Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಎರಡೇ ತಿಂಗಳಲ್ಲಿ 1,221 ಕೋಟಿ ಆಸ್ತಿ...

ಎರಡೇ ತಿಂಗಳಲ್ಲಿ 1,221 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಬಿಬಿಎಂಪಿ

ವಾರ್ತಾಭಾರತಿವಾರ್ತಾಭಾರತಿ14 May 2019 10:09 PM IST
share
ಎರಡೇ ತಿಂಗಳಲ್ಲಿ 1,221 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಿದ ಬಿಬಿಎಂಪಿ

ಬೆಂಗಳೂರು, ಮೇ 14: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇವಲ ಎರಡು ತಿಂಗಳಲ್ಲಿ 1,221 ಕೋಟಿ ಆಸ್ತಿ ತೆರಿಗೆ ಸಂಗ್ರಹ ಮಾಡುವ ಮೂಲಕ ದಾಖಲೆ ಬರೆದಿದೆ. ತೆರಿಗೆ ಸಂಗ್ರಹವಾಗಿರುವುದನ್ನು ಗಮನಿಸಿದರೆ ನಗರದ ನಾಗರಿಕರಲ್ಲಿ ತೆರಿಗೆ ಕಟ್ಟುವ ಬಗ್ಗೆ ಆಸಕ್ತಿ ಹೆಚ್ಚಾಗುತ್ತಿರುವುದಕ್ಕೆ ಇದು ತಾಜಾ ಉದಾಹರಣೆ.

ಜನರಲ್ಲಿ ಆಸ್ತಿ ತೆರಿಗೆ ಕಟ್ಟುವುದಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ಬಿಬಿಎಂಪಿ ಎಪ್ರಿಲ್ ತಿಂಗಳಲ್ಲಿ ಶೇ.5ರಷ್ಟು ರಿಯಾಯಿ ಘೋಷಿಸಿತ್ತು. ಹಾಗಾಗಿ ಎಪ್ರಿಲ್ ನಲ್ಲಿ ಅತಿ ಹೆಚ್ಚು ತೆರಿಗೆ ಪಾವತಿಸುವುದು ಮಾಮೂಲಿ. ಆದರೆ, ಈ ಬಾರಿಯ ವಿಶೇಷವೆಂದರೆ ವಿನಾಯಿತಿ ಅವಧಿ ಪೂರ್ಣಗೊಂಡಿದ್ದರೂ ನಾಗರಿಕರು ನಾಮುಂದು ತಾಮುಂದು ಎಂದು ಆನ್‌ಲೈನ್‌ನಲ್ಲಿ ತೆರಿಗೆ ಪಾವತಿಸುತ್ತಿರುವುದರಿಂದ ದಾಖಲೆಯ ತೆರಿಗೆ ಸಂಗ್ರಹವಾಗಿದೆ.

ಈ ತಿಂಗಳಲ್ಲಿ ತೆರಿಗೆ ಪಾವತಿಸಿದರೆ ದಂಡ ಕಟ್ಟುವಂತಿಲ್ಲ. ಜೂನ್‌ನಲ್ಲಿ ಪಾವತಿಸಿದರೆ ದಂಡ ಕಟ್ಟಬೇಕಾಗುತ್ತದೆ. ಹಾಗಾಗಿ ಜನ ಮುಗಿಬಿದ್ದು ತೆರಿಗೆ ಕಟ್ಟುತ್ತಿದ್ದಾರೆ. ಬೆಂಗಳೂರು ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿರುವ ರಾಜ್ಯ ಸರಕಾರ ಪ್ರಸಕ್ತ ಸಾಲಿನಲ್ಲಿ 4,100 ಕೋಟಿ ಆಸ್ತಿ ತೆರಿಗೆ ಸಂಗ್ರಹದ ಗುರಿ ನೀಡಿತ್ತು.

