ನೂತನ ಸಂಸದ ಉಮೇಶ್ ಜಾಧವ್‌ಗೆ ಶುಭ ಕೋರಿದ 'ಕೈ' ಶಾಸಕ ರಮೇಶ್ ಜಾರಕಿಹೊಳಿ

ಬೆಂಗಳೂರು, ಮೇ 25: ಕಲಬುರಗಿ ಕ್ಷೇತ್ರದಿಂದ ನೂತನ ಸಂಸದರಾಗಿ ಆಯ್ಕೆಯಾದ ಡಾ.ಉಮೇಶ್ ಜಾಧವ್ ಅವರನ್ನು ಕಾಂಗ್ರೆಸ್ ಪಕ್ಷದ ಬಂಡಾಯ ಬಣದಲ್ಲಿ ಗುರುತಿಸಿಕೊಂಡಿರುವ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಹೂಗುಚ್ಚ ನೀಡಿ ಶುಭ ಕೋರಿದ್ದಾರೆ.
ನಗರದ ನಿನ್ನೆ ರಾತ್ರಿ ಖಾಸಗಿ ಹೊಟೇಲ್ ನಲ್ಲಿ ಉಭಯ ನಾಯಕರು ಭೇಟಿ ಮಾಡಿದ್ದು, ತಮ್ಮ ಮುಂದಿನ ನಡೆಯ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಗೊತ್ತಾಗಿದೆ. ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಮಾಲಿಕಯ್ಯ ಗುತ್ತೇದಾರ್, ಬಿಎಸ್‌ವೈ ಆಪ್ತ ಸಹಾಯಕ ಇದ್ದರು ಎಂದು ಹೇಳಲಾಗಿದೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆ ಮಾಡುವ ಬಗ್ಗೆ ಚರ್ಚಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಅತೃಪ್ತ ಶಾಸಕರನ್ನು ಹೊರ ರಾಜ್ಯಕ್ಕೆ ಕರೆದೊಯ್ಯುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Next Story





