Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದಲ್ಲಿ ಕೇಸರಿ ಪಡೆಗೆ ದಾಖಲೆಯ...

ರಾಜ್ಯದಲ್ಲಿ ಕೇಸರಿ ಪಡೆಗೆ ದಾಖಲೆಯ ಗೆಲುವು: ಮೈತ್ರಿಕೂಟಕ್ಕೆ ತೀವ್ರ ಮುಖಭಂಗ

ವಾರ್ತಾಭಾರತಿವಾರ್ತಾಭಾರತಿ23 May 2019 7:57 PM IST
share
ರಾಜ್ಯದಲ್ಲಿ ಕೇಸರಿ ಪಡೆಗೆ ದಾಖಲೆಯ ಗೆಲುವು: ಮೈತ್ರಿಕೂಟಕ್ಕೆ ತೀವ್ರ ಮುಖಭಂಗ

ಬೆಂಗಳೂರು, ಮೇ 23: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಸೇರಿದಂತೆ 26 ಕ್ಷೇತ್ರಗಳಲ್ಲಿ ಬಿಜೆಪಿ ದಾಖಲೆಯ ಗೆಲುವು ಸಾಧಿಸಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ತಲಾ ಒಂದು ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವ ಮೂಲಕ ತೀವ್ರ ಮುಖಭಂಗವನ್ನು ಅನುಭವಿಸಿದೆ.

2014ರಲ್ಲಿ 17 ಸ್ಥಾನಗಳಲ್ಲಿ ಗೆದಿದ್ದ ಬಿಜೆಪಿ ಇದೀಗ 25 ಸ್ಥಾನಗಳಲ್ಲಿ ಜಯಭೇರಿ ಬಾರಿಸುವ ಮೂಲಕ 9 ಸ್ಥಾನಗಳನ್ನು ಹೆಚ್ಚಿಸಿಕೊಂಡಿದೆ. ಕಳೆದ ಚುನಾವಣೆಯಲ್ಲಿ 9 ಸ್ಥಾನದಲ್ಲಿದ್ದ ಕಾಂಗ್ರೆಸ್-1 ಹಾಗೂ ಇಬ್ಬರು ಸಂಸದರನ್ನು ಹೊಂದಿದ್ದ ಜೆಡಿಎಸ್-1 ಸ್ಥಾನಕ್ಕಿಳಿದಿದ್ದು, ಭಾರೀ ಮಾರ್ಮಾಘಾತವನ್ನು ಅನುಭವಿಸಿದೆ.

ಹಾಲಿ ಸಂಸದರಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್.ಮುನಿಯಪ್ಪ, ವೀರಪ್ಪ ಮೊಯ್ಲಿ, ಧೃವನಾರಾಯಣ್, ಪ್ರಕಾಶ್ ಹುಕ್ಕೇರಿ, ವಿ.ಎಸ್.ಉಗ್ರಪ್ಪ, ಬಿ.ವಿ.ನಾಯಕ್, ಚಂದ್ರಪ್ಪ ಸೇರಿದಂತೆ ಎಲ್ಲರೂ ಅನಿರೀಕ್ಷಿತ ರೀತಿಯಲ್ಲಿ ಹೀನಾಯವಾಗಿ ಸೋಲನ್ನು ಅನುಭವಿಸಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜ್ ವಿರುದ್ಧ 12,387 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ಇದೇ ವೇಳೆ ದೇಶದ ಗಮನ ಸೆಳೆದಿದ್ದ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ 1.25 ಲಕ್ಷಕ್ಕೂ ಅಧಿಕ ಮತಗಳಿಂದ ಸೋಲುಂಡಿದ್ದಾರೆ.

ಉತ್ತರ ಕನ್ನಡ ಕ್ಷೇತ್ರದಿಂದ ಬಿಜೆಪಿಯ ಅನಂತ ಕುಮಾರ್ ಹೆಗಡೆ ಅತ್ಯಂತ ಹೆಚ್ಚು 4.79 ಲಕ್ಷಕ್ಕೂ ಅಧಿಕ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿಯ ಶೋಭಾ ಕರಂದ್ಲಾಜೆ 3.42ಲಕ್ಷಕ್ಕೂ ಹೆಚ್ಚು, ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿಯ ‘ಹೊಸಮುಖ’ ತೇಜಸ್ವಿಸೂರ್ಯ 3.31ಲಕ್ಷಕ್ಕೂ ಅಧಿಕ ಮತಗಳನ್ನು ಗಳಿಸುವ ಮೂಲಕ ಸಂಸತ್ ಪ್ರವೇಶ ಮಾಡಲಿದ್ದಾರೆ.

ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿಗಳು ಭಾರೀ ಅಂತರದಿಂದ ಗೆಲುವು ಸಾಧಿಸಿದ್ದಾರೆ. ತುಮಕೂರು ಮತ್ತು ಮಂಡ್ಯ ಕ್ಷೇತ್ರದಲ್ಲಿ ಆರಂಭಕ್ಕೆ ಅಲ್ಪ ಮುನ್ನಡೆ ಸಾಧಿಸಿದ್ದ ದೇವೇಗೌಡ ಮತ್ತು ನಿಖಿಲ್ ಮುಖಭಂಗ ಅನುಭವಿಸಿದ್ದಾರೆ.

ಚಾಮರಾಜನಗರ ಕ್ಷೇತ್ರದಲ್ಲಿ ಮುನ್ನಡೆ ಗಳಿಸಿ ಗೆಲುವಿನ ಹೊಸ್ತಿಲಿನಲ್ಲಿದ್ದ ಮೈತ್ರಿ ಅಭ್ಯರ್ಥಿ ಧೃವನಾರಾಯಣ್ ಕೊನೆಯ ಎರಡು ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ್ದು, ಕೇವಲ 1,347 ಮತಗಳ ಅಂತರದಿಂದ ಬಿಜೆಪಿಯ ವಿ.ಶ್ರೀನಿವಾಸ ಪ್ರಸಾದ್ ವಿರುದ್ಧ ಸೋತಿದ್ದಾರೆ.

ರಾಜ್ಯವನ್ನು ಪ್ರತಿನಿಧಿಸುತ್ತಿದ್ದ ಕೇಂದ್ರ ಸಚಿವರೂ ಆಗಿದ್ದ ಡಿ.ವಿ.ಸದಾನಂದಗೌಡ, ಅನಂತಕುಮಾರ್ ಹೆಗಡೆ ಹಾಗೂ ರಮೇಶ್ ಜಿಗಜಿಣಗಿ ಜಯಭೇರಿ ಬಾರಿಸಿದ್ದಾರೆ. ಇದೇ ವೇಳೆ ಹೊಸಮುಖಗಳಾದ ತೇಜಸ್ವಿ ಸೂರ್ಯ, ಪ್ರಜ್ವಲ್ ರೇವಣ್ಣ, ಸುಮಲತಾ, ಎ.ನಾರಾಯಣ ಸ್ವಾಮಿ, ಎಸ್.ಮುನಿಸ್ವಾಮಿ, ಉಮೇಶ್ ಜಾಧವ್ ಮತ್ತು ಬಿ.ಎನ್. ಬಚ್ಚೇಗೌಡ ಮೊದಲ ಬಾರಿಗೆ ಸಂಸತ್ ಪ್ರವೇಶ ಪಡೆದಿದ್ದಾರೆ.

ಬೀದರ್-ಭಗವಂತ ಖೂಬಾ, ಕೊಪ್ಪಳ-ಕರಡಿ ಸಂಗಣ್ಣ, ಬಳ್ಳಾರಿ-ವೈ. ದೇವೇಂದ್ರಪ್ಪ, ಹಾವೇರಿ-ಶಿವಕುಮಾರ್ ಉದಾಸಿ, ಧಾರವಾಡ-ಪ್ರಹ್ಲಾದ್ ಜೋಶಿ, ಉತ್ತರ ಕನ್ನಡ-ಅನಂತಕುಮಾರ್ ಹೆಗಡೆ, ಶಿವವಮೊಗ್ಗ-ಬಿ.ವೈ.ರಾಘವೇಂದ್ರ, ಉಡುಪಿ-ಚಿಕ್ಕಮಗಳೂರು-ಶೋಭಾ ಕರಂದ್ಲಾಜೆ, ಬೆಂಗಳೂರು ಉತ್ತರ-ಡಿ.ವಿ. ಸದಾನಂದಗೌಡ, ಬೆಂ.ಕೇಂದ್ರ-ಪಿ.ಸಿ.ಮೋಹನ್, ಬೆಂಗಳೂರು ದಕ್ಷಿಣ-ತೇಜಸ್ವಿ ಸೂರ್ಯ, ಚಿಕ್ಕಬಳ್ಳಾಪುರ-ಬಿ.ಎನ್.ಬಚ್ಚೇಗೌಡ, ಚಿಕ್ಕೋಡಿ-ಅಣ್ಣಸಾಹೇಬ್ ಜೊಲ್ಲೆ, ಬೆಳಗಾವಿ- ಸುರೇಶ್ ಅಂಗಡಿ, ಬಾಗಲಕೋಟೆ-ಪಿ.ಸಿ.ಗದ್ದಿಗೌಡರ್.