ಈ ಟಾರ್ಗೆಟ್ ಹಿನ್ನೆಲೆಯಲ್ಲಿ ತೆರಿಗೆ ಸಂಗ್ರಹ ಕಾರ್ಯ ಮುಂದುವರೆದಿದೆ. ಇಲ್ಲಿಯವರೆಗೂ 1,221 ಕೋಟಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. ಆಸ್ತಿ ತೆರಿಗೆ ಪಾವತಿಸಲು ಮುಂದಿನ ಮಾರ್ಚ್ ವರೆಗೂ ಸಮಯವಿದೆ. ಇನ್ನೂ 10 ತಿಂಗಳಿದ್ದು, ಈಗಾಗಲೇ 1,221 ಕೋಟಿ ಸಂಗ್ರಹವಾಗಿದೆ. ಹಾಗಾಗಿ ನಿಗದಿತ ಆಸ್ತಿ ತೆರಿಗೆ ಗುರಿಯನ್ನು ನಾವು ತಲುಪಲಿದ್ದೇವೆ ಎಂದು ಪಾಲಿಕೆ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಚಲನ್ ಮತ್ತು ಡಿಡಿ ಮುಖಾಂತರ ಆಯಾ ವಲಯಗಳ ಕಂದಾಯ ಕಚೇರಿಗೆ ತೆರಳಿ ಸರತಿ ಸಾಲಲ್ಲಿ ನಿಂತು ಕಂದಾಯ ಕಟ್ಟಬೇಕಿತ್ತು. ಹಾಗಾಗಿ ನಿಗದಿತ ಗುರಿ ತಲುಪಲಾಗುತ್ತಿರಲಿಲ್ಲ. ಪಾಲಿಕೆಯಲ್ಲಿ ಆನ್‌ಲೈನ್ ವ್ಯವಸ್ಥೆ ಜಾರಿಗೊಳಿಸಿದ್ದರಿಂದ ಜನ ಜಾಗೃತರಾಗಿ ತಾವಾಗಿಯೇ ಮುಂದೆ ಬಂದು ತೆರಿಗೆ ಪಾವತಿಸುತ್ತಿದ್ದಾರೆ.

ಈ ಬಾರಿ ಆನ್‌ಲೈನ್‌ನಲ್ಲಿ ಯಾವುದೇ ತಾಂತ್ರಿಕ ದೋಷ ಕಾಣಿಸದೆ ಇರುವುದರಿಂದ ಹೆಚ್ಚು ಮಂದಿ ತೆರಿಗೆ ಕಟ್ಟಲು ಸಾಧ್ಯವಾಗಿದೆ. ಹಿಂದಿನ ಹಣಕಾಸು ವರ್ಷದಲ್ಲಿ 3600 ಕೋಟಿ ತೆರಿಗೆ ಸಂಗ್ರದ ಗುರಿ ಹಾಕಿಕೊಳ್ಳಲಾಗಿತ್ತು. ಆದರೆ 2,500 ಕೋಟಿ ಮಾತ್ರ ಸಂಗ್ರಹವಾಗಿತ್ತು. ಈಗ ಪರಿಸ್ಥಿತಿ ಬದಲಾಗಿದೆ. ಜನ ಉತ್ಸುಕರಾಗಿ ತೆರಿಗೆ ಪಾವತಿಸಲು ಬರುತ್ತಿದ್ದಾರೆ. ಆಸ್ತಿ ತೆರಿಗೆ ಸಂಗ್ರಹಿಸುವಲ್ಲಿ ಕಂದಾಯ ವಿಭಾಗದ ಅಧಿಕಾರಿಗಳು ಇನ್ನೂ ಹೆಚ್ಚು ಮುತುವರ್ಜಿ ವಹಿಸಿದರೆ 4,100 ಕೋಟಿ ತೆರಿಗೆ ಸಂಗ್ರಹದ ಗುರಿ ತಲುಪುವುದರಲ್ಲಿ ಯಾವುದೇ ಸಂಶಯವಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X