Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖಾಸಗಿ ಶಾಲೆಗಳಿಂದ ದುಪ್ಪಟ್ಟು ಸಾರಿಗೆ ದರ...

ಖಾಸಗಿ ಶಾಲೆಗಳಿಂದ ದುಪ್ಪಟ್ಟು ಸಾರಿಗೆ ದರ ವಸೂಲಿ: ಆರೋಪ

ವಾರ್ತಾಭಾರತಿವಾರ್ತಾಭಾರತಿ26 May 2019 10:15 PM IST
share

ಬೆಂಗಳೂರು, ಮೇ 26: ನಗರದ ಖಾಸಗಿ ಶಾಲೆಗಳು ಮಕ್ಕಳನ್ನು ಕರೆದೊಯ್ಯುವ ವಾಹನಗಳ ಪ್ರಯಾಣ ದರವನ್ನು ಪ್ರತಿ ಕಿ.ಮೀ. 70 ರಿಂದ 80 ರೂ.ವರೆಗೂ ನಿಗದಿ ಮಾಡುತ್ತಿದ್ದು, ಪೋಷಕರಿಂದ ಸಾವಿರಾರು ರೂ.ಗಳು ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಖಾಸಗಿ ಶಾಲೆಗಳು ನಿಗದಿ ಮಾಡಿರುವ ದರವು ಐಟಿ ಕಂಪನಿಗಳಿಗೆ ನೀಡುವ ವಾಹನಗಳಿಗಿಂತ ಅಧಿಕ ಹಣವಾಗಿದೆ. ಶಾಲೆಗಳು ಸಾರಿಗೆ ಸೇವೆ ಕಲ್ಪಿಸುವ ನೆಪದಲ್ಲಿ ಸುಲಿಗೆ ಮಾಡುತ್ತಿದ್ದಾರೆ. ಇದರಿಂದ ಪ್ರತಿ ವರ್ಷ ಕೋಟ್ಯಂತರ ರೂ. ಸಂಗ್ರಹ ಆಗುತ್ತಿದ್ದು, ಲಕ್ಷಾಂತರ ಪೋಷಕರು ಶೋಷಣೆಗೊಳಗಾಗುತ್ತಿದ್ದಾರೆ. ಈ ಬಗ್ಗೆ ಅರಿವಿದ್ದರೂ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅಸಹಾಯಕರಾಗಿದ್ದಾರೆ. ಬೆಂಗಳೂರಿನಲ್ಲಿ ಅಂದಾಜು 10 ಸಾವಿರ ಖಾಸಗಿ ಹಾಗೂ ಅನುದಾನಿತ ಶಾಲೆಗಳಿವೆ. ಒಂದೊಂದು ಶಾಲೆ ಒಂದೊಂದು ರೀತಿಯಲ್ಲಿ ಶುಲ್ಕ ನಿಗದಿ ಮಾಡುತ್ತಿದ್ದು, ವಾರ್ಷಿಕ 25 ಸಾವಿರದಿಂದ 45 ಸಾವಿರದಷ್ಟು ದರ ವಸೂಲಿ ಮಾಡುತ್ತಿದ್ದಾರೆ. ಆ್ಯಪ್ ಆಧಾರಿತ ವಾಹನಗಳು, ಆಟೋ ದರಗಳಿಗೆ ಹೋಲಿಸಿದರೆ ಇದು ಮೂರು ಪಟ್ಟು ದುಪ್ಪಟ್ಟಾಗುತ್ತದೆ. ಆದರೆ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಅನಿವಾರ್ಯವಾಗಿ ಶಾಲಾ ವಾಹನ ಸೇವೆ ಪಡೆಯಲಾಗುತ್ತದೆ ಎಂದು ಪೋಷಕರೊಬ್ಬರು ಹೇಳಿದ್ದಾರೆ.

ದೇಶದ ಹಲವು ರಾಜ್ಯಗಳಲ್ಲಿ ಸರಕಾರವೇ ದರ ನಿಗದಿ ಮಾಡುತ್ತದೆ. ಜಾರ್ಖಂಡ್‌ನ ರಾಂಚಿಯಲ್ಲಿ ಶಾಲಾ ವಾಹನಗಳಿಗೆ ಸರಕಾರವೇ ದರ ನಿಗದಿಪಡಿಸಿದೆ. ಐದು ಕಿ.ಮೀ. ವ್ಯಾಪ್ತಿಯಲ್ಲಿ ಸೇವೆ ನೀಡುವ ವಾಹನಗಳಿಗೆ 710 ರೂ. ಹಾಗೂ 5-10 ಕಿ.ಮೀ. ವ್ಯಾಪ್ತಿಯಲ್ಲಿ ಸಂಚರಿಸುವ ಶಾಲಾ ವಾಹನಗಳಿಗೆ 850 ರೂ. ಹಾಗೂ 10ರಿಂದ 15 ಕಿ.ಮೀ. ವ್ಯಾಪ್ತಿಯಲ್ಲಿದ್ದರೆ 985 ರೂ. ಮತ್ತು 15 ಕಿ.ಮೀ. ಮೇಲ್ಪಟ್ಟಿದ್ದರೆ 1,050 ರೂ. ಶುಲ್ಕ ವಸೂಲಿ ಮಾಡಬೇಕಿದೆ.

ಅದೇ ವ್ಯವಸ್ಥೆಯು ಪಂಜಾಬ್, ಹಿಮಾಚಲ ಪ್ರದೇಶ, ಚಂಡಿಗಢದಲ್ಲಿಯೂ ಚಾಲ್ತಿಯಲ್ಲಿದೆ. ಹೀಗಾಗಿ, ನಗರದಲ್ಲಿ ದರ ನಿಗದಿ ಸಂಬಂಧ ಒಂದು ತಂಡವನ್ನು ರಚನೆ ಮಾಡಿ ವೈಜ್ಞಾನಿಕ ದರ ನಿಗದಿ ಮಾಡಲು ಮುಂದಾಗಬೇಕು ಎಂದು ಪೋಕಷರು ಆಗ್ರಹಿಸಿದ್ದಾರೆ.

ಪೋಷಕರಿಗೆ ಕಿರುಕುಳ: ಕೆಲವು ಶಾಲಾ ಆಡಳಿತ ಮಂಡಳಿಗಳು ಸಾರಿಗೆ ಸೇವೆಗಾಗಿ ವಾಹನಗಳ ಪೂರೈಸುವ ಸಂಬಂಧ ಹೊರಗುತ್ತಿಗೆ ನೀಡಿವೆ. ಹೀಗೆ ಹೊರಗುತ್ತಿಗೆ ಪಡೆದ ಟ್ರಾವೆಲ್ ಕಂಪನಿಗಳ ಮಾಲಕರು, ಶುಲ್ಕ ಪಾವತಿಸುವಲ್ಲಿ ವಿಳಂಬವಾದರೆ, ಅಂತಹ ಪೋಷಕರ ಮನೆಗೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾರೆ. ಮಾನಸಿಕ ಕಿರುಕುಳ ನೀಡುತ್ತಾರೆ ಎಂದೂ ಪೋಷಕರು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X