Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ...

ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲೇ ಆಗಬೇಕು: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ22 May 2019 10:35 PM IST
share
ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲೇ ಆಗಬೇಕು: ಸಿದ್ದರಾಮಯ್ಯ

ಮೈಸೂರು,ಮೇ.22: ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲಿ ಆಗಲೇ ಬೇಕು. ಈ ಅಭಿಪ್ರಾಯದಲ್ಲಿ ಯಾವುದೇ ಬದಲಾವಣೆ ಇಲ್ಲ. ಏಕರೂಪದ ಶಿಕ್ಷಣ ಎಲ್ಲರಿಗೂ ಸಿಗುವುದು ಅತ್ಯಂತ ಅಗತ್ಯ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದ  ರಾಮಕೃಷ್ಣನಗರದಲ್ಲಿರುವ ನೃಪತುಂಗ ಶಾಲಾ ಆವರಣದಲ್ಲಿ ಬುಧವಾರ ಕನ್ನಡ ವಿಕಾಸ ಶೈಕ್ಷಣಿಕ, ಸಾಮಾಜಿಕ ಸಾಂಸ್ಕೃತಿಕ ಸಂಸ್ಥೆಯಲ್ಲಿ ರಾಜ್ಯದಲ್ಲೇ ಪ್ರಥಮ ಕನ್ನಡ ಮಾಧ್ಯಮದಲ್ಲಿ ವಿಜ್ಞಾನ ಬೋಧಿಸುವ ಏಕೈಕ ಪದವಿಪೂರ್ವ ಕಾಲೇಜು ನೃಪತುಂಗ ಕನ್ನಡ ವಿಜ್ಞಾನ ಮತ್ತು ವಾಣಿಜ್ಯ ಪಿಯು ಕಾಲೇಜಿನ ಪ್ರಾರಂಭೋತ್ಸವಕ್ಕೆ ಕಪ್ಪು ಹಲಗೆಯ ಮೇಲೆ “ಕನ್ನಡದ ವಿಜ್ಞಾನ ಕಾಲೇಜು ಬೆಳೆಯಲಿ” ಎಂದು ಬರೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.

“ಸರ್ಕಾರಿ ಶಾಲೆಗಳಲ್ಲಿ ಪ್ರಾಥಮಿಕ ಶಿಕ್ಷಣದಲ್ಲಿ ಇಂಗ್ಲಿಷ್ ಮಾಧ್ಯಮ ತೆರೆಯಲು ನನ್ನ ವಿರೋಧವಿದೆ. ನೆಲ-ಜಲ-ಭಾಷೆ ಬಗ್ಗೆ ನನಗೆ ಸ್ಪಷ್ಟತೆಯಿದೆ.  ಕರ್ನಾಟಕ ಜನರ ಹಕ್ಕನ್ನು ರಕ್ಷಣೆ ಮಾಡಲೇಬೇಕು. ಮೂಲ ಉದ್ದೇಶಕ್ಕೆ ಯಾವುದೇ ಧಕ್ಕೆ ಬರದಂತೆ ಸ್ಪಷ್ಟತೆ ಇರಬೇಕು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು. 

