ಮೇ 28: ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮ
ಮಂಗಳೂರು, ಮೇ 27: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಕಾರ್ಯನಿರ್ವಹಿಸಿದ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಕಾರ್ಯಕ್ರಮವು ಮೇ 28ರಂದು ಸಂಜೆ 5ಕ್ಕೆ ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ಆಯೋಜಿಸಲಾಗಿದೆ.
ಕಾಂಗ್ರೆಸ್ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಪಕ್ಷದ ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹಾಗೂ ಮತ್ತಿತರರು ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story





