Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಂಬೇಡ್ಕರ್ ವಿರೋಧಿಸಿದ ಸಿದ್ಧಾಂತ ಮರು...

ಅಂಬೇಡ್ಕರ್ ವಿರೋಧಿಸಿದ ಸಿದ್ಧಾಂತ ಮರು ಪ್ರವೇಶಿಸುತ್ತಿದೆ: ಕೋಟಿಗಾನಹಳ್ಳಿ ರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ14 May 2019 10:23 PM IST
share
ಅಂಬೇಡ್ಕರ್ ವಿರೋಧಿಸಿದ ಸಿದ್ಧಾಂತ ಮರು ಪ್ರವೇಶಿಸುತ್ತಿದೆ: ಕೋಟಿಗಾನಹಳ್ಳಿ ರಾಮಯ್ಯ

ಬೆಂಗಳೂರು, ಮೇ 14: ಡಾ.ಬಿ.ಆರ್.ಅಂಬೇಡ್ಕರ್ ಅವರು ವಿರೋಧಿಸಿದ ಸಿದ್ಧಾಂತಗಳಿಂದು ದೇಶದ ಶೋಷಿತ ಸಮುದಾಯಗಳ ಮನೆಮನೆಗೆ ಮರು ಪ್ರವೇಶ ಪಡೆಯುತ್ತಿದ್ದು, ಅದರ ಕುರಿತು ಜಾಗೃತಗೊಳ್ಳಬೇಕಿದೆ ಎಂದು ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಹೇಳಿದ್ದಾರೆ.

ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಸಮತಾ ಸೈನಿಕ ದಳದ ವತಿಯಿಂದ ಆಯೋಜಿಸಿದ್ದ ಪ್ರೊ.ಎಂ.ನಾರಾಯಣಸ್ವಾಮಿ ಅವರ ಭೀಮ ಅಂಬೇಡ್ಕರ್ ಡಾ.ಬಿ.ಆರ್.ಅಂಬೇಡ್ಕರ್ ಆದದ್ದು ‘ಮಹಾ ನದಿಯ ಉಗಮ’ ಕೃತಿಯ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇತ್ತೀಚಿಗೆ ಅಂಬೇಡ್ಕರ್‌ರನ್ನು ಪ್ರತಿಯೊಬ್ಬರೂ ತಮಗೆ ಬೇಕಾದ ರೀತಿಯಲ್ಲಿ ವ್ಯಾಖ್ಯಾನಿಸಿಕೊಳ್ಳುತ್ತಿದ್ದಾರೆ. ನಾವೇ ಅವರ ಸಿದ್ಧಾಂತದ ಅಡಿಯಲ್ಲಿ ಸಾಗುತ್ತಿರುವ ನಿಜವಾದವರು ಎಂದು ಬಿಂಬಿಸಿಕೊಳ್ಳಲಾಗುತ್ತಿದೆ. ಇದರ ನಡುವೆ ನೂರು ವರ್ಷಗಳ ಹಿಂದೆ ಅಂಬೇಡ್ಕರ್ ಯಾವ ಪ್ರಶ್ನೆಗಳನ್ನಿಟ್ಟುಕೊಂಡು ಹೋರಾಟ ಮಾಡಿದರೋ, ಯಾವ ಸಿದ್ಧಾಂತವನ್ನು ವಿರೋಧಿಸಿದರೋ ಅದುವೇ ನಮ್ಮ ಮನೆಗಳಿಗೆ ಪ್ರವೇಶಿಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ದೇಶದಲ್ಲಿಂದು ಅಂಬೇಡ್ಕರ್‌ರನ್ನು ನಾಯಕನನ್ನಾಗಿಸಿಕೊಂಡು ಚಳವಳಿ ಮುಂದುವರಿಸುತ್ತಿರುವ ದಲಿತ ನಾಯಕರು ಅವರನ್ನು ಸರಿಯಾದ ದಾರಿಯಲ್ಲಿ ನಡೆಸುತ್ತಿಲ್ಲ. ಹೀಗಾಗಿ, ಅಂಬೇಡ್ಕರ್‌ರ ಬಗ್ಗೆ ಪ್ರತಿಯೊಬ್ಬರೂ ಅವರ ಸಣ್ಣ ಸಣ್ಣ ನೋಟಗಳಿಂದ ಅರ್ಥ ಮಾಡಿಕೊಳ್ಳಬೇಕು. ನಿಜವಾಗಿ ಅಂಬೇಡ್ಕರ್ ಎಲ್ಲಿ ಬದುಕಿದ್ದಾರೆ ಎಂದು ಅರ್ಥೈಸಿಕೊಂಡು, ಅವರ ಹೋರಾಟದ ದಿಕ್ಕನ್ನು ಸರಿದಾರಿಯಲ್ಲಿ ನಡೆಸುವಂತಾಗಬೇಕು ಎಂದು ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಹಚ್ಚಿದ ಬೆಳಕಿನ ದೀಪವನ್ನು ಕೆಲವರು ಮುಂದುವರಿಸಿಕೊಂಡು ಸಾಗಿದ್ದರು. ಅವರ ಬಳಿಕ ಬಂದ ಯಾರೂ ಅದನ್ನು ಮುಂದುವರಿಸುತ್ತಿಲ್ಲ ಎಂದ ಅವರು, ಬೌದ್ಧಿಕ ದಿವಾಳಿತನ ಹಾಗೂ ಆಮಿಷಗಳಿಗೆ ಬಲಿಯಾಗಿ ದಲಿತ ಸಮುದಾಯವಿಂದು ನಮ್ಮ ಮನೆಯಲ್ಲಿರುವ ಬೆಳಕಿನ ದೀಪವನ್ನು ಆರಿಸಿ, ಕತ್ತಲಾಗಿಸಿಕೊಳ್ಳುವ ಕಡೆಗೆ ಸಾಗಿದೆ. ಈ ಸಂದರ್ಭದಲ್ಲಿ ಹೊಸ ರೀತಿಯ ಪರ್ಯಾಯ ರಾಜಕಾರಣವನ್ನು ಕಟ್ಟುವ ಕಡೆ ಸಾಗಬೇಕು. ಪ್ರತಿಯೊಬ್ಬರ ಮನೆಯಲ್ಲಿಯೂ ಅಂಬೇಡ್ಕರ್‌ರ ಚಿಂತನೆಗಳ ಚರ್ಚೆ ನಡೆಯಬೇಕು ಎಂದು ಕರೆ ನೀಡಿದರು. ದೇಶದಲ್ಲಿರುವ ಅಂಬೇಡ್ಕರ್ ಅಧ್ಯಯನ ಪೀಠಗಳು, ವಿದ್ಯಾಸಂಸ್ಥೆಗಳಿಂದ ಅಂಬೇಡ್ಕರ್‌ರ ವಿಚಾರಗಳನ್ನು ಪಸರಿಸಲು ವಿಫಲವಾಗಿವೆ ಎಂದ ಅವರು, ಈ ಆಡಳಿತಾತ್ಮಕ ಸಂಸ್ಥೆಗಳಲ್ಲಿರುವ ಶೇ.99 ರಷ್ಟು ಸಿಬ್ಬಂದಿಗೆ ಅಂಬೇಡ್ಕರ್ ಕುರಿತ ಬೌದ್ಧಿಕ ಜ್ಞಾನವೇ ಇಲ್ಲ. ಇಂತಹ ಸಂಸ್ಥೆಗಳಿಂದ ಅವರ ಬಗ್ಗೆ ತಿಳಿಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಎಂ.ಸುಮಿತ್ರಾ, ವಕೀಲ ಸಣ್ಣ ನಾಯ್ಕ, ಸಮತಾ ಸೈನಿಕ ದಳದ ಅಧ್ಯಕ್ಷ ಎಂ.ವೆಂಕಟಸ್ವಾಮಿ, ಲೇಖಕ ಪ್ರೊ.ಎಂ.ನಾರಾಯಣಸ್ವಾಮಿ ಉಪಸ್ಥಿತರಿದ್ದರು. 