ವಿಜಯಪುರ-ರಮೇಶ್ ಜಿಗಜಿಣಗಿ, ಗುಲ್ಬರ್ಗ-ಡಾ.ಉಮೇಶ್‌ಬಜಾಧವ್, ರಾಯಚೂರು- ರಾಜಾಅಮರೇಶ್ ನಾಯಕ್, ದಾವಣಗೆರೆ-ಜಿ.ಎಂ.ಸಿದ್ದೇಶ್ವರ್, ದಕ್ಷಿಣ ಕನ್ನಡ-ನಳೀನ್ ಕುಮಾರ್ ಕಟೀಲ್, ತುಮಕೂರು-ಜಿ.ಎಸ್.ಬಸವರಾಜು, ಮಂಡ್ಯ-ಸುಮಲತಾ ಅಂಬರೀಶ್, ಮೈಸೂರು ಕೊಡಗು-ಪ್ರತಾಪಸಿಂಹ, ಚಾಮರಾಜನಗರ-ವಿ.ಶ್ರೀನಿವಾಸ ಪ್ರಸಾದ್, ಕೋಲಾರ-ಎಸ್.ಮುನಿಸ್ವಾಮಿ, ಚಿತ್ರದುರ್ಗ-ಎ.ನಾರಾಯಣಸ್ವಾಮಿ, ಬೆಂ.ಗ್ರಾಮಾಂತರ-ಡಿ.ಕೆ. ಸುರೇಶ್(ಕಾಂಗ್ರೆಸ್) ಹಾಗೂ ಹಾಸನ-ಪ್ರಜ್ವಲ್ ರೇವಣ್ಣ(ಜೆಡಿಎಸ್)ಗೆಲುವು ಸಾಧಿಸಿದ್ದಾರೆ.

ನಾಳೆ ಸಚಿವ ಸಂಪುಟ ಸಭೆ

ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಭಾರಿ ಮುಖಭಂಗ ಅನುಭವಿಸಿರುವ ಮೈತ್ರಿ ಸರಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವಿರುದ್ಧ ಕೆಲ ಶಾಸಕರು ಬಹಿರಂಗ ವಾಗ್ದಾಳಿ ಆರಂಭಿಸಿದ್ದಾರೆ. ಈ ಮಧ್ಯೆ ಸಿಎಂ ಕುಮಾರಸ್ವಾಮಿ ನಾಳೆ(ಮೇ24) ಅನೌಪಚಾರಿಕ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಅಲ್ಲದೆ, ಜೆಡಿಎಸ್ ವರಿಷ್ಠ ದೇವೇಗೌಡ ತಮ್ಮ ನಿವಾಸದಲ್ಲಿ ಕುಮಾರಸ್ವಾಮಿ ಮತ್ತು ಪಕ್ಷದ ಶಾಸಕರ ಸಭೆಯನ್ನು ಕರೆದಿದ್ದಾರೆ. ಫಲಿತಾಂಶದ ಬೆನ್ನಲ್ಲೆ ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ಸಚಿವರು-ಶಾಸಕರು ಸಭೆ ನಡೆಸಿದ್ದಾರೆ. ಕಾಂಗ್ರೆಸ್‌ನ ನಿಲುವು ಗಮನಿಸಿ, ಸಿಎಂ ಕುಮಾರಸ್ವಾಮಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X