ಯುವತಿ ಆತ್ಮಹತ್ಯೆ
ಪುತ್ತೂರು: ಮಂಗಳೂರಿನ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಪುತ್ತೂರಿನ ಪುರುಷಕರಕಟ್ಟೆ ಎಂಬಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಬೊಳಿಂಜ ನಿವಾಸಿ ದಿ.ಶ್ರೀಧರ್ ಎಂಬವರ ಪುತ್ರಿ ಭುವನೇಶ್ವರಿ (24) ಆತ್ಮಹತ್ಯೆ ಮಾಡಿಕೊಂಡವರು.
ಕಳೆದ ಕೆಲವು ವರ್ಷಗಳಿಂದ ಮಂಗಳೂರಿನ ಫಾದರ್ ಮುಲ್ಲರ್ಸ್ ಹಾಸ್ಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಈಕೆ ಕೆಲವು ಸಮಯದ ಹಿಂದೆ ಅಲ್ಲಿಂದ ಕೆಲಸ ಬಿಟ್ಟು ಮನೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು. ಕಳೆದ 15 ದಿನಗಳ ಹಿಂದೆ ಮನೆಗೆ ಬಂದಿದ್ದ ಈಕೆ ರವಿವಾರ ಮಧ್ಯಾಹ್ನ 3.30ರ ವೇಳೆಗೆ ತನ್ನ ಮನೆಯ ಪಕ್ಕದ ಗೇರು ಮರಕ್ಕೆ ಚೂಡಿದಾರಿನ ಸಾಲಿನಿಂದ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ತಾಯಿ, ಓರ್ವ ಸಹೋದರ ಮತ್ತು ಓರ್ವ ಸಹೋದರಿಯನ್ನು ಅಗಲಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.
Next Story





