ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಮೇ 16: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೆಝ್ರನ್ನು ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಆಡಳಿತ ಸುಧಾರಣೆ, ತರಬೇತಿ ಹಾಗೂ ರಾಜಕೀಯ ಪಿಂಚಣಿ)ಯ ಅಪರ ಮುಖ್ಯಕಾರ್ಯದರ್ಶಿ ವಿ.ಮಂಜುಳಾರನ್ನು ಡಿಪಿಎಆರ್ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
Next Story