Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಲೋಕಸಭಾ ಕ್ಷೇತ್ರ: ಮೈತ್ರಿ...

ಶಿವಮೊಗ್ಗ ಲೋಕಸಭಾ ಕ್ಷೇತ್ರ: ಮೈತ್ರಿ ಮಾಡಿ 'ಕೈ' ಸುಟ್ಟುಕೊಳ್ಳುತ್ತಿರುವ ಕಾಂಗ್ರೆಸ್

ಛಿದ್ರವಾಗುತ್ತಿದೆ ಸಾಂಪ್ರದಾಯಿಕ ಮತಬ್ಯಾಂಕ್

ವರದಿ: ಬಿ.ರೇಣುಕೇಶ್ವರದಿ: ಬಿ.ರೇಣುಕೇಶ್24 May 2019 10:32 PM IST
share
ಶಿವಮೊಗ್ಗ ಲೋಕಸಭಾ ಕ್ಷೇತ್ರ: ಮೈತ್ರಿ ಮಾಡಿ ಕೈ ಸುಟ್ಟುಕೊಳ್ಳುತ್ತಿರುವ ಕಾಂಗ್ರೆಸ್

ಶಿವಮೊಗ್ಗ, ಮೇ 24: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ, ಜೆಡಿಎಸ್ ಜೊತೆಗಿನ 'ಮೈತ್ರಿ'ಯು ಕಾಂಗ್ರೆಸ್ ಪಾಲಿಗೆ ಉರುಳಾಗಿ ಪರಿವರ್ತಿತವಾಗುತ್ತಿದೆ. ನುಂಗಲಾರದ ಬಿಸಿತುಪ್ಪವಾಗಿದೆ. ಲಾಭಕ್ಕಿಂತ ನಷ್ಟವೇ ಹೆಚ್ಚಾಗುವಂತೆ ಮಾಡಿದೆ. ಅದರಲ್ಲಿಯೂ ಆ ಪಕ್ಷದ ಸಾಂಪ್ರದಾಯಿಕ ಮತ ಬ್ಯಾಂಕ್ ಛಿದ್ರವಾಗಿಸಿದೆ. ಜೊತೆಗೆ ಆ ಪಕ್ಷದ ಅಸ್ತಿತ್ವಕ್ಕೆ ತೀವ್ರ ಪೆಟ್ಟು ಕೊಟ್ಟಿದೆ. ಸ್ವಯಂಕೃತ ಅಪರಾಧದಿಂದ 'ಕೈ' ಸುಟ್ಟುಕೊಳ್ಳುವಂತಾಗಿದೆ. 

ಶಿವಮೊಗ್ಗ ಕ್ಷೇತ್ರದಲ್ಲಿ ಕಳೆದ ಆರು ತಿಂಗಳ ಅಂತರದಲ್ಲಿ ನಡೆದ ಎರಡು ಲೋಕಸಭಾ ಚುನಾವಣೆಗಳಲ್ಲಿ, ಕಾಂಗ್ರೆಸ್ ಪಕ್ಷವು ಜೆಡಿಎಸ್‍ಗೆ ಬೆಂಬಲ ವ್ಯಕ್ತಪಡಿಸಿದೆ. ಹಾಗೆಯೇ ಪ್ರಸ್ತುತ ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ನಗರ-ಪಟ್ಟಣ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಯೂ, ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಆದರೆ ಮೈತ್ರಿ ರಾಜಕಾರಣವೂ ಕಾಂಗ್ರೆಸ್ ಪಾಲಿಗೆ ಹೊರೆಯಾಗಿ ಪರಿಣಮಿಸುತ್ತಿದೆ. 

