Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆಯಲ್ಲಿ ಸತತ ನಾಲ್ಕನೇ ಬಾರಿ...

ದಾವಣಗೆರೆಯಲ್ಲಿ ಸತತ ನಾಲ್ಕನೇ ಬಾರಿ ಗೆಲುವಿನ ನಗೆ ಬೀರಿದ ಜಿ.ಎಂ.ಸಿದ್ದೇಶ್ವರ್

ವಾರ್ತಾಭಾರತಿವಾರ್ತಾಭಾರತಿ23 May 2019 11:46 PM IST
share
ದಾವಣಗೆರೆಯಲ್ಲಿ ಸತತ ನಾಲ್ಕನೇ ಬಾರಿ ಗೆಲುವಿನ ನಗೆ ಬೀರಿದ ಜಿ.ಎಂ.ಸಿದ್ದೇಶ್ವರ್

ದಾವಣಗೆರೆ, ಮೇ 23: ಬಿಜೆಪಿ ಸತತ ನಾಲ್ಕನೇ ಬಾರಿ ಗೆಲುವು ಸಾಧಿಸುವ ಮೂಲಕ ಮತ್ತೊಮ್ಮೆ ದೇವನಗರಿ ಬಿಜೆಪಿ ಭದ್ರಕೋಟೆ ಎಂಬುದನ್ನು ಸಾಬೀತುಪಡಿಸಿದೆ. 

ವಾಣಿಜ್ಯ ನಗರಿ ದಾವಣಗೆರೆ ಜಿಲ್ಲೆಯಲ್ಲಿ ಮತ್ತೊಮ್ಮೆ ಕಮಲ ಅರಳಿದ್ದು, ಬಿಜೆಪಿಯ ಸಂಸದ ಕಳೆದ ಬಾರಿ 17 ಸಾವಿರ ಅಂತರದಲ್ಲಿ ಗೆದ್ದಿದ್ದ ಸಂಸದ ಸಿದ್ದೇಶ್ವರ ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಈ ಬಾರಿ 1.69 ಲಕ್ಷ ಅಂತರದಲ್ಲಿ ಭರ್ಜರಿ ಗೆಲವು ಸಾಧಿಸಿದ್ದಾರೆ. ಈ ಮೂಲಕ ಸತತ ನಾಲ್ಕನೇ ಬಾರಿ ಸಂಸದರಾಗಿ ಸಂಸತ್ ಪ್ರವೇಶಿಸಿದ್ದಾರೆ.

2019ರ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಬಿ. ಮಂಜಪ್ಪ ವಿರುದ್ಧ ಬಿಜೆಪಿ ಅಭ್ಯರ್ಥಿ ಸಂಸದ ಸಿದ್ದೇಶ್ವರ 6,52,996 ಮತ ಪಡೆಯುವ ಮೂಲಕ 1.69 ಲಕ್ಷ ( 169,702) ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ. ಮೈತ್ರಿ ಅಭ್ಯರ್ಥಿ ಹೆಚ್.ಬಿ.ಮಂಜಪ್ಪ 483294 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. 

2004 ರಲ್ಲಿ 3,70,499 ಮತ ಪಡೆದು 32,676 ಅಂತರದ ಜಯ ಸಾಧಿಸಿದ್ದರು. ಬಳಿಕ 2009ರ ಚುನಾವಣೆಯಲ್ಲಿ 2024 ಮತಗಳ ಅಂತರಗಳಿಂದ, 2014 ರಲ್ಲಿ 17,607 ಮತಗಳ ಅಂತರದಿಂದ ಗೆಲುವು ಕಂಡಿದ್ದರು. ಜಿ.ಮಲ್ಲಿಕಾರ್ಜುನಪ್ಪ ಅವರ ಮರಣಾನಂತರ ಪಕ್ಷದ ತೀರ್ಮಾನದಂತೆ 2004ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಗೆಲುವು ಕಂಡ ಜಿಎಂಎಸ್ ನಂತರ ಮೂರು ಚುನಾವಣೆಗಳಲ್ಲೂ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. 

ಸಂಸದ ಜಿ.ಎಂ. ಸಿದ್ದೇಶ್ವರ್ ತಂದೆ ದಿ.ಜಿ.ಮಲ್ಲಿಕಾರ್ಜುನಪ್ಪ ಅವರ ಹಾದಿಯಲ್ಲೇ ಸಂಸತ್ ಪ್ರವೇಶಿಸುವ ಮೂಲಕ ಸತತ 4ನೇ ಬಾರಿ ಗೆಲುವು ದಾಖಲಿಸಿ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದಾರೆ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ದಿ. ಮಲ್ಲಿಕಾರ್ಜುನಪ್ಪ 1996, 1999ರಲ್ಲಿ ಎರಡು ಬಾರಿ ವಿಜಯ ಪತಾಕೆ ಹಾರಿಸಿದ್ದರು.

