ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲಕ್ಕೆ ಅರ್ಜಿ ಆಹ್ವಾನ
ಉಡುಪಿ, ಮೇ 14: ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿಇಟಿ ಮೂಲಕ ಪ್ರವೇಶ ಪಡೆದು ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ.2ರ ಬಡ್ಡಿದರದಲ್ಲಿ ವಾರ್ಷಿಕ ಗರಿಷ್ಠ ಒಂದು ಲಕ್ಷ ರೂ.ಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.
2019-20ನೇ ಸಾಲಿನಲ್ಲಿ ಸಿಇಟಿ ಮೂಲಕ ಆಯ್ಕೆಯಾಗಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿಇಟಿಗೆ ಪಾವತಿಸಬೇಕಾದ ಶುಲ್ಕವನ್ನು ಸಿಇಟಿಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೊಂದಾಣಿಕೆ ಮಾಡಲಾಗುವುದು.
2019-20ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ಸಿಇಟಿ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡಲು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಾಲ ಪಡೆಯಬಯಸುವ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3ಬಿಗೆ ಸೇರಿದ್ದು, (ವಿಶ್ವಕರ್ಮ ಮತ್ತು ಉಪಜಾತಿಗಳು, ಅಲ್ಪಸಂಖ್ಯಾತರು ಮತ್ತು ಉಪಜಾತಿಗಳು, ಉಪ್ಪಾರ ಮತ್ತು ಉಪಜಾತಿಗಳು ಹಾಗೂ ಬೆಸ್ತ/ಅಂಬಿಗ ಮತ್ತು ಅದರ ಉಪಜಾತಿಗಳನ್ನು ಹೊರತುಪಡಿಸಿ), ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ 3.50 ಲಕ್ಷ ರೂಗಳ ಮಿತಿಯಲ್ಲಿರಬೇಕು. ಇದಕ್ಕಾಗಿ ಜಿಲ್ಲೆಯ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ www.karnataka.gov.in/dbcdc ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‌ಸೈಟ್- www.karnataka.gov.in/dbcdc -ನಲ್ಲಿ ಲಾಗಿನ್ ಆಗಿ ವೆಬ್‌ಸೈಟ್‌ನಲ್ಲಿ ಲ್ಯವಿರುವ ಮತ್ತು ನ್ನು ನಮೂದಿಸಿ ಅರ್ಜಿಯನ್ನು ಆನ್‌ಲೈನ್‌ಲ್ಲಿ ಭರ್ತಿಮಾಡಬೇಕು. ಇದರೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ, ಆಧಾರ್ ಕಾರ್ಡ್/ಚುನಾವಣಾ ಗುರುತಿನ ಚೀಟಿ, ಎಸೆಸೆಲ್ಸಿ ಅಂಕಪಟ್ಟಿ, ಸಿಇಟಿ/ನೀಟ್ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್ ದಾಖಲೆಗಳನ್ನು ಸ್ಕಾನ್ ಮಾಡಿ ಅರ್ಜಿಯೊಂದಿಗೆ ಆನ್‌ಲೈನ್‌ನಲ್ಲಿ ಮೇ 24ರೊಳಗೆ ಸಲ್ಲಿಸ ಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಚೇರಿಯನ್ನು ಅಥವಾ ನಿಗಮದ ಕೇಂದ್ರ ಕಚೇರಿಯನ್ನು ಹಾಗೂ ಹೆಲ್ಪ್‌ಲೈನ್: 8197249898 / 8095267253ನ್ನು ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.







