ಮೇ 16: ರಾಷ್ಟ್ರೀಯ ಡೆಂಗ್ಯೂ ದಿನ
ಮಂಗಳೂರು, ಮೇ 14: ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯನ್ನು ರಾಜಾದ್ಯಂತ ಆಚರಿಸುತ್ತಿದ್ದು, ದ.ಕ. ಜಿಲ್ಲೆಯಲ್ಲೂ ಮೇ 16 ರಂದು ಪೂರ್ವಾಹ್ನ 8:30ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಜಾಥಾ ಹೊರಡಲಿದೆ.
ಕಚೇರಿಯಿಂದ ಹೊರಟ ಜಾಥಾ ನಗರದ ಬೀದಿಗಳಲ್ಲಿ ಸಂಚರಿಸಿ, ಡೆಂಗ್ಯೂ ನಿಯಂತ್ರಣದ ಬಗ್ಗೆ ಜನರಿಗೆ ಮಾಹಿತಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ ಪ್ರಕಟನೆ ತಿಳಿಸಿದೆ.
Next Story





