Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಕ್ಕಿಂ ಮುಖ್ಯಮಂತ್ರಿಯಾಗಿ ಪಿ.ಎಸ್ ಗೊಲೆ...

ಸಿಕ್ಕಿಂ ಮುಖ್ಯಮಂತ್ರಿಯಾಗಿ ಪಿ.ಎಸ್ ಗೊಲೆ ಪ್ರಮಾಣ ವಚನ

ವಾರ್ತಾಭಾರತಿವಾರ್ತಾಭಾರತಿ27 May 2019 10:52 PM IST
share
ಸಿಕ್ಕಿಂ ಮುಖ್ಯಮಂತ್ರಿಯಾಗಿ ಪಿ.ಎಸ್ ಗೊಲೆ ಪ್ರಮಾಣ ವಚನ

ಗ್ಯಾಂಗ್ಟಕ್, ಮೇ.27: ಸಿಕ್ಕಿಂನಲ್ಲಿ ಪವನ್ ಕುಮಾರ್ ಚಮ್ಲಿಂಗ್ ಅವರ 24 ವರ್ಷಗಳ ಆಡಳಿತಕ್ಕೆ ಕೊನೆ ಹಾಡಿರುವ ಪ್ರೇಮ್ ಸಿಂಗ್ ತಮಂಗ್ ಅಲಿಯಾಸ್ ಪಿ.ಎಸ್ ಗೊಲೆ ಈಶಾನ್ಯ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 32 ಸ್ಥಾನಗಳ ಪೈಕಿ ಗೊಲೆಯವರ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ 17 ಸ್ಥಾನಗಳನ್ನು ಬಾಚುವ ಮೂಲಕ ಅಮೋಘ ಗೆಲುವು ಸಾಧಿಸಿದೆ. ಚಮ್ಲಿಂಗ್ ನೇತೃತ್ವದ ಸಿಕ್ಕಿಂ ಪ್ರಜಾಸತಾತ್ಮಕ ರಂಗದ ಸ್ಥಾಪಕನಾಗಿರುವ ಗೊಲೆ 2013ರಲ್ಲಿ ಅಂದಿನ ಮುಖ್ಯಮಂತ್ರಿ ಚಮ್ಲಿಂಗ್ ವಿರುದ್ಧ ಬಂಡೆದ್ದು ನೂತನ ಪಕ್ಷ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಸ್ಥಾಪಿಸಿದರು. 2014ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೊಲೆಯವರ ಎಸ್‌ಕೆಎಂ 10 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಮುಖ ವಿಪಕ್ಷವಾಗಿ ಹೊರಹೊಮ್ಮಿತ್ತು.

ಭ್ರಷ್ಟಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಹಿನ್ನೆಲೆಯಲ್ಲಿ ತನ್ನ ನಾಮಪತ್ರ ತಿರಸ್ಕರಿಸಲ್ಪಡುವ ಭಯದಿಂದ ಗೊಲೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದರು.

1994ರಿಂದೀಚೆಗೆ ಸತತ ಐದು ಬಾರಿ ಸಿಕ್ಕಿಂ ವಿಧಾನಸಭೆಗೆ ಆಯ್ಕೆಯಾಗಿರುವ ಗೊಲೆ 2009ರಲ್ಲಿ ಎಸ್‌ಡಿಎಫ್ ಸರಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. 1994 ಮತ್ತು 1999ರ ಮಧ್ಯೆ ಸರಕಾರದ ನಿಧಿಯಲ್ಲಿ ಅವ್ಯವಹಾರ ನಡೆಸಿದ ಆರೋಪದಲ್ಲಿ ಗೊಲೆ ತಪ್ಪಿತಸ್ಥ ಎಂದು ಸಾಬೀತಾದ ಹಿನ್ನೆಲೆಯಲ್ಲಿ 2016ರಲ್ಲಿ ಅವರು ಶಿಕ್ಷೆಗೊಳಗಾದರು. ಪರಿಣಾಮವಾಗಿ ಗೊಲೆ ತನ್ನ ವಿಧಾನಸಭಾ ಸದಸ್ಯತ್ವವನ್ನು ಕಳೆದುಕೊಳ್ಳಬೇಕಾಯಿತು. ತೀರ್ಪಿನ ವಿರುದ್ಧ ಸಿಕ್ಕಿಂ ಉಚ್ಚ ನ್ಯಾಯಾಲಯದಲ್ಲಿ ಗೊಲೆ ಮೇಲ್ಮನವಿ ಸಲ್ಲಿಸಿದರೂ ನ್ಯಾಯಾಲಯ ಈ ತೀರ್ಪನ್ನು ಎತ್ತಿಹಿಡಿದ ಕಾರಣ ಗೊಲೆ ಪೊಲೀಸರಿಗೆ ಶರಣಾದರು.

ಜೈಲಿನಿಂದ ಹೊರಬಂದ ನಂತರ ಪಕ್ಷ ಸಂಘಟನೆಯಲ್ಲಿ ತೊಡಗಿದ ಗೊಲೆ ಈ ಬಾರಿ ವಿಧಾನ ಸಭಾ ಚುನಾವಣೆಯಲ್ಲಿ ಚಮ್ಲಿಂಗ್ ಪಕ್ಷಕ್ಕೆ ಆಘಾತಕಾರಿ ಸೋಲುಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X