ಗ್ಯಾರೇಜ್ ಮಾಲಕರ ಸಂಘದ ಕ್ರೀಡಾಕೂಟ ಉದ್ಘಾಟನೆ

ಉಡುಪಿ, ಮೇ 27: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘ ಉಡುಪಿ ವಲಯದ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟವು ರವಿವಾರ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು.
ಕ್ರೀಡಾಕೂಟವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಉಪಾಧ್ಯಕ್ಷ ಮಾಧವ ಬಂಗೇರ ಮಾತನಾಡಿ, ಗ್ಯಾರೇಜ್ ಮಾಲಕರ ಸಂಘಟನಾತ್ಮಕ ಬೆಳವಣಿಗೆಗೆ ಕ್ರೀಡಾಕೂಟದಂತಹ ಕಾರ್ಯಕ್ರಮಗಳ ಆಯೋಜನೆ ಸಹಕಾರಿಯಾಗುತ್ತದೆ. ಅದೇ ರೀತಿ ಗ್ಯಾರೇಜ್ ಮಾಲಕರ ಮತ್ತು ಕಾರ್ಮಿಕರ ಆಂತರಿಕ ಭಾಂದವ್ಯ ಕೂಡ ಇಂತಹ ಕಾರ್ಯಕ್ರಮಗಳಿಂದ ಪರಿಣಾಮಕಾರಿಯಾಗುತ್ತದೆ ಎಂದರು.
ಉಡುಪಿ ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಪ್ರವೀಣ್ ಕುಮಾರ್, ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘದ ಕೋಶಾಧಿಕಾರಿ ಸತೀಶ್ ಗಟ್ಟಿ, ಮಾಜಿ ಪ್ರಧಾನ ಕಾರ್ಯ ದರ್ಶಿ ದಿನೇಶ್ ಕುಮಾರ್, ನಿರ್ದೇಶಕರಾದ ವಸಂತ ಸಾಲಿಯಾನ್, ಉಪಾಧ್ಯಕ್ಷ ಉದಯ ಕಿರಣ್, ಸಂಘದ ಜಿಲ್ಲಾ ಗೌರವ ಸಲಹೆಗಾರರಾದ ಪ್ರಭಾಕರ್ ಕೆ, ಯಾದವ ಶೆಟ್ಟಿಗಾರ್, ಜಯರಾಜ್ ಸುವರ್ಣ, ಉಪಾಧ್ಯಕ್ಷರಾದ ರಾಜೇಶ್ ಜತ್ತನ್, ವಿನಯ ಕುಮಾರ್ ಮಲ್ಪೆ, ಜೊತೆ ಕಾರ್ಯದರ್ಶಿಗಳಾದ ವಿಜಯ ಸನಿಲ್, ಪ್ರಶಾಂತ್ ಮೆಂಡನ್, ರವೀಂದ್ರ ಶೇಟ್, ಜೂಮ್ ಆಯಿಲ್ನ ವಕ್ತಾರ ಯಾದವ್, ಆದರ್ಶ್ ಆಸ್ಪತ್ರೆಯ ಸಿಬ್ಬಂದಿಗಳಾದ ಸೌಮ್ಯ ಮತ್ತು ಸುದರ್ಶನ್ ಮೊದಲಾದವರು ಉಪಸ್ಥಿತರಿದ್ದರು.
ಕ್ರೀಡಾ ಕಾರ್ಯದರ್ಶಿ ಮಧುಸೂದನ್ ಕನ್ನರ್ಪಾಡಿ ಕಾರ್ಯಕ್ರಮ ಸಂಯೋಜಿಸಿದರು. ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ ಸ್ವಾಗತಿಸಿದರು. ಕೋಶಾಧಿಕಾರಿ ಸಂತೋಷ್ ಕುಮಾರ್ ವಂದಿಸಿದರು. ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.







