Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಮಾಂಸ ತಿನ್ನುವ ಹಕ್ಕನ್ನು ಸಮರ್ಥಿಸಿ...

ಗೋಮಾಂಸ ತಿನ್ನುವ ಹಕ್ಕನ್ನು ಸಮರ್ಥಿಸಿ ಫೇಸ್ ಬುಕ್ ಪೋಸ್ಟ್: 2 ವರ್ಷದ ಬಳಿಕ ಆದಿವಾಸಿ ಪ್ರೊಫೆಸರ್ ಬಂಧನ

ವಾರ್ತಾಭಾರತಿವಾರ್ತಾಭಾರತಿ26 May 2019 11:17 PM IST
share
ಗೋಮಾಂಸ ತಿನ್ನುವ ಹಕ್ಕನ್ನು ಸಮರ್ಥಿಸಿ ಫೇಸ್ ಬುಕ್ ಪೋಸ್ಟ್: 2 ವರ್ಷದ ಬಳಿಕ ಆದಿವಾಸಿ ಪ್ರೊಫೆಸರ್ ಬಂಧನ

ರಾಂಚಿ, ಮೇ 26: ಗೋಮಾಂಸ ತಿನ್ನುವ ಹಕ್ಕನ್ನು ಸಮರ್ಥಿಸಿ ಫೇಸ್‌ಬುಕ್‌ನಲ್ಲಿ ಬರೆದಿದ್ದ ಜಾರ್ಖಂಡ್‌ನ ಪ್ರಮುಖ ಆದಿವಾಸಿ ಕಾರ್ಯಕರ್ತ ಹಾಗೂ ಪ್ರೊಫೆಸರ್ ಜೀತ್‌ರಾಯ್ ಹನ್ಸ್‌ಡ ಎಂಬವರನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

2017ರಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ 2 ವರ್ಷದ ಬಳಿಕ, ಚುನಾವಣೆ ಮುಗಿದೊಡನೆ ಬಂಧಿಸಿರುವ ಬಗ್ಗೆ ಹಲವರು ಅನುಮಾನ ವ್ಯಕ್ತಪಡಿಸಿದ್ದಾರೆ. ಜೀತ್‌ರಾಯ್ ಅವರು ಜಾರ್ಖಂಡ್‌ನ ಜಮ್‌ಶೆಡ್‌ಪುರ ಜಿಲ್ಲೆಯ ಸಾಕ್ಚಿ ಎಂಬ ಗ್ರಾಮದಲ್ಲಿರುವ ‘ಗವರ್ನ್‌ಮೆಂಟ್ ಸ್ಕೂಲ್ ಆ್ಯಂಡ್ ಕಾಲೇಜ್ ಫಾರ್ ವುಮೆನ್’ನಲ್ಲಿ ಪ್ರೊಫೆಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಗೋಮಾಂಸ ತಿನ್ನುವುದು ತಮ್ಮ ಆದಿವಾಸಿ ಸಮುದಾಯದವರ ಹಕ್ಕಾಗಿದೆ ಎಂದು ಸಮರ್ಥಿಸಿಕೊಂಡು ಫೇಸ್‌ಬುಕ್‌ನಲ್ಲಿ ಲೇಖನ ಬರೆದಿದ್ದರು. ಈ ಬಗ್ಗೆ ಆರೆಸ್ಸೆಸ್‌ನ ವಿದ್ಯಾರ್ಥಿ ಸಂಘಟನೆ ಎಬಿವಿಪಿ 2017ರ ಜೂನ್‌ನಲ್ಲಿ ದೂರು ಸಲ್ಲಿಸಿತ್ತು.

ಆದರೆ ಇದೀಗ ದೂರು ಸಲ್ಲಿಸಿ 2 ವರ್ಷದ ಬಳಿಕ ಪ್ರೊಫೆಸರ್ ಜೀತ್‌ರಾಯ್‌ರನ್ನು ಬಂಧಿಸಿರುವ ಬಗ್ಗೆ ಹಲವು ಪ್ರಶ್ನೆಗಳು ಮೂಡಿವೆ. ಸಾರ್ವತ್ರಿಕ ಚುನಾವಣೆಯ ಸಂದರ್ಭ ಆದಿವಾಸಿಗಳ ವಿರೋಧ ಕಟ್ಟಿಕೊಳ್ಳಲು ಬಯಸದ ಬಿಜೆಪಿ ಸರಕಾರ, ಚುನಾವಣೆ ಮುಗಿದ ಬಳಿಕ ಆದಿವಾಸಿ ಪ್ರೊಫೆಸರ್‌ರನ್ನು ಬಂಧಿಸಿದೆ ಎಂದು ಹೇಳಲಾಗುತ್ತಿದೆ. ಜಾರ್ಖಂಡ್‌ನಲ್ಲಿ 14 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ 12 ಸ್ಥಾನ ಗೆದ್ದುಕೊಂಡಿದೆ.

