ಮ ಬಂಟಕಲ್ಲು, ಕುದಿ ಶ್ರೀನಿವಾಸ್ ಭಟ್ ಭಾಗವಹಿಸಲಿದ್ದಾರೆ.
ವೈಜ್ಞಾನಿಕ ಹಾಗೂ ಕಡಿಮೆ ಖರ್ಚಿನಲ್ಲಿ ಲಾಭದಾಯಕವಾಗಿ ವಿವಿಧ ರೀತಿಯ ಬೆಳೆಗಳ ಕೃಷಿ ಮಾಡುವ ಕ್ರಮಗಳು, ಅವುಗಳ ನಾಟಿ, ಕೀಟ-ರೋಗ ಬಾಧೆಗಳ ನಿರ್ವಹಣೆ ಕುರಿತ ಸಮಗ್ರ ಮಾಹಿತಿ ನೀಡುವ ಈ ಕಾರ್ಯಕ್ರಮದಲ್ಲಿ ಕೃಷಿಕರು, ಕೃಷಿ ಆಸಕ್ತರು ಭಾಗವಹಿಸುವಂತೆ ಸಂಘಟಕರು ವಿನಂತಿಸಿದ್ದಾರೆ.
Next Story





