ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವೇಗೌಡ ಭೇಟಿ

ಉಡುಪಿ, ಮೇ 14: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಂಗಳವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಕುಟುಂಬ ಸಮೇತರಾಗಿ ಆಮಿಸಿ ದೇವರ ದರ್ಶನ ಪಡೆದರು.
ಪತ್ನಿ ಚೆನ್ನಮ್ಮ ಜೊತೆ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದ ದೇವೇಗೌಡರು, ಮಠದ ಸುವರ್ಣ ಗೋಪುರ ಯೋಜನೆ ಯನ್ನು ವೀಕ್ಷಿಸಿದರು. ಬಳಿಕ ಅವರು ಪರ್ಯಾಯ ಪಲಿಮಾರು ಮಠಾಧೀಶ ಶ್ರೀವಿದ್ಯಾ ಧೀಶ ತೀರ್ಥ ಸ್ವಾಮೀಜಿ ಅವರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದು ಶ್ರೀಕೃಷ್ಣ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ, ಮುಖಂಡರಾದ ಶಾಲಿನಿ ಶೆಟ್ಟಿ ಕೆಂಚನೂರು, ಮಠದ ಕಾರ್ಯದರ್ಶಿ ಗಿರೀಶ್ ಉಪಾಧ್ಯಾಯ, ಪಿಆರ್‌ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

Next Story





