Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಕ್ಷಿಣ ಕನ್ನಡದಲ್ಲಿ ಕುಡಿಯುವ ನೀರಿನ...

ದಕ್ಷಿಣ ಕನ್ನಡದಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಕುಮಾರಸ್ವಾಮಿ ಚರ್ಚೆ

ವಾರ್ತಾಭಾರತಿವಾರ್ತಾಭಾರತಿ27 May 2019 6:34 PM IST
share
ದಕ್ಷಿಣ ಕನ್ನಡದಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳೊಂದಿಗೆ ಸಿಎಂ ಕುಮಾರಸ್ವಾಮಿ ಚರ್ಚೆ

ಬೆಂಗಳೂರು, ಮೇ 27: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು, ಅದರಲ್ಲೂ ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿ ಚರ್ಚಿಸಿದರು. 

ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿ ಹೋಗಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ಸಮಸ್ಯೆ ಕುರಿತು ಮಾಹಿತಿ ನೀಡಿದರು. ಅಲ್ಲದೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಎರಡು ಕಿಂಡಿ ಅಣಿಕಟ್ಟು ನಿರ್ಮಿಸಲು ಸರ್ಕಾರಕ್ಕೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಏಳು ಕೋಟಿ ರೂ. ವೆಚ್ಚದಲ್ಲಿ ನೆರಿಯ ಹೊಳೆಗೆ ಹಾಗೂ ನೇತ್ರಾವತಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸಲು ಸರ್ಕಾರಕ್ಕೆ ಸಣ್ಣ ನೀರಾವರಿ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿಸಿದರು. ಈ ಪ್ರಸ್ತಾವನೆಯನ್ನು ಅನುಮೋದಿಸಿ, ಕೂಡಲೇ ಕಿಂಡಿ ಅಣೆಕಟ್ಟು ನಿರ್ಮಿಸಲು ಕ್ರಮ ವಹಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾಹಿತಿ ನೀಡಿದ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಮಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದು, ತುಂಬೆ ಕಿಂಡಿ ಅಣೆಕಟ್ಟಿನಲ್ಲಿ 7 ಮೀಟರ್ ವರೆಗೆ ನೀರು ಸಂಗ್ರಹಿಸುವ ಅಗತ್ಯವಿದೆ. ಇದರಿಂದ ಹೆಚ್ಚುವರಿಯಾಗಿ 344 ಎಕರೆ ಭೂಮಿ ಜಲಾವೃತವಾಗಲಿದ್ದು, ಇದಕ್ಕಾಗಿ ಭೂ ಸ್ವಾಧೀನಕ್ಕೆ 130 ಕೋಟಿ ರೂ. ಗಳ ಅಗತ್ಯವಿದೆ ಎಂದು ತಿಳಿಸಿದರು. ಈ ಬಗ್ಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು.

ಇದಲ್ಲದೆ ಎಂಆರ್‍ಪಿಎಲ್‍ನಲ್ಲಿ ಸ್ಥಾಪಿಸಲಾಗುತ್ತಿರುವ ಉಪ್ಪು ನೀರು ಶುದ್ಧೀಕರಿಸುವ ಘಟಕದ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಸೂಚಿಸಿದರು.

ಕಡಲ್ಕೊರೆತ: ಉಳ್ಳಾಲ ಭಾಗದಲ್ಲಿ ಕಡಲ್ಕೊರೆತದಿಂದ ಬಾಧಿತರಾಗುವ 150 ಮನೆಗಳನ್ನು ಗುರುತಿಸಲಾಗಿದ್ದು, ಇವರಿಗೆ ಕೊಡಗು ಮಾದರಿಯಲ್ಲಿ ಪುನರ್ವಸತಿ ಕಲ್ಪಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಉಳ್ಳಾಲದಲ್ಲಿ ಪ್ರತಿವರ್ಷ ಕಡಲ್ಕೊರೆತ ತಡೆಯಲು ಸಮುದ್ರ ತೀರದಲ್ಲಿ ಕಲ್ಲು ಹಾಕಲು ಕೋಟ್ಯಂತರ ರೂಪಾಯಿ ವ್ಯಯಿಸಲಾಗುತ್ತಿದ್ದು, ಕಲ್ಲುಗಳು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗುತ್ತವೆ. ಇದಕ್ಕೆ ಶಾಶ್ವತ ಪರಿಹಾರ ಒದಗಿಸುವ ಅಗತ್ಯವಿದೆ ಎಂದು ಸಚಿವ ಯು.ಟಿ. ಖಾದರ್ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಸಭೆಯಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಕರ್ನಾಟಕ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎ.ಬಿ.ಇಬ್ರಾಹಿಂ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಜಯರಾಮ್, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X