ರಾಜ್ಯದ ಜನರ ಪರವಾಗಿ ಇರುತ್ತೇನೆ, ಇದ್ದೇನೆ, ಮುಂದೆಯೂ ಇದ್ದೇನೆ. ಬೇರೆ ಏನಾದರೂ ಇದೆಯಾ ಈ ತರ ಹೇಳೋದಿಕ್ಕೆ ಎಂದು ಪ್ರಶ್ನಿಸಿದರು. ಕನ್ನಡ ಮಾಧ್ಯಮದಲ್ಲಿ ವಿಜ್ಞಾನ ಪ.ಪೂ.ಕಾಲೇಜು ಇಡೀ ರಾಜ್ಯದಲ್ಲಿ ಇಂತಹ ಒಂದು ಪ್ರಯತ್ನ ಮೊದಲನೆಯದು. ಇಂಗ್ಲಿಷ್ ವ್ಯಾಮೋಹದ ವಾತಾವರಣವಿದೆ. ಬಹಳ ಜನ ಆರ್ಥಿಕವಾಗಿ ಹಿಂದುಳಿದವರು, ಬಡವರೂ ಕೂಡ ಇಂಗ್ಲಿಷ್ ಶಾಲೆಯಲ್ಲಿಯೇ ಮಕ್ಕಳನ್ನು ಓದಿಸುತ್ತಾರೆ. ಅದಕ್ಕೆ ಕಾರಣ ಮಕ್ಕಳನ್ನು ಇಂಗ್ಲಿಷ್ ಶಾಲೆಯಲ್ಲಿ ಓದಿಸಬೇಕೆಂಬ ವ್ಯಾಮೋಹ. ಕನ್ನಡ ಭಾಷೆ ಬೇರೆ, ಮಾಧ್ಯಮ ಬೇರೆ, ಇಂಗ್ಲಿಷ್ ಒಂದು ಭಾಷೆಯಾಗಿ ಕಲಿಯಲು ಯಾರ ವಿರೋಧವೂ ಇಲ್ಲ. ಆದರೆ ಕೆಲವರಲ್ಲಿ ಗೊಂದಲವಿದೆ. ಯಾರಿಗೆ ಯಾವ ಭಾಷೆಯಲ್ಲಿ ಆಸಕ್ತಿ ಇದೆಯೋ ಅದನ್ನು ಕಲಿಯಲಿ ತಕರಾರಿಲ್ಲ. ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲಿದ್ದರೆ ಹೆಚ್ಚು ಅನುಕೂಲವಾಗಲಿದೆ ಎಂಬುದು ಹಲವರ ಅಭಿಪ್ರಾಯ. ನನ್ನ ಅಭಿಪ್ರಾಯ ಕೂಡ ಎಂದರು.

ಕನ್ನಡ ಹೃದಯದ ಭಾಷೆ. ಹೃದಯದ ಭಾಷೆಯಾಗಲು ಮಾತೃಭಾಷೆಯಿಂದ ಮಾತ್ರ ಸಾಧ್ಯ ಎಂದರು. ಸರ್ಕಾರಿ ಶಾಲೆಗಳನ್ನು ಮುಚ್ಚಲು ಕಾರಣ ಇಂಗ್ಲಿಷ್ ವ್ಯಾಮೋಹ. ಖಾಸಗಿ ಶಾಲೆಗಳಲ್ಲಿರತಕ್ಕ ಗುಣಮಟ್ಟದ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿಯೂ ನೀಡಬೇಕು. ಏಕರೂಪದ ಶಿಕ್ಷಣ ಎಲ್ಲರಿಗೂ ಸಿಗುವುದು ಅತ್ಯಂತ ಅಗತ್ಯ. ಏಕರೂಪದ ಶಿಕ್ಷಣ ಆರ್ಥಿಕ, ಸಾಮಾಜಿಕ ಅಸಮಾನತೆ ಕಡಿಮೆ ಮಾಡಲಿದೆ. ಏಕರೂಪದ ಶಿಕ್ಷಣವಿಲ್ಲದಿದ್ದರೆ ಅಸಮಾನತೆಗೆ ಇಂಬು ಕೊಟ್ಟಂತಾಗುತ್ತದೆ. ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಚಲನೆ ಇಲ್ಲದ ವ್ಯವಸ್ಥೆಯಲ್ಲಿ ಬದಲಾವಣೆ ಸ್ಥಗಿತ. ಕಾರ್ಯಕ್ರಮ ರೂಪಿಸಿ ಜಾರಿಗೆ ಕೊಟ್ಟಾಗ ಮಾತ್ರ ಜಾತಿ ವ್ಯವಸ್ಥೆಯಲ್ಲಿ ಬದಲಾವಣೆ ಸಾಧ್ಯ. ಜಾತಿ-ಜಾತಿ ನಡುವೆ ಸಮಾನತೆ ಬರಬೇಕು. ಸಮಾನತೆ ಬರದಿದ್ದರೆ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಹಳ್ಳಿ ಭಾಷೆ ಒರಟು, ಆದರೆ ನೇರ. ಇದು ಕೆಲವರಿಗೆ ಹಿಡಿಸದೇ ಸಿದ್ದರಾಮಯ್ಯ ದುರಹಂಕಾರಿ ಎಂದರು. ಸೋಗಲಾಡಿಗಳು ದುರಹಂಕಾರಿಗಳಾಗಿರೋದು, ಸ್ವಾಭಿಮಾನಿಗಳಲ್ಲ. ಮಾತೃಭಾಷೆ, ನೆಲ-ಜಲ, ಜನರ ಸಮಸ್ಯೆ ಬಗ್ಗೆ ಚಿಂತನೆ ಮಾಡುತ್ತಿದ್ದೇವ ಎನ್ನುವುದು ಮುಖ್ಯ ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್ ಜಿ.ಸಿದ್ದರಾಮಯ್ಯ, ಮಾತನಾಡಿ ಕನ್ನಡ ಕಲಿಯದಿದ್ದರೂ ಕನ್ನಡ ನಾಡಿನಲ್ಲಿ ನಡೆಯುತ್ತದೆ ಎನ್ನುವ ವಾತಾವರಣವನ್ನು ಕನ್ನಡಿಗರೇ ಸೃಷ್ಟಿಸುತ್ತಿರುವುದು ವಿಷಾದನೀಯ ಎಂದರು. ಕನ್ನಡದೊಳಗೆ ವಿಜ್ಞಾನ-ವಾಣಿಜ್ಯ ಪದವಿಪೂರ್ವ ಕಾಲೇಜು ಆರಂಭಿಸುತ್ತಿರುವುದು ಶ್ಲಾಘನೀಯ. ನೈತಿಕ ಭಯ ಇದ್ದಾಗ ಮಾತ್ರ ಕೆಲಸ ಮಾಡಲು ಸಾಧ್ಯ. ನೈತಿಕ ಭಯ ಹುಟ್ಟಿಸುವ ಎಷ್ಟೋ ಚೇತನಗಳು ನಮ್ಮ ನಾಡಿನಲ್ಲಿ ಕಣ್ಮರೆಯಾಗಿರುವುದು ವಿಷಾದನೀಯ. ಪ್ರಾಥಮಿಕ ಶಿಕ್ಷಣ ದಾರಿತಪ್ಪಿದಂತೆ ಅನಿಸುತ್ತಿದೆ. ಕನ್ನಡದ ದುರ್ಗತಿಯ ಕಾಲಘಟ್ಟದ ಇಂತಹ ಹೊತ್ತಿನಲ್ಲಿ ಆಗ್ರಹದ ನೈತಿಕ ನಿರ್ದೇಶನ ಎಷ್ಟೋ ಕೆಲಸ ಮಾಡಲು ಸಾಧ್ಯ ಎಂದು ಹೇಳಿದರು.

