Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು ಪ್ರವಾಸೋದ್ಯಮ ಸುರಕ್ಷಿತವಾಗಿದೆ:...

ಕೊಡಗು ಪ್ರವಾಸೋದ್ಯಮ ಸುರಕ್ಷಿತವಾಗಿದೆ: ಊಹಾಪೋಹಗಳಿಗೆ ಕಿವಿಗೊಡಬೇಡಿ- ಪ್ರವಾಸೋದ್ಯಮಿಗಳ ಮನವಿ

ವಾರ್ತಾಭಾರತಿವಾರ್ತಾಭಾರತಿ14 May 2019 5:19 PM IST
share
ಕೊಡಗು ಪ್ರವಾಸೋದ್ಯಮ ಸುರಕ್ಷಿತವಾಗಿದೆ: ಊಹಾಪೋಹಗಳಿಗೆ ಕಿವಿಗೊಡಬೇಡಿ- ಪ್ರವಾಸೋದ್ಯಮಿಗಳ ಮನವಿ

ಮಡಿಕೇರಿ, ಮೇ 14 : ಕಳೆದ ವರ್ಷ ಸುರಿದ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಕೊಡಗು ಪ್ರವಾಸೋದ್ಯಮಕ್ಕೆ ಇದೀಗ ಮತ್ತೊಂದು ಸವಾಲನ್ನು ಎದುರಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಾರಿಯೂ ಮಳೆಗಾಲದಲ್ಲಿ ದುರಂತಗಳು ಸಂಭವಿಸುತ್ತವೆ ಎಂಬಿತ್ಯಾದಿ ಆಧಾರ ರಹಿತ ಊಹಾಪೋಹಗಳಿಗೆ ರೆಕ್ಕೆಪುಕ್ಕ ಬೆಳೆಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡಲಾಗುತ್ತಿದೆ. ಇದರಿಂದಾಗಿ ಚೇತರಿಕೆಯ ಹಂತದಲ್ಲಿದ್ದ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮತ್ತೆ ಕಷ್ಟ, ನಷ್ಟದ ಆತಂಕ ಎದುರಾಗಿದೆ ಎಂದು ಕೊಡಗು ಜಿಲ್ಲಾ ಹೊಟೇಲ್, ರೆಸ್ಟೋರೆಂಟ್ ಮತ್ತು ರೆಸಾರ್ಟ್ ಮಾಲಕರ  ಅಸೋಸಿಯೇಷನ್ ತೀವ್ರ ಕಳವಳ ವ್ಯಕ್ತಪಡಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್‍ನ ಸಲಹೆಗಾರ ಜಿ.ಚಿದ್ವಿಲಾಸ್, ಕೊಡಗಿನಲ್ಲಿ ಈ ವರ್ಷದ ಮಳೆಗಾಲದಲ್ಲೂ ದುರಂತಗಳು ಸಂಭವಿಸುತ್ತದೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದ್ದು, ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಸೋಸಿಯೇಷನ್ ಈಗಾಗಲೆ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ. ಜಿಲ್ಲಾಧಿಕಾರಿಗಳು ಕೂಡ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು.

ಕಳೆದ ಸಾಲಿನ ಆಗಸ್ಟ್ 16 ರ ಬಳಿಕ ಜಿಲ್ಲೆಯಲ್ಲಿ ಮಹಾಮಳೆಯಿಂದ ಸಂಭವಿಸಿದ ಪ್ರಾಕೃತಿಕ ವಿಕೋಪಗಳ ಸಂದರ್ಭ ಅಸೋಸಿಯೇಷನ್ ವಿಕೋಪ ಪರಿಹಾರ ಕಾರ್ಯದಲ್ಲಿ ನಿರತ ಅಧಿಕಾರಿಗಳು, ಸಿಬ್ಬಂದಿಗಳಿಗಾಗಿ 2 ಸಾವಿರ ಕೊಠಡಿಗಳನ್ನು ಉಚಿತವಾಗಿ ಜಿಲ್ಲಾಡಳಿತಕ್ಕೆ ನೀಡಿದ್ದಲ್ಲದೆ, ಆ ಹಂತದಲ್ಲಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಪ್ರವಾಸೋದ್ಯಮವನ್ನು ಸ್ಥಗಿತಗೊಳಿಸುವ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸಿತ್ತು ಎಂದು ಚಿದ್ವಿಲಾಸ್ ಗಮನ ಸೆಳೆದರು.

