ರಸ್ತೆ ಅಪಘಾತ: ಗಾಯಾಳು ಶಿಕ್ಷಕ ಮೃತ್ಯು

ಬಂಟ್ವಾಳ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ಮುಕುಡ ನಿವಾಸಿ, ಸಿದ್ದಕಟ್ಟೆ ಸೈಂಟ್ ಪ್ಯಾಟ್ರಿಕ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಜಾನ್ ಡಿಸೋಜ(53)ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.
ಮೇ 13ರಂದು ಸಿದ್ದಕಟ್ಟೆ ಚರ್ಚ್ ಮೈದಾನದಲ್ಲಿ ನಿಂತಿರುವಾಗ ಹಿಮ್ಮುಖವಾಗಿ ಚಲಿಸಿದ ಪಿಕಪ್ ವಾಹನ ಜಾನ್ ಅವರಿಗೆ ಢಿಕ್ಕಿಯಾಗಿತ್ತು. ಗಂಭೀರ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೇ 16ರಂದು ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಅವರ ಪತ್ನಿ ಈ ಹಿಂದೆ ಮೃತ ಪಟ್ಟಿದ್ದು, ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





