Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯ ರಾಜಕೀಯ...

ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯ ರಾಜಕೀಯ ನಾಯಕರು ಪ್ರತಿಕ್ರಿಯಿಸಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ23 May 2019 8:19 PM IST
share
ಚುನಾವಣೆ ಫಲಿತಾಂಶದ ಬಗ್ಗೆ ರಾಜ್ಯ ರಾಜಕೀಯ ನಾಯಕರು ಪ್ರತಿಕ್ರಿಯಿಸಿದ್ದು ಹೀಗೆ...

ಬೆಂಗಳೂರು, ಮೇ 23: ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದು ಮತ್ತೊಮ್ಮೆ ಅಧಿಕಾರಕ್ಕೇರಲು ರೆಡಿಯಾಗಿದೆ. ಫಲಿತಾಂಶದ ಬಗ್ಗೆ ರಾಜ್ಯ ರಾಜಕೀಯ ನಾಯಕರು ಈ ರೀತಿ ಪ್ರತಿಕ್ರಿಯಿಸಿದ್ದಾರೆ...

ಮಂಡ್ಯದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ?

-ಕೆ.ಎಸ್.ಈಶ್ವರಪ್ಪ, ಬಿಜೆಪಿ ಶಾಸಕ

ಕುವೆಂಪು ಸಂದೇಶ ಪಾಲಿಸಲಿ

ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಮತ್ತು ಮುಖ್ಯ ಪಾತ್ರವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಮುಂದಿನ 5 ವರ್ಷ ಜನ ಮೆಚ್ಚುವಂತಹ, ಇಡೀ ದೇಶವನ್ನು ಕುವೆಂಪು ಅವರು ಹೇಳಿರುವಂತೆ ಸರ್ವಜನಾಂಗ ಶಾಂತಿಯ ತೋಟವನ್ನಾಗಿ ಮಾಡುವ ರೀತಿಯಲ್ಲಿ ಆಡಳಿತ ನೀಡಲಿ ಎಂದು ಹಾರೈಸುತ್ತೇನೆ.

-ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ

ಅಭಿನಂದನೆ; ಸೋಲಿನ ಕುರಿತು ಚರ್ಚೆ

ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ. ಈ ಫಲಿತಾಂಶ ಗೌರವಿಸುತ್ತೇನೆ. ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೆ ನನ್ನ ಶುಭಾಶಯಗಳು. ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಸಲ್ಲಿಸುತ್ತೇನೆ. ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡು ಪಕ್ಷ ನಾಯಕರು ಚರ್ಚಿಸುತ್ತೇವೆ.

-ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

ತಲೆಬಾಗುತ್ತೇನೆ

ಜನಾದೇಶಕ್ಕೆ ನಾನು ತಲೆಬಾಗುತ್ತೇನೆ. ಇಡೀ ದೇಶದಲ್ಲಿ ಅವರ ಮ್ಯಾಜಿಕ್ ನೆಡೆದಿದೆ. ನನ್ನ ಸೋಲಿಸಲು ಷಡ್ಯಂತ್ರ ನಡೆದಿದೆ. ಮುಂದಿನ ದಿನಗಳಲ್ಲಿ ಪಕ್ಷದ ಬಲವರ್ಧನೆಗೆ ಶ್ರಮಿಸುವೆ.

-ಕೆ.ಎಚ್.ಮುನಿಯಪ್ಪ, ಪರಾಜಿತ ಸಂಸದ

ಬಿಜೆಪಿ ಗೆಲುವಿಗೆ ಕಾರಣವೇನು ಎಂಬುದನ್ನು ಆ ಪಕ್ಷದವರೇ ಹೇಳಬೇಕು. ನಾವು ಜಾತಿ, ಧರ್ಮದ ಮೇಲೆ ಚುನಾವಣೆ ಮಾಡಲಿಲ್ಲ. ಹೀನಾಯ ಸೋಲು ಕುರಿತು ಕಾಂಗ್ರೆಸ್ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ.

-ಬಿ.ಕೆ.ಹರಿಪ್ರಸಾದ್, ಕಾಂಗ್ರೆಸ್ ನಾಯಕ

ಮಾತದಾರರ ತೀರ್ಪು

ಮತದಾರರ ತೀರ್ಪನ್ನು ತಲೆ ಭಾಗಿ ಸ್ವೀಕರಿಸುತ್ತೇವೆ. ಮೈತ್ರಿ ಸೋಲಿನ ಹೊಣೆಯನ್ನು ಎರಡು ಪಕ್ಷಗಳು ಹೊತ್ತುಕೊಳ್ಳುತ್ತೇವೆ.