ಯಾವುದೋ ಒಂದು ಖಾಸಗಿ ಸಂಸ್ಥೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವಾಮನೋಧರ್ಮದಿಂದ ಶೈಕ್ಷಣಿಕ ಕಾರ್ಯ ನಡೆಸುತ್ತಿದೆ. ಗೋಕಾಕ್ ಚಳುವಳಿಯ ನಂತರ 1988ರಲ್ಲಿ ಕನ್ನಡಕ್ಕಾಗಿ ಒಂದು ರಚನಾತ್ಮಕ ಸಂಸ್ಥೆಯನ್ನು ಕಟ್ಟುವ ಉದ್ದೇಶದಿಂದ ಆರಂಭಗೊಂಡ ಸಂಸ್ಥೆಯಲ್ಲಿಂದು ವಿಜ್ಞಾನ ವಿಷಯವನ್ನು ಕನ್ನಡದಲ್ಲಿ ಹೇಳುವ ಬದ್ಧತೆಯ ಪ್ರಯತ್ನ ನಡೆದಿದೆ. ಪ್ರೋತ್ಸಾಹ ನೀಡಬೇಕಾಗಿರುವುದು ಸರ್ಕಾರದ ಕರ್ತವ್ಯ ಎಂದರು. ಇಂದು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆ ಕೈಬಿಟ್ಟು ಇಂಗ್ಲಿಷ್ ಹಿಂದಿ ಬಳಸುತ್ತಿರುವುದು ಆಘಾತಕಾರಿ ಬೆಳವಣಿಗೆ ಎಂದರು

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಎಸ್.ಆರ್, ವಿಜ್ಞಾನ ತಂತ್ರಜ್ಞಾನ ಇಲಾಖೆಯ ವಿಶೇಷ ನಿರ್ದೇಶಕ ಡಾ.ಹೆಚ್.ಹೊನ್ನೇಗೌಡ, ಕ.ವಿ.ಶೈ.ಸಾ.ಸಾಂ.ಸಂಸ್ಥೆಯ ಅಧ್ಯಕ್ಷ ಪ.ಮಲ್ಲೇಶ್, ಕಾರ್ಯದರ್ಶಿ ಸ.ರ.ಸುದರ್ಶನ, ಸಹ ಕಾರ್ಯದರ್ಶಿ ಆರ್.ಶೀಲಾ, ಖಜಾಂಚಿ ನಾ.ನಾಗಚಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X