ಮೊದಲ ಹಂತದಿಂದಲೇ ಮುನ್ನಡೆ:  ಬಿಜೆಪಿ ಅಭ್ಯರ್ಥಿ ಜಿ.ಎಂ. ಸಿದ್ದೇಶ್ವರ್ ಮತದಾನ ಎಣಿಕೆಯ ಮೊದಲ ಹಂತದಿಂದಲೇ ಸಂಪೂರ್ಣ ಮುನ್ನಡೆ ಕಾಯ್ದುಕೊಂಡರು. ಮೊದಲ ಹಂತದಲ್ಲಿ 9101 ಮುನ್ನಡೆ ಪಡೆದರೆ, 2ನೇ ಹಂತದ ಎಣಿಕೆಯಲ್ಲಿ 23650, 3ನೇ ಹಂತದಲ್ಲಿ 30,009 ಮುನ್ನಡೆ, 4ನೇ ಹಂತದಲ್ಲಿ 41,956, 5ನೇ ಹಂತದಲ್ಲಿ 43,741, 6ನೇ ಹಂತದಲ್ಲಿ 47237 ಹಾಗೂ 7ನೇ ಹಂತದಲ್ಲಿ 53,789 ಮತಗಳಲ್ಲಿ ಮುನ್ನಡೆ ಕಂಡರು.

8ನೇ ಹಂತದಲ್ಲಿ 54144, 9ನೇ ಹಂತದಲ್ಲಿ 58861, 10ನೇ ಸುತ್ತಿನ ಮತ ಎಣಿಕೆಯಲ್ಲಿ 70487, 11ನೇ ಸುತ್ತಿನಲ್ಲಿ 84265, 12ನೇ ಸುತ್ತಿನಲ್ಲಿ 96084, 13ನೇ ಸುತ್ತಿನಲ್ಲಿ 1,07,415 14ನೇ ಸುತ್ತಿನಲ್ಲಿ 1,21,841, 15ನೇ ಸುತ್ತಿನಲ್ಲಿ 1,35,385, 16 ನೇ ಸುತ್ತಿನಲ್ಲಿ 144,088, 17 ನೇ ಸುತ್ತಿನಲ್ಲಿ 158,943, 18 ನೇ ಸುತ್ತಿನಲ್ಲಿ 166,074 ಹಾಗೂ 19 ನೇ ಸುತ್ತಿನಲ್ಲಿ 168,670 ಮುನ್ನಡೆ ಸಾಧಿಸಿದರು. ಸಂಸದ ಸಿದ್ದೇಶ್ವರ 1643 ಅಂಚೆ ಮತ ಪಡೆದಿದ್ದಾರೆ. ಈ ಮೂಲಕ 169,702 ಮತ ಪಡೆಯವ ಮೂಲಕ ಭರ್ಜರಿ ಗೆಲವು ಸಾಧಿಸಿದ್ದಾರೆ.

ಎಣಿಕೆ ಕೇಂದ್ರದತ್ತ ಸುಳಿಯದ ಜನತೆ
ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ದಾವಣಗೆರೆ ವಿವಿ ಆವರಣದಲ್ಲಿ ನಡೆಯುತ್ತಿದ್ದರೂ ಯಾವುದೇ ಪಕ್ಷಗಳ ಕಾರ್ಯಕರ್ತರಾಗಲೀ, ಅಭಿಮಾನಿಗಳಾಗಲೀ ಆಗಮಿಸಿರಲಿಲ್ಲ. ಮತ ಎಣಿಕೆ ಕೇಂದ್ರದ ಹೊರಗಡೆ ಯಾವುದೇ ಬಾವುಟವಾಗಲೀ, ಯಾವುದೇ ವಿಜಯೋತ್ಸವದ ಘೋಷಣೆಗಳಾಗಲೀ ಕಂಡುಬರಲಿಲ್ಲ. ಮತ ಎಣಿಕೆ ಕೇಂದ್ರಕ್ಕೆ ಬೆಳಗ್ಗೆ ಬಿಜೆಪಿ ಅಭ್ಯರ್ಥಿ ಜಿ.ಎಂ.ಸಿದ್ದೇಶ್ವರ್ ಬಿಟ್ಟರೆ ಬೇರೆ ಯಾವ ಪಕ್ಷದ ಅಭ್ಯರ್ಥಿಗಳು ಸಹ ಇತ್ತ ಸುಳಿಯಲೇ ಇಲ್ಲ. ಬಿಸಿಲ ಬೇಗೆಗೆ ಕಾರ್ಯಕರ್ತರು ಕೇಂದ್ರದತ್ತ ಆಗಮಿಸಿಲ್ಲ ಎಂದು ಪಕ್ಷಗಳ ಮುಖಂಡರು ಸಮಜಾಯಿಸಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X