 -ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಾಧ್ಯಕ್ಷ

ಕ್ಷಮೆ ಕೇಳಬೇಕು

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದ ಜೆಡಿಎಸ್, ಕಾಂಗ್ರೆಸ್ ನಾಯಕರಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಮೋದಿಯವರನ್ನು ಟೀಕಿಸಿದ ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಬಹಿರಂಗವಾಗಿ ಕ್ಷಮೆ ಕೇಳಬೇಕು.

-ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ಎಲ್ಲರಿಗೂ ಅಭಿನಂದನೆ ನಾನು ತುಂಬಾ ಸಾಧನೆ ಮಾಡಿದ್ದೇನೆ. ಇಡೀ ರಾಜ್ಯದ ಜನತೆ ನನ್ನ ಗೆಲುವಿಗೆ ಹಾರೈಸಿದ್ದಾರೆ. ನನ್ನನ್ನು ಆಶೀರ್ವದಿಸಿದ ಎಲ್ಲ ಮತದಾರರಿಗೂ ಅಭಿನಂದನೆಗಳು. ನನ್ನ ಜತೆ ಶ್ರಮಿಸಿದ ನಟರಾದ ದರ್ಶನ್ ಮತ್ತು ಯಶ ಅವರಿಗೆ ಚಿರಋಣಿ. ನನ್ನ ಗೆಲುವು ರಾಜ್ಯದ ಜನತೆಗೆ ಅರ್ಪಣೆ.

-ಸುಮಲತಾ, ಮಂಡ್ಯ ಕ್ಷೇತ್ರದ ವಿಜೇತ ಅಭ್ಯರ್ಥಿ

ಮೋದಿ-ಶಾಗೆ ಧನ್ಯವಾದ

ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಅವಕಾಶ ನೀಡಿದ ಪ್ರಧಾನಿ ಮೋದಿಯವರಿಗೆ, ಅಮಿತ್ ಶಾ, ಯಡಿಯೂರಪ್ಪನವರಿಗೆ ಧನ್ಯವಾದಗಳು. ನನ್ನನ್ನು ಆಶೀರ್ವದಿಸಿದ ಎಲ್ಲ ಮತದಾರರಿಗೆ ಧನ್ಯವಾದ. ನನ್ನ ಬೆನ್ನಿಗೆ ನಿಂತು ಪ್ರೋತ್ಸಾಹಿಸಿದವರಿಗೆಲ್ಲ ಈ ಗೆಲುವು ಅರ್ಪಣೆ.

 -ತೇಜಸ್ವಿ ಸೂರ್ಯ, ವಿಜೇತ ಅಭ್ಯರ್ಥಿ

‘ಮಾತುಕತೆ ಮಾಡಿಲ್ಲ’

ಪಕ್ಷದ ಮುಖಂಡರಿಗೆ ಗೌರವ ಕೊಟ್ಟು ಉಪಚುನಾವಣೆಗೆ ಶಿವರಾಮೇಗೌಡರಿಗೆ ಬೆಂಬಲ ಸೂಚಿಸಲಾಗಿತ್ತು. ಇಷ್ಟಾದರೂ ಕುಮಾರಸ್ವಾಮಿ ನಮ್ಮನ್ನು ಕರೆದು ಮಾತುಕತೆ ಮಾಡಿಲ್ಲ. ಮಾತನಾಡಿಸದೇ ನಾನು ಹೇಗೆ ಪ್ರಚಾರಕ್ಕೆ ಹೋಗಲಿ. ಮಂಡ್ಯದ ಸೋಲಿನ ಹೊಣೆಯನ್ನು ಕುಮಾರಸ್ವಾಮಿ ಅವರೇ ಹೊತ್ತುಕೊಳ್ಳಬೇಕು. ಸುಮಲತಾ ಮಂಡ್ಯ ಜಿಲ್ಲೆಯ ಜನರಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು.

 -ಚೆಲುವರಾಯಸ್ವಾಮಿ, ಕಾಂಗ್ರೆಸ್ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X