'ಶಿವಮೊಗ್ಗ ಕ್ಷೇತ್ರದ ಮಟ್ಟಿಗೆ, ಜೆಡಿಎಸ್ ಜೊತೆಗಿನ ಮೈತ್ರಿಯೂ ಕಾಂಗ್ರೆಸ್‍ಗೆ ಅತ್ಯಂತ ದುಬಾರಿಯಾಗುತ್ತಿದೆ. ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ. ಅಕ್ಷರಶಃ ಸೆರಗಿನಲ್ಲಿ ಕಟ್ಟಿಕೊಂಡ ಕೆಂಡದಂತಾಗಿದೆ. ಮೈತ್ರಿಯಿಂದ ಪಕ್ಷಕ್ಕೆ ಯಾವುದೇ ಲಾಭವಾಗುತ್ತಿಲ್ಲ. ಇದರಿಂದ ನಷ್ಟವೇ ಹೆಚ್ಚಾಗಿದ್ದು, ಸಾರ್ವಜನಿಕ ವಲಯದಲ್ಲಿ ಪಕ್ಷದ ವರ್ಚಸ್ಸು ಕುಸಿಯುತ್ತಿದೆ. ಸಂಘಟನೆ ದುರ್ಬಲಗೊಳ್ಳುತ್ತಿದೆ. ಕಾರ್ಯಕರ್ತರು ನಿರಾಶೆಗೊಳ್ಳುತ್ತಿದ್ದಾರೆ. 

ರಾಜ್ಯ-ರಾಷ್ಟ್ರಮಟ್ಟದ ನಾಯಕರು ತಳೆಯುವ ನಿರ್ಧಾರಗಳು, ಕೆಳಹಂತದಲ್ಲಿ ನಕಾರಾತ್ಮಕ ಪರಿಣಾಮ ಬೀರುತ್ತಿವೆ. ಶತ್ರುವಿನ ಒಂದು ಕಣ್ಣು ಕೀಳಲು ಹೋಗಿ, ತಮ್ಮ ಎರಡು ಕಣ್ಣು ಕಳೆದುಕೊಂಡರು ಎಂಬ ಮಾತು ಜಿಲ್ಲಾ ಕಾಂಗ್ರೆಸ್ ಪಾಳಯದ್ದಾಗಿದೆ. ಬಿಜೆಪಿ ಮಣಿಸಲು ಜೆಡಿಎಸ್ ಅಭ್ಯರ್ಥಿ ಬೆಂಬಲಿಸುವ ನಿರ್ಧಾರವು ಪಕ್ಷದ ಬೆಳವಣಿಗೆಗೆ ನಕಾರಾತ್ಮಕವಾಗಿ ಪರಿವರ್ತಿತವಾಗಿದೆ. ವರಿಷ್ಠರ ನಿರ್ಧಾರ ಪ್ರಶ್ನಿಸಲಾಗದ ಸ್ಥಿತಿಯಲ್ಲಿ ನಾವಿದ್ದೇವೆ' ಎಂದು ಹೆಸರೇಳಲಿಚ್ಚಿಸದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೋರ್ವರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. 

ಧಕ್ಕೆ: ಜೆಡಿಎಸ್‍ಗೆ ಹೋಲಿಸಿದರೆ, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಅತ್ಯಂತ ಬಲಿಷ್ಠವಾಗಿದೆ. ತನ್ನದೆ ಆದ ಕಾರ್ಯಕರ್ತರ ಪಡೆ ಹೊಂದಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಸಾಂಪ್ರದಾಯಿಕ ಮತ ಬ್ಯಾಂಕ್ ಹೊಂದಿದೆ. 'ಕೈ' ಚಿಹ್ನೆಯ ಹೊರತಾಗಿ ಬೇರೆ ಪಕ್ಷಕ್ಕೆ ಓಟ್ ಹಾಕದ ಮತದಾರರಿದ್ದಾರೆ. ಇಂತಹ ಮತದಾರರೇ ಕಾಂಗ್ರೆಸ್ ಪಕ್ಷದ ಶಕ್ತಿಯಾಗಿದ್ದಾರೆ. ಆದರೆ ಜೆಡಿಎಸ್ ಜೊತೆಗಿನ ಮೈತ್ರಿಯಿಂದ ಸಾಂಪ್ರದಾಯಿಕ ಮತ ಬ್ಯಾಂಕ್ ಛಿದ್ರವಾಗುತ್ತಿದೆ. ಪಕ್ಷದಿಂದ ದೂರ ಸರಿಯುವಂತಾಗಿದೆ ಎಂದು ಕೆಲ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸುತ್ತಾರೆ. 