ಕರ್ನಾಟಕ ಪ್ರವಾಸೋದ್ಯಮ ರಾಯಭಾರಿ ಮೈಸೂರು ರಾಜವಂಶಸ್ಥರಾದ ಯದುವೀರ್ ಒಡೆಯರ್ ಅವರ ಮೂಲಕ ಕೊಡಗಿನ ಪ್ರವಾಸ ಸುರಕ್ಷಿತವೆಂದು ತಿಳಿಸಲಾಯಿತು. ಕೊಡಗಿನ ಪ್ರವಾಸದಿಂದ ಯಾವುದೇ ತೊಂದರೆಗಳಿಲ್ಲವೆಂದು ವಿವಿಧ ಭಾಷಿಕ ಪ್ರವಾಸಿಗರ ಮೂಲಕ ಹೊರಜಿಲ್ಲೆ, ರಾಜ್ಯಗಳ ಪ್ರವಾಸಿಗರಲ್ಲಿ ಜಾಗೃತಿಯನ್ನು ಮೂಡಿಸಿ ಆಕರ್ಷಿಸುವ ಪ್ರಯತ್ನಗಳು ನಡೆಯಿತು. ಹಿರಿಯ ಪತ್ರಕರ್ತ ಹೆಚ್.ಟಿ.ಅನಿಲ್ ಅವರ ಸಹಕಾರದೊಂದಿಗೆ ಕೊಡಗಿನ ಪ್ರವಾಸ ಅತ್ಯಂತ ಸುರಕ್ಷಿತ ಎಂದು ಬಿಂಬಿಸುವ ವಿಡಿಯೋ ಚಿತ್ರೀಕರಣದ ಮೂಲಕ ದೇಶದಾದ್ಯಂತ ಪ್ರಚಾರ ಮಾಡಿ ಪ್ರವಾಸೋದ್ಯಮದ ಪುನಶ್ಚೇತನಕ್ಕೆ ಅತ್ಯಂತ ಪ್ರಮಾಣಿಕವಾದ ಪ್ರಯತ್ನಗಳನ್ನು ಮಾಡಲಾಗಿತ್ತು ಎಂದು ಅವರು ಸ್ಮರಿಸಿಕೊಂಡರು.

ಎಲ್ಲಾ ಪ್ರಯತ್ನಗಳ ನಡುವೆ ಪ್ರವಾಸೋದ್ಯಮ ಒಂದಷ್ಟು ಪ್ರಗತಿಯನ್ನು ಕಾಣುತ್ತಿದೆ ಎನ್ನುವ ಹಂತದಲ್ಲೆ ಇದೀಗ, ಯಾವುದೇ ನೈಜಾಂಶಗಳಿಲ್ಲದ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಮೂಲಕ ಆತಂಕ ಸೃಷ್ಟಿಸಲಾಗುತ್ತಿದೆ. ಕೊಡಗಿನೆಡೆಗೆ ಪ್ರವಾಸ ಹೋಗುವುದೇ ಬೇಡ ಎನ್ನುವ ಭಾವನೆಯನ್ನು ಮೂಡಿಸಲಾಗುತ್ತಿದ್ದು, ಇದು ಅತ್ಯಂತ ಕೆಟ್ಟ ಬೆಳವಣಿಗೆ ಎಂದು ಬೇಸರ ವ್ಯಕ್ತಪಡಿಸಿದರು. ಕೊಡಗು ಪ್ರವಾಸೋದ್ಯಮ ಕ್ಷೇತ್ರ ಸುರಕ್ಷಿತವಾಗಿದ್ದು, ಇದರ ಅಭಿವೃದ್ಧಿಗೆ ಪ್ರತಿಯೊಬ್ಬರು ಕೈಜೋಡಿಸುವಂತೆ ಚಿದ್ವಿಲಾಸ್ ಮನವಿ ಮಾಡಿದರು.

