ವಿದ್ಯಾರ್ಥಿ-ಪೋಷಕ ಮಾರ್ಗದರ್ಶಿ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಉಪಯುಕ್ತವಾದ ಉಜಿರೆ ಎಸ್‍ಡಿಎಂ ವಸತಿ ಪಿಯು ಕಾಲೇಜಿನ ಪ್ರಿನ್ಸಿಪಾಲ್ ಡಾ.ಟಿ.ಕೆ. ಕೃಷ್ಣಮೂರ್ತಿ ಅವರು ರಚಿಸಿದ ಮಾರ್ಗದರ್ಶಿ ಪುಸ್ತಕವನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು..
ಅಂತಾರಾಷ್ಟ್ರೀಯ ವ್ಯಕ್ತಿತ್ವ ವಿಕಸನ ಜೇಸಿ ಸಂಸ್ಥೆಯ ರಾಷ್ಟ್ರೀಯ ತರಬೇತುದಾರರಾದ ಕೃಷ್ಣಮೂರ್ತಿ ಅವರ ಹಲವಾರು ಲೇಖನಗಳು ಪ್ರಕಟಗೊಂಡಿದೆ. ಪುಸ್ತಕ ಬಿಡುಗಡೆ ಸಂದರ್ಭ ಪುಸ್ತಕದ ಲೇಖಕ ಡಾ.ಟಿ.ಕೆ.ಕೃಷ್ಣಮೂರ್ತಿ, ಉಪನ್ಯಾಸಕ ಸುನೀಲ್ ಪಂಡಿತ್ ಉಪಸ್ಥಿತರಿದ್ದರು.
Next Story





