Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಧಿಕಾರದಲ್ಲಿರುವ ಪಕ್ಷ ನೋಡಿ ಸರಕಾರದ...

ಅಧಿಕಾರದಲ್ಲಿರುವ ಪಕ್ಷ ನೋಡಿ ಸರಕಾರದ ಕಾರ್ಯ ವೈಖರಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬೇಡಿ: ಸಜನ್ ಪೂವಯ್ಯ

ವಾರ್ತಾಭಾರತಿವಾರ್ತಾಭಾರತಿ20 May 2019 10:22 PM IST
share

ಬೆಂಗಳೂರು, ಮೇ 20: ಅಧಿಕಾರದಲ್ಲಿರುವ ಪಕ್ಷ ನೋಡಿ ಸರಕಾರದ ಕಾರ್ಯ ವೈಖರಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬಾರದು ಎಂದು ಸುಪ್ರೀಂಕೋರ್ಟ್ ಹಿರಿಯ ವಕೀಲ ಸಜನ್ ಪೂವಯ್ಯ ಹೇಳಿದ್ದಾರೆ.

ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಆಯೋಜಿಸಿದ್ದ ಗೋಖಲೆ ಜನ್ಮದಿನ ಸ್ಮರಣಾರ್ಥ ಉಪನ್ಯಾಸದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಉತ್ತಮ ಆಡಳಿತ ಕುರಿತು ಅವರು ಮಾತನಾಡಿದರು. ಉತ್ತಮವಾಗಿ ಯಾರು ಕೆಲಸವನ್ನು ನಿರ್ವಹಿಸುತ್ತಾರೆಯೋ ಅವರಿಗೆ ನಾವು ಮೆಚ್ಚುಗೆಯನ್ನು ವ್ಯಕ್ತಪಡಿಸಬೇಕು. ಅದನ್ನು ಬಿಟ್ಟು ಅಧಿಕಾರದಲ್ಲಿರುವ ಪಕ್ಷ ನೋಡಿ ಸರಕಾರದ ಕಾರ್ಯ ವೈಖರಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಬಾರದು ಎಂದು ಹೇಳಿದರು.

ಆಡಳಿತ ನಡೆಸುವವರು ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಳ್ಳುತ್ತಿಲ್ಲ. ಒಂದು ವೇಳೆ ಬಳಸಿದರೂ ಅದರಿಂದ ಸಂಪೂರ್ಣ ಪ್ರಯೋಜನ ಪಡೆಯುತ್ತಿಲ್ಲ. ಆದರೆ, ಗೂಗಲ್‌ನಂತಹ ಸಂಸ್ಥೆ ಪ್ರತಿ ಬಳಕೆದಾರನ ಬೇಕು-ಬೇಡಗಳನ್ನು ಗಮನದಲ್ಲಿಟ್ಟುಕೊಂಡು ಸೇವೆ ನೀಡುತ್ತಿವೆ. ಅದೇ ರೀತಿಯಲ್ಲಿ ಜನರಿಗೆ ಸೇವೆ ನೀಡುವ ಕ್ರಮಕ್ಕೆ ಸರಕಾರಗಳು ಮುಂದಾಗಬೇಕು. ಆದರೆ, ಜನರ ಬದಲಿಗೆ ಜನಪ್ರತಿನಿಧಿಗಳ ಮನಸ್ಥಿತಿಯಂತೆ ಸರಕಾರ ನಡೆಸಲಾಗುತ್ತಿದೆ ಎಂದರು.

4 ದಶಕಗಳ ಹಿಂದೆ ಪ್ರಪಂಚದ ಎಲ್ಲ ಡಾಟಾಗಳ ಸಂಗ್ರಹ ಕೇವಲ ಅರ್ಧ ಟೆರಾ ಬೈಟ್‌ನಷ್ಟಿತ್ತು. ಆದರೆ, ಈಗ ಅಷ್ಟು ಡಾಟಾ ಒಂದು ಮೊಬೈಲ್ ಫೋನ್‌ನಲ್ಲಿ ಸಂಗ್ರಹಿಸಬಹುದಾಗಿದೆ. ಮಾಹಿತಿ ತಂತ್ರಜ್ಞಾನ ಸಾಕಷ್ಟು ಬದಲಾಗಿದೆ. ಅಲ್ಲದೆ, ಜನರ ಮನಸ್ಥಿತಿ ಅರಿತು ಅಗತ್ಯ ಸೇವೆ ನೀಡುವಲ್ಲಿ ಸರಕಾರಗಳು ವಿಫಲವಾಗಿವೆ ಎಂದರು. ನಮ್ಮ ಸಾಮರ್ಥ್ಯ, ದೌರ್ಬಲ್ಯ ಎರಡೂ ನಾವು ಬಳಸುವ ಮೊಬೈಲ್‌ನಲ್ಲಿ ಶೇಖರವಾಗಿರುತ್ತದೆ. ನಮ್ಮ ಅಭಿಪ್ರಾಯ, ಮನಸ್ಥಿತಿ ಕೂಡ ಅದರಿಂದ ತಿಳಿಯುತ್ತದೆ. ಹೀಗಾಗಿ, ಮಾಹಿತಿ ತಂತ್ರಜ್ಞಾನ ಬಳಕೆ ಕುರಿತು ಎಚ್ಚರಿಕೆಯಿಂದ ಇರಬೇಕು. ದೇಶದಲ್ಲಿ ಅದಕ್ಕೆ ಸಂಬಂಧಿಸಿದ ಸೂಕ್ತ ಕಾನೂನುಗಳು ರಚನೆಯಾಗಬೇಕಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X