ಬಹುರಾಷ್ಟ್ರೀಯ ಸಂಸ್ಥೆಗಳು ನಡೆಸುತ್ತಿರುವ ಅನಧಿಕೃತ ಹೋಂಸ್ಟೇಗಳ ವಿರುದ್ಧ ತನಿಖೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಹೆಸರಿನಲ್ಲಿ ಅನಧಿಕೃತವಾದ ಚಟುವಟಿಕೆಗಳು ನಡೆಯುತ್ತಿದ್ದರು, ಇದನ್ನು ನಿಯಂತ್ರಿಸಬೇಕಾದ ಪ್ರವಾಸೋದ್ಯಮ ಇಲಾಖೆಯಲ್ಲಿ ಖಾಯಂ ಸಹಾಯಕ ನಿರ್ದೇಶಕರೆ ಇಲ್ಲದ ಪರಿಸ್ಥಿತ ನಿರ್ಮಾಣವಾಗಿದೆ. ಆದಷ್ಟು ಶೀಘ್ರ ಅಧಿಕಾರಿಯ ನೇಮಕ ಮಾಡಬೇಕು ಮತ್ತು ಈ ಹಿಂದೆ ನಿರ್ಧರಿಸಿರುವಂತೆ ಪ್ರವಾಸೋದ್ಯಮದ ಕುರಿತು ‘ಮಾಹಿತಿ ಕೇಂದ್ರ’ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಚಿದ್ವಿಲಾಸ್ ಒತ್ತಾಯಿಸಿದರು.

ಉಪಾಧ್ಯಕ್ಷ ಜಾಹೀರ್ ಅಹಮ್ಮದ್ ಮಾತನಾಡಿ, ಜಿಲ್ಲೆಯಲ್ಲಿ ಉಪಹಾರ ಗೃಹ, ವಸತಿ ಗೃಹಗಳು, ರೆಸಾರ್ಟ್ ಹಾಗೂ ಹೋಂಸ್ಟೇಗಳ ಮೂಲಕ ಅಂದಾಜು 1 ಲಕ್ಷಕ್ಕೂ ಹೆಚ್ಚಿನ ಮಂದಿ ಬದುಕು ಕಟ್ಟಿಕೊಂಡಿದ್ದಾರೆ. ಪ್ರಸ್ತುತ ಕೊಡಗಿನ ಪ್ರವಾಸೋದ್ಯಮದ ಬಗ್ಗೆ ತಪ್ಪು ಮಾಹಿತಿಗಳಿಂದ ಇವರ ಬದುಕು ಸಂಕಷ್ಟಕ್ಕೆ ಸಿಲುಕಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕೊಡಗಿನ ಆರ್ಥಿಕ ಮೂಲವಾಗಿದ್ದ ಕಾಫಿ, ಏಲಕ್ಕಿ, ಕರಿಮೆಣಸು ದರಗಳು ನೆಲಕಚ್ಚಿರುವ ಹಿನ್ನೆಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಪ್ರವಾಸೋದ್ಯಮವನ್ನೆ ಆರ್ಥಿಕ ಸ್ಥಿರತೆಗೆ ನೆಚ್ಚಿಕೊಳ್ಳಲಾಗುತ್ತಿದೆ. ಆದ್ದರಿಂದ ಪ್ರವಾಸಿಗರು ಸಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು  ಮನವಿ ಮಾಡಿದರು.

ಜಿಲ್ಲೆಯ ಪ್ರವಾಸೋದ್ಯಮ ಸಂಕಷ್ಟಕ್ಕೆ ಸಿಲುಕಿರುವುದರಿಂದ ಜಿಲ್ಲೆಯ ಹೊಟೇಲ್, ರೆಸ್ಪೋರೆಂಟ್, ಹೋಂಸ್ಟೇ ಮಾಲಕರು, ಬೆಳೆಗಾರರು ಸಾಲದಲ್ಲಿ ಮುಳುಗಿದ್ದಾರೆ. ಉದ್ಯೋಗ ಸೃಷ್ಟಿಯೂ ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಯುವ ಸಮೂಹ ಜಿಲ್ಲೆಯಿಂದ ಹೊರ ತೆರಳುತ್ತಿದ್ದು, ಪ್ರವಾಸೋದ್ಯಮವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ತುರ್ತು ಸ್ಪಂದಿಸಬೇಕಿದೆ ಎಂದರು.

