Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೂ.1-3 : ಪುತ್ತೂರಿನಲ್ಲಿ ಪುಸ್ತಕ...

ಜೂ.1-3 : ಪುತ್ತೂರಿನಲ್ಲಿ ಪುಸ್ತಕ ಮೇಳ-ಸಾಹಿತ್ಯ ಉತ್ಸವ

ಸಾಧಕ `ಕನ್ನಡ' ವಿದ್ಯಾರ್ಥಿಗಳಿಗೆ ಅಭಿನಂದನೆ| ಸಾಹಿತ್ಯ ಕೃತಿಗಳ ಬಿಡುಗಡೆ | ಸಾವಯವ ತರಕಾರಿ ಸಂತೆ

ವಾರ್ತಾಭಾರತಿವಾರ್ತಾಭಾರತಿ27 May 2019 11:04 PM IST
share

ಪುತ್ತೂರು: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕ ಹಾಗೂ ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯದ ಜಂಟಿ ಆಶ್ರಯದಲ್ಲಿ ಪುಸ್ತಕ ಮೇಳ,ಸಾಹಿತ್ಯ ಉತ್ಸವ,ಮಕ್ಕಳಿಗೆ ಅಭಿನಂದನೆ,ಸಾಧಕರಿಗೆ ಸನ್ಮಾನ,ಕೃತಿ ಬಿಡುಗಡೆ ಕಾರ್ಯಕ್ರಮ ಜೂ.1ರಿಂದ 3ರ ತನಕ ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ನಡೆಯಲಿದೆ ಎಂದು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ತಿಳಿಸಿದ್ದಾರೆ.

ಅವರು ಶೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜೂ.1ರಂದು ಅಪರಾಹ್ನ 3ಗಂಟೆಗೆ ಶಾಸಕ ಸಂಜೀವ ಮಠಂದೂರು ಅವರು ಕಾರ್ಯಕ್ರಮ ಉದ್ಘಾಟಿಸುವರು. ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಎನ್.ಸುಧಾಕರ ಶೆಟ್ಟಿ ಅವರು ಪುಸ್ತಕ ಮೇಳ ಉದ್ಘಾಟಿಸುವರು. ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಅವರು ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು. 

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಶೇ.100 ಪಡೆದ ಮತ್ತು ತಾಲೂಕಿನಲ್ಲಿ ಪ್ರಥಮ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶೇ.100 ಫಲಿತಾಂಶ ಪಡೆದ ಶಾಲೆಗಳ ಮುಖ್ಯಸ್ಥರನ್ನು ಅಲ್ಲದೆ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಿಂಚನಾಲಕ್ಷ್ಮಿ ಅವರನ್ನು ಜಿಲ್ಲಾ ವಿದ್ಯಾಂಗ ಉಪ ನಿರ್ದೇಶಕ ವೈ.ಶಿವರಾಮಯ್ಯ ಅವರು ಅಭಿನಂದಿಸುವರು.

ಎ.ಪಿ.ಉಮಾಶಂಕರಿ ಮರಿಕೆ ಅವರ `ಭಾವಾಂತರಂಗ', ರಾಮಕುಂಜದ ರಾಮಕುಂಜೇಶ್ವರ ಪದವಿ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸಹೋದರಿಯರಾದ ಜ್ಯೋತಿ.ರಾವ್.ಎಚ್ ಮತ್ತು ಜ್ಯೋತ್ಸ್ನಾ ರಾವ್ ಎಚ್ ಅವರ `ಬಾಳಿನಾಗಸದಿಂದ' ಕೃತಿಗಳನ್ನು ಮಂಗಳೂರು ಆಕಾಶವಾಣಿ ನಿರ್ದೇಶಕಿ ಉಷಾಲತಾ ಸರಪಾಡಿ ಅವರು ಲೋಕಾರ್ಪಣೆ ಮಾಡುವರು ಎಂದು ತಿಳಿಸಿದರು. 

ವಿಕಲಚೇತನ ಸಾಧಕಿ ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸಬಿತಾ ಮೋನಿಸ್ ಅವರನ್ನು ಸನ್ಮಾನಿಸಲಾಗುವುದು. ಕ್ಷೇತ್ರ ಶಿಕ್ಷಣಾಧಿಕಾರಿ ಸುಕನ್ಯಾ ಡಿ.ಎನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಸಂಜೆ 5ಗಂಟೆಗೆ ಡಾ.ವಿದುಷಿ ಶೋಭಿತಾ ಸತೀಶ್ ಮತ್ತು ಬಳಗದಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು. 

ಜೂ.2ರಂದು ವಿದುಷಿ ಸುಚಿತ್ರಾ ಹೊಳ್ಳ ಮತ್ತು ಶಿಷ್ಯ ಬಳಗದಿಂದ ನಡೆಯಲಿರುವ ಸಂಗೀತ ಕಾರ್ಯಕ್ರಮವನ್ನು ಪ್ರೊ.ವಿ.ಬಿ.ಅರ್ತಿಕಜೆ ಉದ್ಘಾಟಿಸುವರು. ಸಂಜೆ 3ಗಂಟೆಗೆ ಪಾಂಡವಪುರದ ಲಿಮ್ಕಾ ದಾಖಲೆಯ 10ಲಕ್ಷ ಪುಸ್ತಕಗಳ ವಾಚನಾಲಯದ ನಿರ್ವಾಹಕ, ರಾಜ್ಯ ಪ್ರಶಸ್ತಿ ಪುರಸ್ಕøತ ಅಂಕೇ ಗೌಡ ಎಂ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಮತ್ತು ನೆಹರೂನಗರದ ಸುದಾನ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಿಜಯ ಹಾರ್ವಿನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಂಜೆ 5 ಗಂಟೆಗೆ ಶಿವರಾಮ ಭಾಗವತ್ ಯಲ್ಲಾಪುರ ಅವರು `ಉತ್ತರಾದಿ ಸಂಗೀತ-ಮೆಲೋಡಿಕಾ ವಾದನ' ಕಾರ್ಯಕ್ರಮ ನಡೆಸಿಕೊಡುವರು ಎಂದು ಐತ್ತಪ್ಪ ನಾಯ್ಕ್ ಅವರು ಮಾಹಿತಿ ನೀಡಿದರು. 

