Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಠ್ಯಪುಸ್ತಕಗಳ ದರ ಶೇ.20 ರಷ್ಟು ಹೆಚ್ಚಳ:...

ಪಠ್ಯಪುಸ್ತಕಗಳ ದರ ಶೇ.20 ರಷ್ಟು ಹೆಚ್ಚಳ: ಖಾಸಗಿ ಶಾಲಾ ಆಡಳಿತ ಮಂಡಳಿ ವಿರೋಧ

ವಾರ್ತಾಭಾರತಿವಾರ್ತಾಭಾರತಿ14 May 2019 9:51 PM IST
share

ಬೆಂಗಳೂರು, ಮೇ 14 : ಕರ್ನಾಟಕ ಪಠ್ಯಪುಸ್ತಕ ಸಂಘವು 2019-20ನೇ ಸಾಲಿನ ಪಠ್ಯಪುಸ್ತಕಗಳಿಗೆ ಶೇ.20ರಷ್ಟು ದರ ಹೆಚ್ಚಳ ಮಾಡಿರುವುದನ್ನು ಖಾಸಗಿ ಶಾಲಾಡಳಿತ ಮಂಡಳಿ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದೆ.

ಈಗಾಗಲೇ ಶಾಲೆಗಳಿಗೆ ಹಲವು ಮಕ್ಕಳನ್ನು ದಾಖಲು ಮಾಡಿದ್ದಾರೆ. ಇದೀಗ ಶೇ.20 ರಷ್ಟು ದರ ಹೆಚ್ಚಳ ಮಾಡಿರುವುದರಿಂದ ಪೋಷಕರ ಮೇಲೆ ಮತ್ತಷ್ಟು ಹೊರೆಯಾಗುವ ಸಾಧ್ಯತೆಯಿದೆ. ಪಠ್ಯಪುಸ್ತಕದ ಬೆಲೆಯಲ್ಲಿ ಹೆಚ್ಚಳವಾಗಿರುವುದನ್ನು ಆಡಳಿತ ಮಂಡಳಿಗಳು ಭರಿಸಲು ಸಾಧ್ಯವಿಲ್ಲ. ನೇರವಾಗಿ ಪಾಲಕ, ಪೋಷಕರ ಜೇಬಿಗೆ ಕತ್ತರಿ ಬೀಳಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿವೆ.

ರಾಜ್ಯ ಪಠ್ಯಕ್ರಮದ ಖಾಸಗಿ ಶಾಲೆಗಳಿಗೆ ಪಠ್ಯಪುಸ್ತಕ ಸಂಘದಿಂದಲೇ ಪುಸ್ತಕಗಳನ್ನು ವಿತರಣೆ ಮಾಡಲಾಗುತ್ತದೆ. ಪಠ್ಯಪುಸ್ತಕ ಸಂಘವು ಸೂಚಿಸಿರುವ ನಿರ್ದಿಷ್ಟ ಬೆಲೆ ನೀಡಿ ಖಾಸಗಿ ಶಾಲೆಗಳು ಪುಸ್ತಕ ಖರೀದಿಸಿ ಮಕ್ಕಳಿಗೆ ನೀಡಬೇಕಾಗುತ್ತದೆ. ಈ ವೇಳೆ ಸರಕಾರ ಇದೀಗ ದಿಢೀರ್ ಎಂದು ಬೆಲೆ ಏರಿಕೆ ಮಾಡಿರುವುದು ಸರಿಯಲ್ಲ ಎಂದು ಆಡಳಿತ ಮಂಡಳಿಗಳು ಆಕ್ರೋಶ ಹೊರ ಹಾಕಿವೆ.

ವಿದ್ಯಾರ್ಥಿಗಳ ಸಾಧನಾ ಟ್ರಾಕಿಂಗ್ ವ್ಯವಸ್ಥೆ (ಎಸ್‌ಎಟಿಎಸ್) ಆಧಾರದ ಮೇಲೆ ಫೆಬ್ರವರಿಯಲ್ಲಿ ಖಾಸಗಿ ಶಾಲೆಗಳು ತಮಗೆ ಅವಶ್ಯವಿರುವ ಪುಸ್ತಕಗಳ ಪಟ್ಟಿಯನ್ನು ಸರಕಾರಕ್ಕೆ ಸಲ್ಲಿಸಿವೆ. ಆ ವೇಳೆ ಬೆಲೆ ನಿಗದಿ ಮಾಡಲಾಗಿತ್ತು. ಈಗ ಪುಸ್ತಕಗಳನ್ನು ಖರೀದಿ ಮಾಡುವ ಸಂದರ್ಭದಲ್ಲಿ ದರ ಹೆಚ್ಚಳ ಮಾಡಿ, ಹೊಸ ಬೆಲೆ ನಿಗದಿ ಮಾಡಿದ್ದಾರೆ. ಈ ಸಂಬಂಧ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಿರ್ದೇಶಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೇವೆ. ದರ ಹೆಚ್ಚಳ ಮಾಡಿ ಟೆಂಡರ್ ನೀಡಿರುವುದರಿಂದ ಅನಿವಾರ್ಯವಾಗಿ ಹೊಸ ಬೆಲೆಗೆ ಖರೀದಿ ಮಾಡಬೇಕಾಗುತ್ತದೆ ಎಂದು ಹೇಳುತ್ತಿದ್ದಾರೆ ಎಂದು ಆಡಳಿತ ಮಂಡಳಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ.ಶಶಿಕುಮಾರ್ ಹೇಳಿದ್ದಾರೆ.

ಖಾಸಗಿ ಶಾಲೆಗಳಿಗೆ ನೇರವಾಗಿ ಪುಸ್ತಕಗಳನ್ನು ಸರಬರಾಜು ಮಾಡುವುದರಲ್ಲೂ ಪಠ್ಯಪುಸ್ತಕ ಸಂಘ ವಿಫಲವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಮತ್ತು ಶಿಕ್ಷಣ ಇಲಾಖೆ ಆಯುಕ್ತರಿಗೂ ಮನವಿ ಮಾಡಲಾಗಿದೆ. ಜನವರಿಯಲ್ಲಿ ಆನ್‌ಲೈನ್‌ನಲ್ಲಿ ನೀಡಿದ್ದ ದರದ ಮಾಹಿತಿಗೂ ಈಗ ಕೇಳುತ್ತಿರುವ ದರಕ್ಕೂ ವ್ಯತ್ಯಾಸವಿದೆ. ದರ ಹೆಚ್ಚಳವನ್ನು ತಕ್ಷಣವೇ ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಇಲಾಖೆ ಸಮರ್ಥನೆ: ಪುಸ್ತಕಗಳ ಮುದ್ರಣದ ಬಳಿಕ ತಗಲುವ ವೆಚ್ಚದ ಆಧಾರದಲ್ಲಿ ಬೆಲೆ ನಿಗದಿ ಮಾಡಲಾಗುತ್ತದೆ. ಕಾಗದ, ಉತ್ಪಾದನಾ ವೆಚ್ಚ, ಆಡಳಿತಾತ್ಮಕ ವೆಚ್ಚ ಹೆಚ್ಚಳವಾಗಿದ್ದರಿಂದ ಅನಿವಾರ್ಯವಾಗಿ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ಪುಸ್ತಕಗಳ ಬೆಲೆ ಕೂಡ ಹೆಚ್ಚಿಸಬೇಕಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಪಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X