Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಂಗನ ಕಾಯಿಲೆ ಲಸಿಕೆ ಸಾಮರ್ಥ್ಯ ಪರೀಕ್ಷೆ

ಮಂಗನ ಕಾಯಿಲೆ ಲಸಿಕೆ ಸಾಮರ್ಥ್ಯ ಪರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ24 May 2019 10:19 PM IST
share
ಮಂಗನ ಕಾಯಿಲೆ ಲಸಿಕೆ ಸಾಮರ್ಥ್ಯ ಪರೀಕ್ಷೆ

ಬೆಂಗಳೂರು, ಮೇ 24: ಮಲೆನಾಡು ಸೇರಿದಂತೆ ವಿವಿಧ ಕಡೆಗಳಲ್ಲಿ ಹರಡಿಕೊಂಡಿರುವ ಮಾರಣಾಂತಿಕ ಮಂಗನ ಕಾಯಿಲೆಗೆ ನೀಡಲಾಗುವ ಲಸಿಕೆಯ ಸಾಮರ್ಥ್ಯದ ಪರೀಕ್ಷೆಗೆ ರಾಜ್ಯ ಸರಕಾರ ಮುಂದಾಗಿದೆ.

ರಾಜ್ಯದಲ್ಲಿ ಹಲವು ವರ್ಷಗಳ ಹಿಂದೆಯೇ ಮಂಗನ ಕಾಯಿಲೆ ಹರಡಿತ್ತು. ಆ ಸಂದರ್ಭದಲ್ಲಿ ಲಸಿಕೆಯನ್ನು ಕಂಡು ಹಿಡಿಯಲಾಗಿತ್ತು. ಆದರೆ, ಈಗಲೂ ಆ ಲಸಿಕೆ ಅಷ್ಟೇ ಪರಿಣಾಮಕಾರಿಯಾಗಿದೆಯೇ ಅಥವಾ ಸಾಮರ್ಥ್ಯ ಕಡಿಮೆ ಆಗಿದೆಯೇ ಎಂಬುದರ ಪರೀಕ್ಷೆ ನಡೆಸಬೇಕು. ಜತೆಗೆ ಹೊಸ ಲಸಿಕೆ ಕಂಡು ಹಿಡಿಯಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ರಾಜ್ಯ ಆರೋಗ್ಯ ಇಲಾಖೆ ಪತ್ರ ಬರೆದಿತ್ತು. ಅದಕ್ಕೆ ಸ್ಪಂದಿಸಿದ್ದ ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯಕ್ಕೆ ಮೂರು ಜನರ ವೈದ್ಯ ತಜ್ಞರ ತಂಡವನ್ನು ಕಳುಹಿಸಿಕೊಡಲಾಗಿತ್ತು. ಅವರು ಸುಮಾರು 10-12 ದಿನಗಳ ಕಾಲ ಅಧ್ಯಯನ ನಡೆಸಿದ್ದು, ಸಂಬಂಧಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಶೀಘ್ರ ಸೂಕ್ತ ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ.

1957ರಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡ ಮಂಗನ ಕಾಯಿಲೆಗೆ 1991-92ರಲ್ಲಿ ಲಸಿಕೆ ಕಂಡು ಹಿಡಿಯಲಾಯಿತು. ಹೆಬ್ಬಾಳದಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಈ ಲಸಿಕೆಯನ್ನು ತಯಾರಿಸುತ್ತಿರುವ ದೇಶದ ಏಕೈಕ ಸಂಸ್ಥೆಯಾಗಿದೆ. ಸಾಮಾನ್ಯವಾಗಿ ಕಾಯಿಲೆಯಿಂದ ಮಂಗ ಅಥವಾ ಮನುಷ್ಯ ಸಾವನ್ನಪ್ಪಿದರೆ ಅಥವಾ ಉಣ್ಣೆಗಳಲ್ಲಿ ಈ ಕಾಯಿಲೆಗೆ ಕಾರಣವಾದ ವೈರಸ್‌ಗಳು ಕಂಡು ಬಂದ ಜಾಗದಿಂದ ಐದು ಕಿ.ಮೀ.ಸುತ್ತ ವಾಸಿಸುವ ಪ್ರತಿಯೊಬ್ಬರಿಗೂ ತಿಂಗಳ ಅಂತರದಲ್ಲಿ ಮೂರು ಲಸಿಕೆಗಳನ್ನು ಹಾಕಲಾಗುತ್ತದೆ.

