Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಆರೋಪ:...

ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಆರೋಪ: ಮೀಟರ್ ಕಡ್ಡಾಯ ಅಳವಡಿಕೆಗೆ ಶಿವಮೊಗ್ಗ ಡಿಸಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ20 May 2019 11:22 PM IST
share
ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಆರೋಪ: ಮೀಟರ್ ಕಡ್ಡಾಯ ಅಳವಡಿಕೆಗೆ ಶಿವಮೊಗ್ಗ ಡಿಸಿ ಸೂಚನೆ

ಶಿವಮೊಗ್ಗ, ಮೇ 20: ಶಿವಮೊಗ್ಗ ನಗರದಲ್ಲಿ ಅಟೋ ಮೀಟರ್ ಹಾಕದೆ ಪ್ರಯಾಣಿಕರಿಂದ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಎಲ್ಲಾ ಆಟೋ ಚಾಲಕರು ಕಡ್ಡಾಯವಾಗಿ ಆಟೋ ಮೀಟರ್ ಹಾಕಬೇಕು ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ತಿಳಿಸಿದರು.

ನಗರದ ಹಳೇ ಡಿ.ಸಿ. ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿತವಾಗಿದ್ದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಪ್ರಯಾಣಿಕರು ಹೇಳಿದರೆ ಮಾತ್ರ ಅಟೋ ಚಾಲಕರು ಮೀಟರ್ ಹಾಕುವಂತಹ ಪರಿಪಾಟವಿದೆ. ಇದು ಸಲ್ಲದು. ಕಡ್ಡಾಯವಾಗಿ ಪ್ರತಿ ಬಾರಿ ಮೀಟರ್ ಹಾಕಬೇಕು. ಎಲ್ಲಾ ಅಟೋಗಳಲ್ಲಿ ಚಾಲಕನ ಹೆಸರು, ವಿಳಾಸ, ಛಾಯಾಚಿತ್ರ, ಅಟೋ ವಿವರ ಸೇರಿದಂತೆ ಇನ್ನಿತರ ಮಾಹಿತಿ ಫಲಕವನ್ನು ಅಳವಡಿಸಬೇಕು. 

ನಗರದಲ್ಲಿ ಅಟೋಗಳ ಸಂಖ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ಇನ್ನು ಮುಂದೆ ಅಟೋ ಖರೀದಿ ಮಾಡುವ ಪೂರ್ವದಲ್ಲಿ ನೋಂದಣಿಗೆ ಅನುಮತಿ ನೀಡುವ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಬಗ್ಗೆ ಪರಿಶೀಲಿಸಲು ಅವರು ಸೂಚನೆ ನೀಡಿದರು.

ಇಲೆಕ್ಟ್ರಿಕಲ್ ಅಟೋ ಅನುಮತಿ: ಶಿವಮೊಗ್ಗ ನಗರದಲ್ಲಿ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಪೂರಕವಾಗಿ ಇಲೆಕ್ಟ್ರಿಕಲ್ ಅಟೋ ಅನುಮತಿಯನ್ನು ಪ್ರಾಯೋಗಿಕವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

ಪ್ರೀ ಪೇಯ್ಡ್ ಕೌಂಟರ್: ರೈಲ್ವೇ ನಿಲ್ದಾಣದಲ್ಲಿ ಮುಂಗಡ ಪಾವತಿ ಅಟೋ ಕೌಂಟರ್ ಆರಂಭಿಸಲು ಅನುಮತಿಯನ್ನು ನೀಡಲಾಗಿದೆ. ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಮಿನಿ ಬಸ್ ಸೇವೆಯನ್ನು ಆರಂಭಿಸಲು ಅನುಮತಿ ನೀಡಲಾಗುವುದು ಎಂದು ಅವರು ಹೇಳಿದರು.

ಹಿರಿಯ ನಾಗರಿಕರ ಗುರುತಿನ ಚೀಟಿಯನ್ನು ತೋರಿಸಿದರೂ ಕೆಲವು ಖಾಸಗಿ ಬಸ್‍ಗಳಲ್ಲಿ ರಿಯಾಯಿತಿ ನೀಡಲು ನಿರಾಕರಿಸಿರುವ ಬಗ್ಗೆ ದೂರುಗಳನ್ನು ಸ್ವೀಕರಿಸಲಾಗಿದ್ದು, ಅಂತಹ ಸಂಸ್ಥೆಗಳಿಗೆ ನೋಟೀಸ್ ಜಾರಿಗೊಳಿಸಬೇಕು. ಎಲ್ಲಾ ಬಸ್ ನಿಲ್ದಾಣಗಳಲ್ಲಿ ಅಂಗವಿಕಲ ಪ್ರಯಾಣಿಕರಿಗಾಗಿ ರ್ಯಾಂಪ್ ಹಾಗೂ ಗಾಲಿಕುರ್ಚಿ ವ್ಯವಸ್ಥೆಯನ್ನು ಕಲ್ಪಿಸಬೇಕು ಜಿಲ್ಲಾಧಿಕಾರಿ ಅವರು ತಿಳಿಸಿದರು.

ರಸ್ತೆ ಉಬ್ಬಿಗೆ ಬಣ್ಣ: ರಿಪ್ಪನ್‍ಪೇಟೆ ರೈಲ್ವೇ ಗೇಟ್ ಬಳಿ ಇರುವ ರಸ್ತೆ ಉಬ್ಬಿಗೆ ಬಣ್ಣ ಬಳಿಯದ ಕಾರಣ ಹಲವಾರು ಅಪಘಾತಗಳು ಸಂಭವಿಸುತ್ತಿರುವ ಕಾರಣ ಸ್ಥಳೀಯ ಬಾಲಕನೋರ್ವ ಸ್ವಯಂಪ್ರೇರಣೆಯಿಂದ ರಸ್ತೆ ಉಬ್ಬಿಗೆ ಬಣ್ಣ ಬಳಿದಿರುವ ವರದಿಗಳು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. 

ಸದರಿ ರಸ್ತೆ ಉಬ್ಬಿಗೆ ಖಾಯಂ ಬಣ್ಣವನ್ನು ಬಳಿದು ಸೂಚನಾ ಫಲಕಗಳನ್ನು ಅಳವಡಿಸಬೇಕು. ಈ ರೀತಿಯ ಅಪಾಯಕಾರಿ ರಸ್ತೆ ಉಬ್ಬುಗಳಿಗೆ ಎಚ್ಚರಿಕೆ ಬಣ್ಣವನ್ನು ಕಡ್ಡಾಯವಾಗಿ ಹಾಕುವಂತೆ ಅವರು ಆ ಬಳಿಕ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಸೂಚನೆ ನೀಡಿದರು.ಪೊಲೀಸ್ ವರಿಷ್ಟಾಧಿಕಾರಿ ಡಾ.ಅಶ್ವಿನಿ, ಪ್ರಾದೇಶಿಕ ಸಾರಿಗೆ ಜಂಟಿ ಆಯುಕ್ತ ಶಿವರಾಜ ಪಾಟೀಲ್, ವಿವಿಧ ಸಾರಿಗೆ ಸಂಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X