ನಾಯಕತ್ವದ ಕೊರತೆ: ಜಿಲ್ಲಾ ಕಾಂಗ್ರೆಸ್‍ನ ಸದ್ಯದ ಸ್ಥಿತಿ ಶೋಚನೀಯವಾಗಿದೆ. ಪಕ್ಷವನ್ನು ಪರಿಣಾಮಕಾರಿಯಾಗಿ ಕೊಂಡೊಯ್ಯಬಲ್ಲ, ತಳಮಟ್ಟದಿಂದ ಸಂಘಟಿಸಬಲ್ಲ, ಜನಮಾನಸವನ್ನು ಸೆಳೆಯಬಲ್ಲ ಸಮರ್ಥ ನಾಯಕತ್ವದ ಕೊರತೆ ಎದ್ದು ಕಾಣುತ್ತಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪರವರು ಕೂಡ ವಯೋ ಸಹಜ ಕಾರಣಗಳಿಂದ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗಿಯಾಗಲು ಆಗುತ್ತಿಲ್ಲ. 

ಒಂದಾನೊಂದು ಕಾಲದಲ್ಲಿ ರಾಜ್ಯಮಟ್ಟದ ಹಾಗೂ ಸ್ಟಾರ್ ನಾಯಕರಿಂದ ತುಂಬಿತುಳುಕುತ್ತಿದ್ದ ಜಿಲ್ಲಾ ಕಾಂಗ್ರೆಸ್‍ನಲ್ಲೀಗ, ಸಮರ್ಥ ನಾಯಕರ ಕೊರತೆ ಎದ್ದು ಕಾಣುತ್ತಿದೆ. ಇದು ಕೂಡ ಪಕ್ಷದ ಸಂಘಟನೆ ಮೇಲೆ ಪರಿಣಾಮ ಬೀರುವಂತಾಗಿದೆ ಎಂದು ಕೆಲ ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. 

ಒಟ್ಟಾರೆ ಶಿವಮೊಗ್ಗ ಕಾಂಗ್ರೆಸ್ ಅಡಕತ್ತರಿಯಲ್ಲಿದೆ. ಮೈತ್ರಿಯ ಭಾರದಿಂದ ನಲುಗುತ್ತಿದೆ. ಎಷ್ಟೇ ಕಷ್ಟವಾಗಲಿ, ಪಕ್ಷದ ಚಿಹ್ನೆಯಡಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು. ಇದು ಪಕ್ಷದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂಬುವುದು ಕೆಳಹಂತದ ಕಾರ್ಯಕರ್ತರ ಅಭಿಪ್ರಾಯವಾಗಿದ್ದು, ಈ ನಿಟ್ಟಿನಲ್ಲಿ ಆ ಪಕ್ಷದ ವರಿಷ್ಠರು ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುವುದನ್ನು ಕಾದು ನೋಡಬೇಕಾಗಿದೆ. 

