Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸೆಸೆಲ್ಸಿ ಮರು ಮೌಲ್ಯಮಾಪನ : ಆಳ್ವಾಸ್‍ನ...

ಎಸೆಸೆಲ್ಸಿ ಮರು ಮೌಲ್ಯಮಾಪನ : ಆಳ್ವಾಸ್‍ನ ಸುಜ್ಞಾನ್ ಶೆಟ್ಟಿ ರಾಜ್ಯಕ್ಕೆ ಪ್ರಥಮ

ವಾರ್ತಾಭಾರತಿವಾರ್ತಾಭಾರತಿ24 May 2019 5:55 PM IST
share
ಎಸೆಸೆಲ್ಸಿ ಮರು ಮೌಲ್ಯಮಾಪನ : ಆಳ್ವಾಸ್‍ನ ಸುಜ್ಞಾನ್ ಶೆಟ್ಟಿ ರಾಜ್ಯಕ್ಕೆ ಪ್ರಥಮ

ಮೂಡುಬಿದಿರೆ : ಮಾರ್ಚ್ ತಿಂಗಳಿನಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಆಳ್ವಾಸ್‍ನ ಸುಜ್ಞಾನ್ ಆರ್.ಶೆಟ್ಟಿ ಅವರು 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾದಾಗ ಅದರಲ್ಲಿ ಆಳ್ವಾಸ್‍ನ ಸುಜ್ಞಾನ್ ಆರ್.ಶೆಟ್ಟಿ ಕನ್ನಡ ಮತ್ತು ಇಂಗ್ಲಿಷ್ ವಿಷಯಗಳಲ್ಲಿ ತಲಾ ಒಂದೊಂದು ಅಂಕ ಕಡಿಮೆ ಬಂದಿತ್ತು. ಒಟ್ಟು 623 ಅಂಕಗಳನ್ನು ಪಡೆದುಕೊಂಡಿದ್ದರು. ತಾನು ಎಲ್ಲಾ ಪ್ರಶ್ನೆಗಳಿಗೂ ಸರಿಯಾದ ಉತ್ತರವನ್ನು ನೀಡಿದ್ದೇನೆ ತನಗೆ ಇನ್ನೂ ಹೆಚ್ಚಿನ ಅಂಕಗಳು ಬರಬೇಕಿತ್ತು ಎಂದು ಆತ ಹೇಳಿದ್ದರಿಂದ ಮರು ಮೌಲ್ಯ ಮಾಪನಕ್ಕೆ ಕಳುಹಿಸಲಾಯಿತು. ಇದೀಗ ಬಂದ ಫಲಿತಾಂಶದಲ್ಲಿ ಎಲ್ಲಾ ವಿಷಯಗಳಲ್ಲಿಯೂ 100ಕ್ಕೆ 100 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಅವರಿಗೆ ಆಳ್ವಾಸ್ ಸಂಸ್ಥೆಯಿಂದ 2 ಲಕ್ಷ ರೂಪಾಯಿ ಪುರಸ್ಕಾರ ನೀಡುವುದಾಗಿ ಘೋಷಿಸಿದರು. 

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಗಳಿಸಿದ ಆಳ್ವಾಸ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜ ಹಾಗೂ ಎಸೆಸೆಲ್ಸಿಯಲ್ಲಿ ಸುಜ್ಞಾನ್ ಅವರು ಪ್ರಥಮ ರ್ಯಾಂಕನ್ನು ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಮೋಹನ ಆಳ್ವ ತಿಳಿಸಿದರು. 

ವೈದ್ಯಕೀಯ ಸಂಶೋಧನೆ ಮಾಡುವಾಸೆ: ಸುಜ್ಞಾನ್

 ಸುಜ್ಞಾನ್, ಆಳ್ವಾಸ್ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಆಯ್ಕೆ ಮಾಡಿಕೊಂಡಿದ್ದು ಮುಂದೆ ವೈದ್ಯಕೀಯ ಕ್ಷೇತ್ರದಲ್ಲಿ ಸಂಶೋಧನೆ ಮಾಡುವ ಗುರಿ ಹೊಂದಿರುವುದಾಗಿ ತಿಳಿಸಿದ್ದಾರೆ. 623 ಅಂಕ ಪಡೆದಾಗ ಸ್ವಲ್ಪ ಅಸಮಾಧಾನವಾಗಿತ್ತು. ಅದಕ್ಕೆ ಮರುಮೌಲ್ಯಮಾಪನದ ನಿರ್ಧಾರ ತೆಗೆದುಕೊಂಡೆ. ಈಗ 625 ಅಂಕಗಳನ್ನು ಪಡೆದಿರುವುದು ಖುಷಿಯಾಗಿದೆ. ತಂದೆ, ತಾಯಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವರ ಪ್ರೋತ್ಸಾಹದಿಂದ ಸಾಧನೆಗೆ ಸಹಕಾರಿಯಾಗಿದೆ. ತರಗತಿ ಅವಧಿಯಲ್ಲಿ ಏಕಾಗ್ರತೆಯಿಂದ ಪಾಠ ಕೇಳಿದ್ದು ನನಗೆ ವರದಾನವಾಗಿದೆ ಎಂದು ಸುಜ್ಞಾನ್ ತಿಳಿಸಿದ್ದಾರೆ. ಇವರು ಆಳ್ವಾಸ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್  ಶೆಟ್ಟಿ, ಗೃಹಿಣಿ ಆರತಿ ಶೆಟ್ಟಿ ಅವರ ಪುತ್ರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X