Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್:...

ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್: ಸೊರಬ ಪ.ಪಂ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದ ಚು.ಆಯೋಗ

ವಾರ್ತಾಭಾರತಿವಾರ್ತಾಭಾರತಿ14 May 2019 11:24 PM IST
share

ಶಿವಮೊಗ್ಗ, ಮೇ 14: ಚುನಾವಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ, ಜಿಲ್ಲೆಯ ಸೊರಬ ಪಟ್ಟಣ ಪಂ. ಗೆ ಚುನಾವಣೆಯನ್ನು ನಡೆಸಲು ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಹೊರಡಿಸಿದೆ. ಇದರಿಂದ ಚುನಾವಣಾ ಪ್ರಕ್ರಿಯೆ ಮೇಲೆ ಬಿದ್ದಿದ್ದ ಕರಿನೆರಳು ಸರಿದಂತಾಗಿದ್ದು, ಸ್ಪರ್ಧಾಕಾಂಕ್ಷಿಗಳ ರಾಜಕೀಯ ಚಟುವಟಿಕೆ ಮತ್ತೆ ಬಿರುಸುಗೊಂಡಿದೆ. 

ಜೂನ್ 1 ರಂದು ಬೆಳಿಗ್ಗೆ 7 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಮೇ 21 ಕೊನೆಯ ದಿನವಾಗಿದೆ. ಮೇ 22 ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಮೇ 24 ಉಮೇದುವಾರಿಕೆ ಅರ್ಜಿ ಹಿಂಪಡೆಯಲು ಅಂತಿಮ ದಿನವಾಗಿದೆ. ಜೂನ್ 1 ರಂದು ಮತದಾನ ನಡೆಯಲಿದ್ದು, 3 ರಂದು ಮತ ಎಣಿಕೆ ನಡೆಯಲಿದೆ ಎಂದು ಜಿಲ್ಲಾಡಳಿತ ಪ್ರಕಟನೆಯಲ್ಲಿ ಮಾಹಿತಿ ನೀಡಿದೆ. 

ಮೀಸಲಾತಿ ವಿವರ: ವಾರ್ಡ್ ನಂಬರ್ 1 ನ್ನು ಹಿಂದುಳಿದ ವರ್ಗ (ಎ) ಮಹಿಳೆಯರಿಗೆ ಮೀಸಲಿರಿಸಲಾಗಿದೆ. ವಾರ್ಡ್ ನಂ.2, 3 ಹಾಗೂ 8 ಸಾಮಾನ್ಯ ವರ್ಗಗಳಿಗೆ ಮಿಸಲಿರಿಸಲಾಗಿದೆ. ವಾರ್ಡ್ ನಂ. 4 ಪರಿಶಿಷ್ಠ ಪಂಗಡ, ವಾರ್ಡ್ ನಂ. 5 ಮತ್ತು 9 ಹಿಂದುಳಿದ ವರ್ಗ (ಎ), ನಂ. 7 ಹಿಂದುಳಿದ ವರ್ಗ (ಬಿ), ವಾರ್ಡ್ ನಂ. 6, 10, 11 ಸಾಮಾನ್ಯ ಮಹಿಳೆ ಹಾಗೂ ನಂ. 12 ಪರಿಶಿಷ್ಠ ಜಾತಿಯ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.

ತಡೆಯಾಜ್ಞೆ: ಸೊರಬ ಪಟ್ಟಣ ಪಂ. ಚುನಾವಣೆಯನ್ನು ಅಮಾನತಿನಲ್ಲಿರಸಬೇಕು ಅಥವಾ ತಡೆಹಿಡಿಯಬೇಕು ಎಂದು ಕೋರಿ ಇತ್ತೀಚೆಗೆ ಕೆಲವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಸೊರಬ ಪಟ್ಟಣ ಪಂ. ಅನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಿ ಅಧಿಸೂಚನೆ ಹೊರಡಿಸಿದ ನಂತರವೇ ಚುನಾವಣೆ ನಡೆಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು. 

ಈ ಮೊದಲು ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್, ಚುನಾವಣಾ ಪ್ರಕ್ರಿಯೆಗೆ ನಾಲ್ಕು ವಾರಗಳ ತಡೆಯಾಜ್ಞೆ ನೀಡಿತ್ತು. ವಿಚಾರಣೆ ನಂತರ ಆದೇಶವನ್ನು ಕಾಯ್ದಿರಿಸಿತ್ತು. ಈ ಕಾರಣದಿಂದ ಸೊರಬ ಪ.ಪಂ. ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಸ್ಥಗಿತಗೊಳಿಸಿತ್ತು. ಈ ಸಂಬಂಧ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್ ಅವರಿದ್ದ ರಜಾಕಾಲದ ವಿಶೇಷ ನ್ಯಾಯಪೀಠವು ಸೋಮವಾರ ಪ್ರಕಟಿಸಿದ್ದು, ಚುನಾವಣೆ ನಡೆಸಲು ವಿಧಿಸಿದ್ದ ತಡೆಯಾಜ್ಞೆ ತೆರವುಗೊಳಿಸಿ, ಅರ್ಜಿಯನ್ನು ವಜಾಗೊಳಿಸಿದೆ. 

ಸೊರಬದ ಎಂ.ಡಿ.ಉಮೇಶ್, ಜಗದೀಶ್, ಮಧುರಾಯ್ ಜಿ. ಶೇಟ್ ಎಂಬುವರು ಹೈಕೋರ್ಟ್‍ನಲ್ಲಿ ಈ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಕೀಲ ಎಂ.ಶಿವಪ್ರಕಾಶ್‍ರವರು ವಾದ ಮಂಡಿಸಿದ್ದರು. 

3 ರಂದು ನಡೆಯಲಿದೆ ಮತ ಎಣಿಕೆ
ಸಾಗರ ನಗರಸಭೆ, ಶಿಕಾರಿಪುರ ಪುರಸಭೆ, ಶಿರಾಳಕೊಪ್ಪ ಪಟ್ಟಣ ಪಂ., ಹೊಸನಗರ ಪಟ್ಟಣ ಪಂ. ಗಳಿಗೆ ನಡೆಯುವ ಚುನಾವಣೆಯ ಮತ ಎಣಿಕೆ ಕಾರ್ಯವು ಈ ಮೊದಲು ಮೇ 31 ರಂದು ನಿಗದಿಗೊಳಿಸಲಾಗಿತ್ತು. ಇದನ್ನು ಜೂನ್ 3 ಕ್ಕೆ ಮುಂದೂಡಲಾಗಿದೆ. ತಾಲೂಕು ಕೇಂದ್ರ ಸ್ಥಾನಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ್‍ರವರು ಪ್ರಕಟನೆಯಲ್ಲಿ ಸ್ಪಷ್ಟಪಡಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X