ಪ್ರಸಕ್ತ ಸಾಲಿನಲ್ಲಿ ಪ್ರಕರಣಗಳು ಹೆಚ್ಚಾಗಿದ್ದರಿಂದ ಆತಂಕಗೊಂಡ ಜನ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬಂದರು. ನಂತರದ ವರ್ಷಗಳಲ್ಲಿ ಸ್ವತಃ ಮನೆ ಬಾಗಿಲಿಗೆ ಹೋದರೂ, ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರಲಿಲ್ಲ ಎಂದು ಆರೋಗ್ಯ ಇಲಾಖೆ ಆರೋಪಿಸುತ್ತದೆ.

ಹೊರಗುತ್ತಿಗೆಗೆ ಚಿಂತನೆ: ಒಮ್ಮೆ ಲಸಿಕೆ ಹಾಕಿದರೆ ಕನಿಷ್ಠ ಐದು ವರ್ಷ ರಕ್ಷಣೆ ನೀಡುವ ಸಾಮರ್ಥ್ಯ ಇರುವಂತಹ ಹೊಸ ಲಸಿಕೆ ಅಭಿವೃದ್ಧಿಪಡಿಸಬೇಕು ಎನ್ನುವುದು ನಮ್ಮ ಉದ್ದೇಶ. ಹೊಸ ಲಸಿಕೆ ಕಂಡು ಹಿಡಿಯುವುದರ ಜತೆಗೆ ಲಸಿಕೆಗೆ ಬೇಡಿಕೆ ಹೆಚ್ಚುತ್ತಿರುವುದರಿಂದ ಸಾಧ್ಯವಾದರೆ ಖಾಸಗಿ ಕಂಪನಿಗಳಿಗೆ ಪೂರೈಕೆ ಜವಾಬ್ದಾರಿ ವಹಿಸಬೇಕು. ಈ ಮಧ್ಯೆ, ಪ್ರಸ್ತುತ ಇರುವ ಲಸಿಕೆಯ ಸಾಮರ್ಥ್ಯ ಕಡಿಮೆ ಆಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆಯೂ ಅಧ್ಯಯನ ನಡೆಸುವಂತೆ ಮನವಿ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಚಿಕ್ಕಮಗಳೂರು, ಹಾಸನದಲ್ಲಿ ಈ ಖಾಯಿಲೆ ವಿಸ್ತರಿಸಿದೆ. ರಾಜ್ಯದಲ್ಲೆ ಬರುವ ವರ್ಷಕ್ಕೆ 5.17 ಲಕ್ಷ ಲಸಿಕೆಗಳಿಗಾಗಿ ಆರೋಗ್ಯ ಇಲಾಖೆಯು ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಿದೆ. ಅಲ್ಲದೆ, ಮಹಾರಾಷ್ಟ್ರ, ಕೇರಳ, ಗೋವಾದಲ್ಲೂ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಅಲ್ಲಿಂದಲೂ ಲಸಿಕೆಗೆ ಬೇಡಿಕೆ ಬರಲಿದೆ. ಹೀಗಾಗಿ, ಆರೋಗ್ಯ ಇಲಾಖೆಯಿಂದ ಪ್ರತ್ಯೇಕ ಯೂನಿಟ್ ಜತೆಗೆ ಹೊಸ ಲಸಿಕೆ ಅಭಿವೃದ್ಧಿಪಡಿಸಿ, ಅದರ ಪೂರೈಕೆಯನ್ನು ಖಾಸಗಿ ಔಷಧ ಕಂಪನಿಗಳಿಗೆ ವಹಿಸುವಂತೆ ಕೋರಲಾಗಿದೆ ಎಂದು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X