ಸಾಕ್ಚಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಜೀತ್‌ರಾಯ್ 2017ರಲ್ಲಿ ಫೇಸ್‌ಬುಕ್‌ನಲ್ಲಿ ಬರೆದಿರುವ ಲೇಖನದಲ್ಲಿ ದನದ ಮಾಂಸ ತಿನ್ನುವುದು ಆದಿವಾಸಿಗಳ ಹಕ್ಕಾಗಿದೆ ಎಂದಿದ್ದರು ಹಾಗೂ ಹಿಂದೂ ಧರ್ಮದ ಆಚರಣೆಗಳನ್ನು ಅನುಸರಿಸಲು ತಮಗೆ ಮನಸ್ಸಿಲ್ಲ ಎಂದಿದ್ದರು. ಅಲ್ಲದೆ ಭಾರತದ ರಾಷ್ಟ್ರೀಯ ಹಕ್ಕಿಯಾಗಿರುವ ನವಿಲುಗಳನ್ನೂ ಆದಿವಾಸಿಗಳು ಕೊಂದು ತಿನ್ನುತ್ತಾರೆ ಎಂದು ಬರೆದಿದ್ದರು.

2017ರಲ್ಲಿ ಜೀತ್‌ರಾಯ್‌ರನ್ನು ಠಾಣೆಗೆ ಹಾಜರಾಗುವಂತೆ ತಿಳಿಸಲಾಗಿತ್ತು, ಆದರೆ ಬಂಧಿಸಿರಲಿಲ್ಲ. ನಿರೀಕ್ಷಣಾ ಜಾಮೀನು ಕೋರಿ ಅವರು ಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಧಾರ್ಮಿಕ ಭಾವನೆಗೆ ಘಾಸಿ ಎಸಗಲು ಪ್ರಯತ್ನ ಹಾಗೂ ಪಂಗಡಗಳ ಮಧ್ಯೆ ದ್ವೇಷ ಭಾವನೆ ಮೂಡಿಸಲು ಪ್ರಯತ್ನಿಸಿರುವ ಆರೋಪವನ್ನು ಜೀತ್‌ರಾಯ್ ವಿರುದ್ಧ ಹೊರಿಸಲಾಗಿದೆ.

ಈ ಮಧ್ಯೆ, ಜೀತ್‌ರಾಯ್ ತಮ್ಮ ಬರಹದಲ್ಲಿ ತಿಳಿಸಿರುವ ವಿಷಯಗಳು ಆದಿವಾಸಿ ಸಮುದಾಯದ ಆಚರಣೆಯಲ್ಲಿರುವ ವಿಷಯಗಳ ಸಮರ್ಥನೆಯಾಗಿದ್ದು ಅವರನ್ನು ಕಾಲೇಜಿನಿಂದ ಅಮಾನತು ಮಾಡಬಾರದು ಎಂದು ಕೋರಿ 2017ರಲ್ಲಿ ತಾನು ಸಾಕ್ಚಿ ಕಾಲೇಜಿನ ಆಡಳಿತ ನೋಡಿಕೊಳ್ಳುತ್ತಿರುವ ಕೊಲ್ಹಾನ್ ವಿವಿಉ ಕುಲಪತಿಗಳಿಗೆ ಪತ್ರ ಬರೆದಿದ್ದೇನೆ ಎಂದು ಆದಿವಾಸಿ ಹಕ್ಕುಗಳ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ‘ಮಹ್ಜಿ ಪರಗಣ ಮಹಲ್’ನ ಅಧ್ಯಕ್ಷ ದಸ್ಮತ್ ಹನ್ಸ್‌ಡ ಹೇಳಿದ್ದಾರೆ. ಅವರನ್ನು ಅಮಾನತುಗೊಳಿಸಲಾಗಿದೆಯೇ ಎಂಬುದು ತಿಳಿದಿಲ್ಲ. ಆದರೆ ಅವರು ಈಗ ಕಾಲೇಜಿಗೆ ಹೋಗುತ್ತಿಲ್ಲ ಎಂದೂ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X