ಬಿಜೆಪಿ ವಶವಾದ ಕಾಂಗ್ರೆಸ್ ಭದ್ರಕೋಟೆ !
ಒಂದಾನೊಂದು ಕಾಲದಲ್ಲಿ ಶಿವಮೊಗ್ಗ ಕ್ಷೇತ್ರವು ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಆ ಪಕ್ಷದಿಂದ ಯಾರೇ ಅಭ್ಯರ್ಥಿಯಾಗಿ ಕಣಕ್ಕಿಳಿದರೂ ಗೆಲುವು ಖಚಿತ ಎಂಬ ವಾತಾವರಣವಿತ್ತು. ಆದರೆ ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಭದ್ರಕೋಟೆಯೀಗ, ಬಿಜೆಪಿ ವಶವಾಗಿದೆ. ಕಳೆದ ಲೋಕಸಭೆ ಉಪ ಚುನಾವಣೆ ವೇಳೆ, ಸಮರ್ಥ ಅಭ್ಯರ್ಥಿಯೇ ಸಿಗದಂತಹ ದುಃಸ್ಥಿತಿ ಜಿಲ್ಲಾ 'ಕೈ' ಪಾಳಯದ್ದಾಗಿತ್ತು. ಈ ಕಾರಣದಿಂದ ಜೆಡಿಎಸ್‍ಗೆ ಕ್ಷೇತ್ರ ತ್ಯಾಗ ಮಾಡಿತ್ತು. ಆ ಪಕ್ಷದ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಿತ್ತು. ಇದರಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕಾಂಗ್ರೆಸ್ ಪಕ್ಷ, ತನ್ನ ಅಭ್ಯರ್ಥಿ ಕಣಕ್ಕಿಳಿಸಿರಲಿಲ್ಲ. ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆ ವೇಳೆಯೂ ಜೆಡಿಎಸ್‍ಗೆ ಶಿವಮೊಗ್ಗ ಕ್ಷೇತ್ರವನ್ನು ಕಾಂಗ್ರೆಸ್ ಬಿಟ್ಟು ಕೊಟ್ಟಿತ್ತು. 

ತಪ್ಪು ನಿರ್ಧಾರ: ಜಿಲ್ಲೆಯ ಲೋಕಸಭಾ ಚುನಾವಣಾ ಇತಿಹಾಸದಲ್ಲಿ ಕಾಂಗ್ರೆಸ್ ಪಕ್ಷದ ಪ್ರಭಾವ ಅಚ್ಚಳಿಯದೆ ಉಳಿದಿರುವುದು ಕಂಡುಬರುತ್ತದೆ. ದೇಶದಲ್ಲಿ ಪ್ರಪ್ರಥಮ ಬಾರಿಗೆ ಲೋಕಸಭೆಗೆ ಚುನಾವಣೆ ನಡೆದ 1951 ರಿಂದ ಹಿಡಿದು 2014 ರ ಚುನಾವಣೆಯವರೆಗೂ ಶಿವಮೊಗ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಾ ಬಂದಿದೆ. ಹಾಗೆಯೇ ಅತೀ ಹೆಚ್ಚು ಬಾರಿ ಆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಕೂಡ. 
ಜಿಲ್ಲೆಯಲ್ಲಿ ಜೆಡಿಎಸ್‍ಗೆ ಹೋಲಿಸಿದರೆ, ಕಾಂಗ್ರೆಸ್ ಸಂಘಟನೆ ಬಲಿಷ್ಠವಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ತನ್ನದೆ ಆದ ಸಾಂಪ್ರದಾಯಿಕ ಮತಬ್ಯಾಂಕ್‍ನ್ನು ಆ ಪಕ್ಷ ಕ್ಷೇತ್ರದಲ್ಲಿ ಹೊಂದಿದೆ. ಇಂತಹ ಸನ್ನಿವೇಶದಲ್ಲಿ ಜೆಡಿಎಸ್‍ಗೆ ಕ್ಷೇತ್ರ ಬಿಟ್ಟು ಕೊಟ್ಟಿದ್ದು ತಪ್ಪು ನಿರ್ಧಾರವಾಗಿದೆ ಎಂದು ಕೆಲ ಕಾಂಗ್ರೆಸ್ ಕಾರ್ಯಕರ್ತರ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

share
ವರದಿ: ಬಿ.ರೇಣುಕೇಶ್
ವರದಿ: ಬಿ.ರೇಣುಕೇಶ್
Next Story
X