Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಾನು ಅಕ್ರಮ ಸಂಪತ್ತು ಗಳಿಸಿದ್ದರೆ...

ನಾನು ಅಕ್ರಮ ಸಂಪತ್ತು ಗಳಿಸಿದ್ದರೆ ಸಾಬೀತು ಮಾಡಿ: ಪ್ರತಿಪಕ್ಷಗಳಿಗೆ ಮೋದಿ ಸವಾಲು

ವಾರ್ತಾಭಾರತಿವಾರ್ತಾಭಾರತಿ14 May 2019 10:55 PM IST
share
ನಾನು ಅಕ್ರಮ ಸಂಪತ್ತು ಗಳಿಸಿದ್ದರೆ ಸಾಬೀತು ಮಾಡಿ: ಪ್ರತಿಪಕ್ಷಗಳಿಗೆ ಮೋದಿ ಸವಾಲು

ಬಲ್ಲಿಯಾ(ಉ.ಪ್ರ),ಮೇ 14: ಪ್ರತಿಪಕ್ಷಗಳ ವಿರುದ್ಧ ಮಂಗಳವಾರ ಕಟು ಟೀಕಾಪ್ರಹಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ತಾನು ಅಕ್ರಮವಾಗಿ ಆಸ್ತಿಯನ್ನು ಗಳಿಸಿದ್ದರೆ ಅಥವಾ ವಿದೇಶಿ ಬ್ಯಾಂಕುಗಳಲ್ಲಿ ಹಣವನ್ನಿಟ್ಟಿದ್ದರೆ ಅದನ್ನು ಸಾಬೀತುಗೊಳಿಸುವಂತೆ ಅವುಗಳಿಗೆ ಬಹಿರಂಗ ಸವಾಲು ಒಡ್ಡಿದರು.

ಇಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ಅವರು,”ಮಹಾ ಮಿಲಾವಟ್(ಮಹಾ ಕಲಬೆರಕೆ)’ ಜನರಿಗೆ ನಾನು ಸವಾಲನ್ನು ಹಾಕುತ್ತಿದ್ದೇನೆ. ಧೈರ್ಯವಿದ್ದರೆ ನನ್ನನ್ನು ನಿಂದಿಸುವ ಬದಲು ಅವರು ನನ್ನ ಸವಾಲನ್ನು ಸ್ವೀಕರಿಸಬೇಕು. ನಾನು ಯಾವುದೇ ಬೇನಾಮಿ ಆಸ್ತಿಯನ್ನು ಖರೀದಿಸಿದ್ದರೆ,ಯಾವುದೇ ತೋಟದ ಮನೆಯನ್ನು ನಿರ್ಮಿಸಿದ್ದರೆ, ವಿದೇಶಿ ಬ್ಯಾಂಕ್‌ನಲ್ಲಿ ಹಣವನ್ನು ಠೇವಣಿಯಾಗಿ ಇಟ್ಟಿದ್ದರೆ,ವಿದೇಶಗಳಲ್ಲಿ ಆಸ್ತಿಗಳನ್ನು ಖರೀದಿಸಿದ್ದರೆ, ಲಕ್ಷಾಂತರ ಮತ್ತು ಕೊಟ್ಯಂತರ ರೂ.ವೌಲ್ಯದ ಕಾರುಗಳನ್ನು ಖರೀದಿಸಿದ್ದರೆ ಅದನ್ನು ಅವರು ಸಾಬೀತು ಮಾಡಲಿ” ಎಂದರು.

