Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮತ ಎಣಿಕೆ ಕೇಂದ್ರದಲ್ಲಿ ಸೂಚನೆಗಳನ್ನು...

ಮತ ಎಣಿಕೆ ಕೇಂದ್ರದಲ್ಲಿ ಸೂಚನೆಗಳನ್ನು ತಪ್ಪದೇ ಪಾಲಿಸಿ: ಏಜೆಂಟ್‌ಗಳಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ16 May 2019 8:18 PM IST
share
ಮತ ಎಣಿಕೆ ಕೇಂದ್ರದಲ್ಲಿ ಸೂಚನೆಗಳನ್ನು ತಪ್ಪದೇ ಪಾಲಿಸಿ: ಏಜೆಂಟ್‌ಗಳಿಗೆ ಉಡುಪಿ ಜಿಲ್ಲಾಧಿಕಾರಿ ಸೂಚನೆ

ಉಡುಪಿ, ಮೇ 16: ಮೇ 23ರಂದು ನಡೆಯುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದಲ್ಲಿ, ಮತ ಎಣಿಕೆ ಏಜೆಂಟ್‌ಗಳು ಜಿಲ್ಲಾಡಳಿತ ನೀಡುವ ಎಲ್ಲಾ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಗುರುವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಏಜೆಂಟ್‌ರುಗಳ ಸಭೆ ಯಲ್ಲಿ ಅವರು ಮಾತನಾಡುತಿದ್ದರು.

ಮತ ಎಣಿಕೆ ದಿನ, ಮತ ಎಣಿಕೆ ಏಜೆಂಟ್‌ಗಳು ಬೆಳಗ್ಗೆ 6:30ರಿಂದ 7:00 ಗಂಟೆಯ ನಡುವೆ ಮತ ಎಣಿಕೆ ಕೇಂದ್ರದಲ್ಲಿ ತಪ್ಪದೇ ಹಾಜರಿರಬೇಕು. ಚುನಾವಣಾಧಿಕಾರಿ ವಿತರಿಸಿದ ಗುರುತಿನ ಚೀಟಿ ಇಲ್ಲವಾದಲ್ಲಿ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ.ಮತ ಎಣಿಕೆ ಕೇಂದ್ರಕ್ಕೆ ಮೊಬೈಲ್‌ಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಯಾವ ಮೇಜಿನ ಏಜೆಂಟ್ ಆಗಿ ನೇಮಕಗೊಳಿಸಲಾಗಿದೆಯೋ ಅದೇ ಮೇಜಿನ ಬಳಿ ಬೆಳಗ್ಗೆ 7:30ರೊಳಗೆ ಉಪಸ್ಥಿತರಿರಬೇಕು ಎಂದವರು ತಿಳಿಸಿದರು.

ಮತ ಎಣಿಕೆ ಕೇಂದ್ರದಲ್ಲಿ ಅನಗತ್ಯವಾಗಿ ಅತ್ತಿಂದಿತ್ತ ತಿರುಗಾಡಬಾರದು. ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಎಣಿಕೆ ಕೊಠಡಿಯಿಂದ ಹೊರಗೆ ಹೋಗುವಂತಿಲ್ಲ. ಚುನಾವಣಾ ಫಲಿತಾಂಶ ಘೊಷಣೆಯಾದ ನಂತರವೇ ಕೊಠಡಿಯಿಂದ ಹೊರಗೆ ತೆರಳಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಅಂಚೆ ಮತಪತ್ರಗಳ ಎಣಿಕೆಯನ್ನು ಬೆಳಗ್ಗೆ 8 ಗಂಟೆಗೆ ಸರಿಯಾಗಿ ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ನಡೆಸಲಾಗುವುದು. ಅಂಚೆ ಮತಪತ್ರ ಎಣಿಕೆ ಮೇಜಿಗೆ ನೇಮಕಗೊಂಡ ಏಜೆಂಟರಿಗೆ ಮಾತ್ರ ಆ ಕೊಠಡಿಗೆ ಪ್ರವೇಶ ವಿದ್ದು, ಚುನಾವಣಾ ಅ್ಯರ್ಥಿ ಅಥವಾ ಅವರ ಚುನಾವಣಾ ಏಜೆಂಟ್‌ಗೆ ಮಾತ್ರ ಎಲ್ಲಾ ಮತ ಎಣಿಕೆ ಕೊಠಡಿಗಳಿಗೆ ಪ್ರವೇಶಿಸಿ, ಪರಿಶೀಲಿಸಲು ಅವಕಾಶವಿದೆ. ಉಳಿದ ಏಜೆಂಟರಿಗೆ ಇಲ್ಲ ಎಂದು ತಿಳಿಸಿದ ಡಿಸಿ, ಅಂಚೆ ಮತಪತ್ರ ಎಣಿಕೆ ಆರಂಭವಾಗಿ 30 ನಿಮಿಷಗಳ ನಂತರ ಮತಯಂತ್ರಗಳ ಎಣಿಕೆ ವಿಧಾನಸಭಾ ಕ್ಷೇತ್ರವಾರು ಕೊಠಡಿಗಳಲ್ಲಿ ಆರಂಭವಾಗಲಿದೆ ಎಂದರು.

5 ವಿವಿಪ್ಯಾಟ್ ಎಣಿಕೆ: ಅಂತಿಮ ಸುತ್ತಿನ ಮತ ಎಣಿಕೆ ಮುಗಿದ ಕೂಡಲೇ ಪ್ರತೀ ವಿಧಾನಸಭಾ ಕ್ಷೇತ್ರಗಳ ತಲಾ 5 ಮತಗಟ್ಟೆಗಳನ್ನು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಈ ಐದು ಮತಗಟ್ಟೆಗಳ ವಿವಿ ಪ್ಯಾಟ್‌ಗಳ (ಒಟ್ಟು 40) ಪೇಪರ್ ಸ್ಲಿಪ್‌ಗಳನ್ನು ಎಣಿಕೆ ಮಾಡಲಾ ಗುತ್ತದೆ. ತದ ನಂತರ ಚುನಾವಣಾ ವೀಕ್ಷಕರ ಅನುಮೋದನೆ ಪಡೆದು ಫಲಿತಾಂಶವನ್ನು ಘೋಷಿಸಲಾಗುವುದು ಎಂದು ಡಿಸಿ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X