ಪಡುಬಿದ್ರಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಪಡುಬಿದ್ರಿ: ಬಡಗಿ ವೃತ್ತಿ ಮಾಡಿಕೊಂಡಿದ್ದ ಅದಮಾರು-ಕುಂಜೂರು ರಸ್ತೆ ನಿವಾಸಿಯೋರ್ವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡವನನ್ನು ಜನಾರ್ದನ ಆಚಾರ್ಯ (56) ಎಂದು ತಿಳಿದುಬಂದಿದೆ. ಪತ್ನಿ ಹಾಗೂ ಮಕ್ಕಳೊಂದಿಗೆ ವಾಸವಾಗಿದ್ದ ಜನಾರ್ದನ ವಿಪರೀತ ಮದ್ಯಪಾನದ ಚಟ ಹೊಂದಿದ್ದರು. ಪತ್ನಿ ಹಾಗೂ ಮಕ್ಕಳು ಸಂಬಂಧಿಕರ ಮನೆಗೆ ತೆರಳಿದ್ದು, ಮೇ 25ರಂದು ಅವರು ಏಕಾಂಗಿಯಾಗಿ ಮನೆಯಲ್ಲಿದ್ದುದ್ದನ್ನು ಸ್ಥಳೀಯರು ಗಮನಿಸಿದ್ದಾರೆ. ಆದರೆ ಸೋಮವಾರ ಮನೆ ಸುತ್ತ ವಾಸನೆ ಬರುವುದನ್ನು ನೋಡಿ ಪರಿಶೀಲಿಸಿದಾಗ ಆಡುಗೆ ಕೋಣೆಯಲ್ಲಿ ನೇಣು ಬಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