“ನಾನೆಂದೂ ಶ್ರೀಮಂತನಾಗುವ ಕನಸು ಕಂಡಿರಲಿಲ್ಲ, ಬಡವರ ಹಣವನ್ನು ದೋಚುವ ಪಾಪವನ್ನೂ ಮಾಡಿಲ್ಲ. ಬಡವರ ಕಲ್ಯಾಣ, ನಮ್ಮ ಮಾತ್ರಭೂಮಿಯ ಗೌರವ ಮತ್ತು ಭದ್ರತೆ ನಮ್ಮ ಉನ್ನತ ಆದ್ಯತೆಗಳಾಗಿವೆ” ಎಂದ ಅವರು, ಇದೇ ಕಾರಣದಿಂದ ಪಾಕಿಸ್ತಾನ ಮತ್ತು ಅದರ ಭಯೋತ್ಪಾದಕರ ದುರಹಂಕಾರ ಮಾಯವಾಗಿದೆ. ಪಾಕಿಸ್ತಾನದಲ್ಲಿ ಬಹಿರಂಗವಾಗಿ ಶಸ್ತ್ರಾಸ್ತ್ರಗಳನ್ನು ಝಳಪಿಸುತ್ತಿದ್ದ ಭಯೋತ್ಪಾದಕರು ಈಗ ಭೂಗತರಾಗಿದ್ದಾರೆ ಮತ್ತು ಮೋದಿಯನ್ನು ತೆಗೆಯಲು ಪ್ರಾರ್ಥನೆ ಮಾಡುತ್ತಿದ್ದಾರೆ. ಅವರು ಚಡಪಡಿಸುತ್ತಿದ್ದಾರೆ ಮತ್ತು ತಮ್ಮ ನಿದ್ರೆಯನ್ನು ಕಳೆದುಕೊಂಡಿದ್ದಾರೆ. ನಾನು ದೇಶದ ಸೇನೆಗೆ ಪೂರ್ಣ ಸ್ವಾತಂತ್ರ್ಯವನ್ನು ನೀಡಿದ್ದೇನೆ. ಹೀಗಾಗಿಯೇ ಮೊದಲು ಸರ್ಜಿಕಲ್, ನಂತರ ವಾಯುದಾಳಿ ನಡೆದವು. ನಾವಿಂದು ಭಯೋತ್ಪಾದನೆಯ ವಿರುದ್ಧದ ಯುದ್ಧವನ್ನು ಗಡಿಯಾಚೆಗೆ ಒಯ್ದಿದ್ದೇವೆ” ಎಂದರು.

ಎಸ್‌ಪಿ-ಬಿಎಸ್‌ಪಿ ಕೂಟವನ್ನು ‘ಮಹಾಮಿಲಾವಟ್’ ಎಂದು ಬಣ್ಣಿಸಿದ ಮೋದಿ, ಯೋಧರ ಧೈರ್ಯವನ್ನು ಪ್ರಶ್ನಿಸಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧವೂ ದಾಳಿ ನಡೆಸಿದರು.

ಸ್ಥಳೀಯ ಗೂಂಡಾಗಳನ್ನು ನಿಯಂತ್ರಿಸಲಾಗದವರು ಭಯೋತ್ಪಾದನೆಗೆ ಕಡಿವಾಣ ಹಾಕಲು ಹೇಗೆ ಸಾಧ್ಯ?, ಇಡೀ ಜಗತ್ತು ಭೀತಿವಾದದಿಂದ ಪೀಡಿತವಾಗಿದೆ ಮತ್ತು ಅದರ ವಿರುದ್ಧ ಹೋರಾಡಲು ದಿಲ್ಲಿಯಲ್ಲಿ ಪ್ರಬಲ, ತುಷ್ಟೀಕರಣ ಮತ್ತು ವೋಟ್ ಬ್ಯಾಂಕ್ ರಾಜಕೀಯದಲ್ಲಿ ನಂಬಿಕೆಯಿರದ ಮತ್ತು ಧೈರ್ಯದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸರಕಾರ ಬೇಕು ಎಂದ ಅವರು, ಈ ಮಹಾಮಿಲಾವಟ್ ಪಕ್ಷಗಳಿಗೆ ಜನತೆ ಮತಗಳ ಮೂಲಕ ತಕ್ಕ ಉತ್ತರ ನೀಡಲಿದೆ ಎಂದರು,

ಪ್ರತಿಪಕ್ಷ ನಾಯಕರು ಜಾತಿ ರಾಜಕೀಯದಲ್ಲಿ ತೊಡಗಿದ್ದಾರೆ ಮತ್ತು ತಮ್ಮ ಬೊಕ್ಕಸಗಳನ್ನು ತುಂಬಿಕೊಂಡಿದ್ದಾರೆ, ಬಂಗಲೆಗಳು ಮತ್ತು ಅರಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ ಎಂದು ಮೋದಿ ಆರೋಪಿಸಿದರು.

ತನ್ನ ಜಾತಿಯನ್ನು ಪ್ರಶ್ನಿಸುವವರ ವಿರುದ್ಧ ದಾಳಿ ನಡೆಸಿದ ಅವರು, ತಾನು ಹಲವಾರು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದೇನೆ, ಇತರರೂ ಸ್ಪರ್ಧಿಸುವಂತೆ ಮಾಡಿದೇನೆ. ಆದರೆ ಜಾತಿಯನ್ನೆಂದಿಗೂ ನೆಚ್ಚಿಕೊಂಡಿರಲಿಲ್ಲ. ತಾನು ತೀರ ಹಿಂದುಳಿದ ಜಾತಿಯ ಕುಟುಂಬದಲ್ಲಿ ಹುಟ್ಟಿರಬಹುದು, ಆದರೆ ಭಾರತವನ್ನು ವಿಶ್ವದಲ್ಲಿ ಮುಂಚೂಣಿಯ ರಾಷ್ಟ್ರವನ್ನಾಗಿಸುವುದು ತನ್ನ ಗುರಿಯಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X