ಜೂ.3ರಂದು ಸಂಜೆ 3ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಪುತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಉಪನ್ಯಾಸಕರಾದ ಸಾಹಿತಿ ಡಾ.ನರೇಂದ್ರ ರೈ ದೇರ್ಲ ಅವರು ಸಮಾರೋಪ ಭಾಷಣ ಮಾಡುವರು. ಪಿಯುಸಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಶೇ.100 ಅಂಕ ಪಡೆದ, ತಾಲೂಕಿಗೆ ಪ್ರಥಮ ಮೂರು ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶೇ.100 ಫಲಿತಾಂಶ ಪಡೆದ ಕಾಲೇಜು ಮುಖ್ಯಸ್ಥರನ್ನು ಬಲರಾಮ ಆಚಾರ್ಯ ಮತ್ತು ಮುಳಿಯ ಶ್ಯಾಮ್‍ಭಟ್ ಅವರು ಅಭಿನಂದಿಸುವರು. ಸಭಾ ಕಾರ್ಯಕ್ರಮದ ಬಳಿಕ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿ ತಂಡದಿಂದ ರಾಷ್ಟ್ರಮಟ್ಟದಲ್ಲಿ ಪ್ರದರ್ಶನಗೊಂಡ ಮಕ್ಕಳ ವಿಜ್ಞಾನ ನಾಟಕ `ಕನಸ ಕಂಗಳು' ಪ್ರದರ್ಶನಗೊಳ್ಳಲಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕದ ಗೌರವ ಕಾರ್ಯದರ್ಶಿ ಸರೋಜಿನಿ ಮೇನಾಲ, ಗೌರವ ಕೋಶಾಧ್ಯಕ್ಷ ಎನ್.ಕೆ.ಜಗನ್ನಿವಾಸ ರಾವ್, ಸಾವಯವ ಸಂತೆಯ ಉಸ್ತುವಾರಿ ಸುಹಾಸ್ ಮರಿಕೆ, ಜ್ಞಾನಗಂಗಾ ಪುಸ್ತಕ ಮಳಿಗೆಯ ಪ್ರಕಾಶ್ ಕುಮಾರ್ ಕೊಡಂಕಿರಿ ಉಪಸ್ಥಿತರಿದ್ದರು. 

ಸಾವಯವ ತರಕಾರಿ ಸಂತೆ :
ಜೂ.2ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ದತ್ತಿನಿಧಿ ಕಾರ್ಯಕ್ರಮ `ಸಾವಯವ ತರಕಾರಿ ಸಂತೆ'ಗೆ ಪ್ರೊ.ಎ.ವಿ.ನಾರಾಯಣ ಅವರು ಚಾಲನೆ ನೀಡುವರು. ಸಾವಯವ ಸಂತೆಯಲ್ಲಿ ಸಾವಯವ ಹಣ್ಣು ತರಕಾರಿಯ 10, ದಿನಸಿ ದವಸಧಾನ್ಯಗಳ 5 ಮತ್ತು ಸಾವಯವ ಮೌಲ್ಯವರ್ಧಿತ ಉತ್ಪನ್ನಗಳ 5 ಮಳಿಗೆಗಳು, ಅಲ್ಲದೆ ಹೆಗ್ಗೋಡಿನ ಮತ್ತು ಮಂದಾರ್ತಿಯ ಖಾದಿ ಮಳಿಗೆಗಳು ಇರಲಿವೆ ಎಂದು ಸಾವಯವ ಸಂತೆಯ ಉಸ್ತುವಾರಿ ಸುಹಾಸ್ ಮರಿಕೆ ಅವರು ಮಾಹಿತಿ ನೀಡಿದರು. 

25 ಪುಸ್ತಕ ಮಳಿಗೆ .....
ಪುಸ್ತಕ ಮೇಳದಲ್ಲಿ ಪಾಂಡವರಪುರದ ಅಂಕೇ ಗೌಡರ ಪುಸ್ತಕಗಳ ಪ್ರದರ್ಶನ ಹಾಗೂ ಮಾರಾಟ ಸೇರಿದಂತೆ 25 ಪುಸ್ತಕ ಮಳಿಗೆಗಳು ಇರಲಿವೆ. ಇನ್ನೂ ಕೆಲವು ಪುಸ್ತಕ ಮಳಿಗೆಯವರು ಬರುವ ನಿರೀಕ್ಷೆ ಇದೆ ಎಂದು ಪುಸ್ತಕ ಮಳಿಗೆಯ ಸಂಚಾಲಕರಾದ ಪುತ್ತೂರಿನ ಜ್ಞಾನ ಗಂಗ ಪುಸ್ತಕ ಮಳಿಗೆಯ ಪ್ರಕಾಶ್ ಕುಮಾರ್ ಕೊಡೆಂಕಿರಿ ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X