ಪ್ರವಾಸೋದ್ಯಮ ಮುಖ್ಯ ಆಕರ್ಷಣೆಗಳಾದ ಮಡಿಕೇರಿಯ ಪುಟಾಣಿ ರೈಲು, ದುಬಾರೆಯ ರಿವರ್ ರ‍್ಯಾಫ್ಟಿಂಗ್, ಕಕ್ಕಬೆಯ ತಡಿಯಂಡಮೋಳ್ ಚಾರಣವನ್ನು ಪುನರಾರಂಭಿಸಲು ಅವಕಾಶ ಕಲ್ಪಿಸಬೇಕು ಎಂದು ಇದೇ ಸಂದರ್ಭ ಅವರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಅಸೋಸಿಯೇಷನ್ ನಿರ್ದೇಶಕ ದಿನೇಶ್ ಕಾರ್ಯಪ್ಪ ಮಾತನಾಡಿ, ಜಿಲ್ಲೆಗೆ ಕಾಲಿರಿಸಿರುವ ಬಹುರಾಷ್ಟ್ರೀಯ ಪ್ರವಾಸಿ ಸಂಸ್ಥೆಯೊಂದು ಜಿಲ್ಲೆಯ ಹಲವಾರು ಹೋಂಸ್ಟೇ ಮತ್ತು ಮನೆಗಳನ್ನು ಬಾಡಿಗೆಗೆ ಪಡೆದು ಅವುಗಳನ್ನು ಕೇವಲ ‘ಹೋಮ್ಸ್’ ಎಂದು ಕರೆಯುವ ಮೂಲಕ ಪ್ರವಾಸೊದ್ಯಮದ ನಿಯಮಗಳನ್ನು ಮೀರಿ ಪ್ರವಾಸಿಗರಿಗೆ ಬಾಡಿಗೆಗೆ ಒದಗಿಸುವ ಅನಧಿಕೃತ ಕಾರ್ಯದಲ್ಲಿ ತೊಡಗಿದೆ. ಇದರಿಂದ ಇಂತಹ ಹೋಮ್ಸ್ ಗಳಿಗೆ ಯಾವ ಅತಿಥಿಗಳು ಬರುತ್ತಾರೆ, ಯಾವ ಚಟುವಟಿಕೆಗಳು ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿಗಳು ದೊರಕದ ಪರಿಸ್ಥಿತಿ ನಿರ್ಮಾಣವಾಗಿದೆ. ವಾಣಿಜ್ಯಕ ಉದ್ದೇಶಕ್ಕೆ ಬಳಸುವ ಈ ಹೋಮ್ಸ್ ಗಳಲ್ಲಿ ಜನಸಾಮಾನ್ಯರು ಬಳಸುವ ಲೆಕ್ಕಾಚಾರದಲ್ಲಿ ನೀರು, ವಿದ್ಯುತ್ ಹಾಗೂ ಕಂದಾಯ ಪಾವತಿಸಲಾಗುತ್ತಿದೆ. ವಾಣಿಜ್ಯಕವಾದ ತೆರಿಗೆ ಪಾವತಿ ಮಾಡದೆ ವಂಚನೆ ಎಸಗಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಈ ಬಗ್ಗೆಯೂ ಜಿಲ್ಲಾಧಿಕಾರಿಗಳಿಗೆ ದೂರನ್ನು ನೀಡಲಾಗಿದೆ ಎಂದರು. 

ಸುದ್ದಿಗೋಷ್ಠಿಯಲ್ಲಿ ನಿರ್ದೇಶಕರಾದ ಆಸೀಫ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X