Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದ 70,116 ಮಕ್ಕಳು ಶಾಲೆಯಿಂದ...

ರಾಜ್ಯದ 70,116 ಮಕ್ಕಳು ಶಾಲೆಯಿಂದ ಹೊರಗೆ: ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್

‘ಶಾಲೆ ಕಡೆ ನನ್ನ ನಡೆ’ ಜನಾಂದೋಲನ

ವಾರ್ತಾಭಾರತಿವಾರ್ತಾಭಾರತಿ18 May 2019 6:17 PM IST
share
ರಾಜ್ಯದ 70,116 ಮಕ್ಕಳು ಶಾಲೆಯಿಂದ ಹೊರಗೆ: ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್

ಬೆಂಗಳೂರು, ಮೇ 18: ಪ್ರಾಥಮಿಕ ಶಿಕ್ಷಣ ಇಲಾಖೆಯಿಂದ 6 ರಿಂದ 14 ವರ್ಷದ ಸುಮಾರು 70,116 ಮಕ್ಕಳು ಶಾಲೆಯಿಂದ ಹೊರಗುಳಿದಿರುವುದನ್ನು ಗುರುತಿಸಲಾಗಿದೆ ಎಂದು ರಾಜ್ಯ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಕಳವಳ ವ್ಯಕ್ತಪಡಿಸಿದರು.

ಶನಿವಾರ ನಗರದ ಬಾಲ ಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಶಾಲೆ ಕಡೆ ನನ್ನ ನಡೆ’ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರಲು ರಾಜ್ಯ ಮಟ್ಟದ ಜನಾಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವ ಜವಾಬ್ದಾರಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ಸಾರ್ವಜನಿಕರ ಸಹಕಾರವೂ ಬಹಳ ಮುಖ್ಯ. ಎಲ್ಲಾ ಮಕ್ಕಳಿಗೂ ಉಚಿತ ಕಡ್ಡಾಯ ಮತ್ತು ಸಮಾನ ಗುಣಮಟ್ಟದ ಶಿಕ್ಷಣ ಪಡೆಯುವ ಹಕ್ಕನ್ನು ಒಂದು ಮೂಲಭೂತ ಹಕ್ಕನ್ನಾಗಿ ಸುಪ್ರೀಂ ಕೋರ್ಟ್ 1993 ರಲ್ಲಿ ಐತಿಹಾಸಿಕ ತೀರ್ಪು ನೀಡಿದೆ ಎಂದು ಹೇಳಿದರು.

ಈ ದಿಸೆಯಲ್ಲಿ ಕೇಂದ್ರ ಸರಕಾರ ರೂಪಿಸಿರುವ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯ್ದೆ-2009 ಅತ್ಯಂತ ಮಹತ್ವದ ಕಾಯ್ದೆಯಾಗಿದೆ. ಪ್ರತಿಯೊಂದು ಮಗುವಿಗೂ ಕಡ್ಡಾಯವಾಗಿ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ 6 ರಿಂದ 14 ವರ್ಷದೊಳಗಿನ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತಂದು ಶಿಕ್ಷಣ ನೀಡುವುದು ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.

ಈ ಅಭಿಯಾನ ಯಶಸ್ವಿಯಾಗಬೇಕಾದರೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಶಾಲೆಯಿಂದ ಸಾವಿರಾರು ಮಕ್ಕಳು ಹೊರಗೆ ಉಳಿದಿದ್ದು, ಈ ಎಲ್ಲ ಮಕ್ಕಳನ್ನು ಶಾಲೆಯ ಮುಖ್ಯವಾಹಿನಿಗೆ ತರಲು ಯೋಜನೆ ರೂಪಿಸಲಾಗಿದ್ದು, ಶಿಕ್ಷಣ ಇಲಾಖೆ ಹಾಗೂ ಇಲಾಖೆಯೇತರ ಸಮನ್ವಯತೆ ಅಗತ್ಯವಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರತಿ ಮನೆ ಮನೆಗೆ ತೆರಳಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವ ಸಂಕಲ್ಪ ಮಾಡಬೇಕೆಂದು ಕರೆ ನೀಡಿದರು.

ರಾಜ್ಯ ಸರಕಾರ ಪ್ರಾಥಮಿಕ ಶಿಕ್ಷಣಕ್ಕೆ ನೀಡುತ್ತಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಶಾಲೆಗೆ ಕರೆತರುವ ಜವಾಬ್ದಾರಿ ಶಿಕ್ಷಣ ಇಲಾಖೆ ಹಾಗೂ ಸಾರ್ವಜನಿಕರ ಮೇಲಿದೆ.

-ಟಿ.ಎಂ.ವಿಜಯಭಾಸ್ಕರ್, ರಾಜ್ಯ ಮುಖ್ಯ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X