Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ: ನೀರು-ಬರದ ಹೆಸರಲ್ಲಿ 400...

ಬಿಬಿಎಂಪಿ: ನೀರು-ಬರದ ಹೆಸರಲ್ಲಿ 400 ಕೋಟಿ ಕಬಳಿಕೆ; ಎನ್.ಆರ್.ರಮೇಶ್ ಗಂಭೀರ ಆರೋಪ

ವಾರ್ತಾಭಾರತಿವಾರ್ತಾಭಾರತಿ15 May 2019 10:33 PM IST
share
ಬಿಬಿಎಂಪಿ: ನೀರು-ಬರದ ಹೆಸರಲ್ಲಿ 400 ಕೋಟಿ ಕಬಳಿಕೆ; ಎನ್.ಆರ್.ರಮೇಶ್ ಗಂಭೀರ ಆರೋಪ

ಬೆಂಗಳೂರು, ಮೇ 15: ನಗರದಲ್ಲಿ ನೀರಿಗಾಗಿ ತೀವ್ರ ಬರ ಉಂಟಾಗಿರುವ ಸಂದರ್ಭದಲ್ಲಿ ಬಿಬಿಎಂಪಿಯಿಂದ ಕೊಳವೆ ಬಾವಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣದ ಹೆಸರಿನಲ್ಲಿ 400 ಕೋಟಿ ರೂ.ಗಳಿಗೂ ಅಧಿಕ ಹಣವನ್ನು ಕಬಳಿಸಿದ್ದಾರೆ ಎಂದು ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕ ಎನ್.ಆರ್.ರಮೇಶ್ ಇಂದಿಲ್ಲಿ ಆರೋಪಿಸಿದ್ದಾರೆ.

ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಕಷ್ಟದ ಸಂದರ್ಭದಲ್ಲಿ ನೀರು ನೀಡಬೇಕಾದ ಪಾಲಿಕೆ ಅಧಿಕಾರಿಗಳು, ನೀರಿನ ಮೂಲಗಳ ನಿರ್ಮಾಣದ ಹೆಸರಿನಲ್ಲಿ ನೂರಾರು ಕೋಟಿ ಲೂಟಿ ಮಾಡಿರುವುದು ಸರಿಯಲ್ಲ. ಈ ಪ್ರಕರಣದಲ್ಲಿ 40 ಕ್ಕೂ ಅಧಿಕ ಕಾರ್ಪೋರೇಟರ್‌ಗಳು, ಅಧಿಕಾರಿಗಳು, ಗುತ್ತಿಗೆದಾರರು ಪಾಲ್ಗೊಂಡಿದ್ದಾರೆ. ಹೀಗಾಗಿ, ಇದನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.

ಬಿಬಿಎಂಪಿಯ ಐದು ವಲಯಗಳಲ್ಲಿನ 66 ವಾರ್ಡ್‌ಗಳಲ್ಲಿ ಕೊಳವೆ ಬಾವಿಗಳು ಕೊರೆಸಲು ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣದಲ್ಲಿ ಅಕ್ರಮ ನಡೆದಿದೆ. ರಾಜರಾಜೇಶ್ವರಿ ನಗರ, ಯಶವಂತಪುರ, ಬೆಂಗಳೂರು ದಕ್ಷಿಣ, ಕೆ.ಆರ್.ಪುರಂ, ಬ್ಯಾಟರಾಯನಪುರ, ದಾಸರಹಳ್ಳಿ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ವಾರ್ಡ್‌ಗಳಲ್ಲಿ ಹಗರಣ ನಡೆದಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಪಾಲಿಕೆಯಿಂದ ಕಳೆದೆರಡು ವರ್ಷಗಳಿಂದ ಬೋರ್‌ವೆಲ್ ಕೊರೆಸಲು 671 ಕೋಟಿ, ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ಮಾಣಕ್ಕೆ 156 ಕೋಟಿ ಬಿಡುಗಡೆ ಮಾಡಲಾಗಿದೆ ಎಂದಿದೆ. ಎರಡು ವರ್ಷದಲ್ಲಿ 9,588 ಕೊಳೆವೆ ಬಾವಿಗಳನ್ನು ಕೊರೆಸಲಾಗಿದೆ ಹಾಗೂ 9,076 ನೀರಿನ ಘಟಕಗಳನ್ನು ನಿರ್ಮಿಸಲಾಗಿದೆ ಎಂದ ಅವರು, ಈ ಎರಡೂ ಕಾಮಗಾರಿಗಳಿಗೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದರು.

ವಾಸ್ತವವಾಗಿ ಒಂದು ನೀರಿನ ಘಟಕ ನಿರ್ಮಾಣಕ್ಕೆ ತಗಲುವ ವೆಚ್ಚ 7.5 ಲಕ್ಷ ಮಾತ್ರ. ಆದರೆ, ಅಧಿಕಾರಿಗಳು 16 ಲಕ್ಷ ಎಂದು ಹೇಳಿದ್ದಾರೆ ಎಂದ ಅವರು, ಕೊಳವೆಬಾವಿಗಳನ್ನು ಕೊರೆಸದೇ, ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡದೇ ಕೋಟ್ಯಂತರ ರೂ.ಗಳಷ್ಟು ಹಣವನ್ನು ಕಬಳಿಸಿದ್ದಾರೆ. ಹೀಗಾಗಿ, ಇದರಲ್ಲಿ ಪಾಲ್ಗೊಂಡ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಎಲ್ಲ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಅವರ ಆಗ್ರಹಿಸಿದರು.

ನಗರದಾದ್ಯಂತ ಕುಡಿಯುವ ನೀರಿನ ಸಮಸ್ಯೆ ತೀವ್ರ ಸಂಕಷ್ಟದಲ್ಲಿದೆ. ಅಂತರ್ಜಲ ಕುಸಿದು ಹೋಗಿದ್ದು, ನೀರಿಲ್ಲದೆ ಟ್ಯಾಂಕರ್‌ಗಳ ಮೂಲಕ ನೀರನ್ನು ಸರಬರಾಜು ಮಾಡುತ್ತಿದ್ದಾರೆ. ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಒಂದಾಗಿ ಕುಡಿಯುವ ನೀರಿನ ಯೋಜನೆಯಲ್ಲಿ ಕೋಟ್ಯಂತರ ಹಣ ಲೂಟಿ ಮಾಡಿರುವುದು ಸಲ್ಲದು ಎಂದು ರಮೇಶ್ ಹೇಳಿದರು.

ಎಸಿಬಿ, ಲೋಕಾಯುಕ್ತಕ್ಕೆ ದೂರು
ಹೊಸ 5 ವಲಯಗಳ 5 ಜನ ಮುಖ್ಯ ಅಭಿಯಂತರರು, 5 ಜನ ಜಂಟಿ ಆಯುಕ್ತರು ಮತ್ತು 9 ಕಾರ್ಯಪಾಲಕ ಅಭಿಯಂತರರು ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತರ ವಿರುದ್ಧ ಎಸಿಬಿ, ಬಿಎಂಟಿಎಫ್, ಲೋಕಾಯುಕ್ತಕ್ಕೆ ದೂರು ನೀಡಿಲಾಗಿದ್ದು, ಹಗರಣದ 273 ಪುಟಗಳ ದಾಖಲೆ ನೀಡಲಾಗಿದೆ. ಈ ಹಗರಣ ಸಂಬಂಧಿಸಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಫೋನ್ ಮೂಲಕ ಸಂಪರ್ಕಿಸಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X