ರಾಜ್ಯ ಸರಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಅಂಬೇಡ್ಕರ್‌ರ ಬದುಕು ಮತ್ತು ಬರಹ, ಭಾಷಣಗಳನ್ನು ಮುದ್ರಣ ಮಾಡಿ ಮಾರಾಟ ಮಾಡಲಾಗುತ್ತಿದೆ. ಆದರೆ, ಪುಸ್ತಕ ಎಂದ ಕೂಡಲೇ ದೂರ ಸರಿಯುವ ದಲಿತ ಸಮುದಾಯ, ಅವರ ವಿಚಾರಗಳಿಂದ ದೂರ ಸರಿಯುತ್ತಿದೆ. ಹೀಗಾಗಿ, ಸಣ್ಣ ಸಣ್ಣ ಪುಸ್ತಕಗಳ ಮೂಲಕ ವಿಚಾರಗಳನ್ನು ಹಂಚುವ ಕೆಲಸವಾಗಬೇಕು. ಅವರ ವಿಚಾರಗಳನ್ನು ಪ್ರತಿಯೊಂದು ಪದವನ್ನೂ ಅರ್ಥ ಮಾಡಿಕೊಳ್ಳುವಂತಾಗಬೇಕು.

-ಕೋಟಿಗಾನಹಳ್ಳಿ ರಾಮಯ್ಯ, ಸಾಹಿತಿ

ರಾಜ್ಯದಲ್ಲಿ 80 ರ ದಶಕದಲ್ಲಿ ಭೂಮಾಲಕರ ಊಳಿಗಮಾನ್ಯ ಪದ್ಧತಿಯನ್ನು ಯಾರೂ ವಿರೋಧಿಸಲಿಲ್ಲ. ಈ ಸಂದರ್ಭದಲ್ಲಿ ದಲಿತ ನಾಯಕತ್ವ ಅದನ್ನು ಖಂಡಿಸಿ ವ್ಯಾಪಕವಾಗಿ ಬೀದಿಗಿಳಿಯಿತು. ಈ ವೇಳೆ ಪ್ರತಿಭಟಿಸಿದವರ ಮೇಲೆ ನಿರಂತರವಾದ ದಾಳಿ, ದೌರ್ಜನ್ಯಗಳು ನಡೆದವು. ಅದರಿಂದ ಮುಕ್ತಿ ಹೊಂದಬೇಕಾದರೆ, ಪ್ರತಿಭಟಿಸಬೇಕಾದರೆ ಸಂಘಟನೆ ಮುಖ್ಯವೆಂದು ಭಾವಿಸಿ ಅಂದು ಸಾವಿರಾರು ಜನರು ಸೇರಿ ಅಂಬೇಡ್ಕರ್ ಜಯಂತಿ ಆಚರಿಸಿದರು. ಆದರೆ, ಇದೇ ಜಯಂತಿಗಳಿಂದು ಸ್ವಾರ್ಥಕ್ಕಾಗಿ ನಡೆಯುತ್ತಿವೆ.

-ಕೋಟಿಗಾನಹಳ್ಳಿ ರಾಮಯ್ಯ, ಸಾಹಿತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X