Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈಲ್ವೆ ನಿಲ್ದಾಣದಲ್ಲಿ ತುರ್ತು...

ರೈಲ್ವೆ ನಿಲ್ದಾಣದಲ್ಲಿ ತುರ್ತು ಸಂದರ್ಭದಲ್ಲಿ ನೆರವಾಗಲು ಚಿಕಿತ್ಸಾ ಕೇಂದ್ರ ಆರಂಭ: ಎ.ಕೆ.ಸಿಂಗ್

ವಾರ್ತಾಭಾರತಿವಾರ್ತಾಭಾರತಿ29 May 2019 5:38 PM IST
share
ರೈಲ್ವೆ ನಿಲ್ದಾಣದಲ್ಲಿ ತುರ್ತು ಸಂದರ್ಭದಲ್ಲಿ ನೆರವಾಗಲು ಚಿಕಿತ್ಸಾ ಕೇಂದ್ರ ಆರಂಭ: ಎ.ಕೆ.ಸಿಂಗ್

ಬೆಂಗಳೂರು, ಮೇ 29: ರೈಲ್ವೆ ನಿಲ್ದಾಣದಲ್ಲಿ ತುರ್ತು ಸಂದರ್ಭದಲ್ಲಿ ಜನತೆಗೆ ನೆರವಾಗುವ ಉದ್ದೇಶದಿಂದ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ತುರ್ತು ಚಿಕಿತ್ಸಾ ಕೇಂದ್ರ ಆರಂಭ ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಎ.ಕೆ.ಸಿಂಗ್ ಹೇಳಿದ್ದಾರೆ.

ಬುಧವಾರ ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನೈರುತ್ಯ ರೈಲ್ವೆ ವಿಭಾಗ ವತಿಯಿಂದ ಮಣಿಪಾಲ್ ಆಸ್ಪತ್ರೆ ಸಹಯೋಗದಲ್ಲಿ ನಿರ್ಮಿಸಲಾದ ತುರ್ತು ಚಿಕಿತ್ಸಾ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರೈಲ್ವೆ ಪ್ರಯಾಣಿಕರಿಗೆ ಆರೋಗ್ಯ ಸೇವೆ ನೀಡುವ ಸಲುವಾಗಿ ತುರ್ತು ಚಿಕಿತ್ಸಾ ಕೇಂದ್ರ ಆರಂಭಿಸಲಾಗಿದೆ ಎಂದರು.

ರೈಲುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಮಾನ್ಯ ಜನರು ಪ್ರಯಾಣ ಮಾಡುತ್ತಾರೆ. ಹೀಗಾಗಿ, ಯಾವುದೇ ಅವಘಡಗಳು ಸಂಭವಿಸಿದಾಗ ಅಗತ್ಯ ಸೇವೆ ಸಲ್ಲಿಸಲು ಈ ಕೇಂದ್ರ ಸಹಕಾರಿಯಾಗಲಿದೆ. ರೈಲು ನಿಲ್ದಾಣದಲ್ಲಿ ಪ್ರಾಥಮಿಕ ಚಿಕಿತ್ಸೆ ಕೇಂದ್ರ ಅವಶ್ಯವಿದ್ದು, ಚಿಕಿತ್ಸಾ ಕೇಂದ್ರದ ಉಚಿತವಾಗಿ ರೈಲ್ವೆ ಪ್ರಯಾಣಿಕರಿಗೆ ಆರೋಗ್ಯ ಸೇವೆ ನೀಡಲಾಗುವುದು ಎಂದು ನುಡಿದರು.

ಪ್ರತಿದಿನ ಸಾವಿರಾರು ಜನರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಮೂಲಕ ಪ್ರಯಾಣ ಮಾಡುತ್ತಾರೆ. ಆದರೆ, ಆರೋಗ್ಯದಲ್ಲಿ ಏರುಪೇರಾದರೆ ಸೂಕ್ತ ಚಿಕಿತ್ಸೆ ನೀಡಲು ಪ್ರಾಥಮಿಕ ಆರೋಗ್ಯ ಕೇಂದ್ರವೇ ಇರಲಿಲ್ಲ, ದೂರದ ಪ್ರದೇಶಕ್ಕೆ ಹೋಗಬೇಕಿತ್ತು. ಆದರೆ, ಇದೀಗ ಇಲ್ಲಿ ಕೇಂದ್ರ ಸ್ಥಾಪಿಸಿರುವುದು ಸೂಕ್ತವಾದುದಾಗಿದೆ ಎಂದು ತಿಳಿಸಿದರು.

ನಗರದ ಕೇಂದ್ರವಾದ ಮೆಜೆಸ್ಟಿಕ್‌ನಿಂದ ದಿಲ್ಲಿ, ಮುಂಬೈ, ಬಾಂಬೆ, ತಿರುವನಂತಪುರ ಸೇರಿದಂತೆ ದೇಶದ ಮೂಲೆ ಮೂಲೆಗಳಿಗೆ ಪ್ರಯಾಣಿಕರು ಸಂಚಾರ ಮಾಡುತ್ತಾರೆ. ಅಲ್ಲದೆ, ದೂರದ ಊರುಗಳಿಂದಲೂ ಇಲ್ಲಿಗೆ ಬರುತ್ತಾರೆ. ಮಕ್ಕಳು, ವಯಸ್ಕರು, ವಯೋವೃದ್ಧರು ಎಂಬ ಭೇದವಿಲ್ಲದೆ ಎಲ್ಲರೂ ಸಂಚಾರ ಮಾಡುತ್ತಾರೆ. ಇವರಿಗೆ ಏನಾದರೂ ಆರೋಗ್ಯ ಸಮಸ್ಯೆ ಕಂಡುಬಂದರೆ ಕೂಡಲೇ ಒಂದನೇ ಪ್ಲಾಟ್‌ಫಾರಂನಲ್ಲಿರುವ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಬಹುದಾಗಿದೆ ಎಂದು ಅವರು ಹೇಳಿದರು.

ಏನೇನಿದೆ ಕೇಂದ್ರದಲ್ಲಿ: ಪ್ರಾಥಮಿಕ ಚಿಕಿತ್ಸೆಗೆ ಬೇಕಾದ ಅಗತ್ಯ ಉಪಕರಣಗಳು ಚಿಕಿತ್ಸಾ ಕೇಂದ್ರದಲ್ಲಿದ್ದು, 2 ಬೆಡ್ ಹಾಕಲಾಗಿದೆ. 3 ಪಾಳಿಯಲ್ಲಿ 3 ಡಾಕ್ಟರ್, ಸಿಬ್ಬಂದಿಗಳು ಚಿಕಿತ್ಸೆ ನೀಡಲಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗೆ 108 ಆ್ಯಂಬುಲೆನ್ಸ್‌ಗಾಗಿ ಕಾಯುವುದನ್ನು ತಪ್ಪಿಸಲು ರೈಲ್ವೆ ನಿಲ್ದಾಣದ ಆವರಣದಲ್ಲಿ 1 ಆ್ಯಂಬುಲೆನ್ ಮೀಸಲಿಡಲಾಗಿದೆ. ಕಾರ್ಯಕ್ರಮದಲ್ಲಿ ನೈರುತ್ಯ ರೈಲ್ವೆ ವಿಭಾಗದ ಡಿವಿಜಿನಲ್ ರೈಲ್ವೆ ಮ್ಯಾನೇಜರ್ ಅಶೋಕ ಕುಮಾರ್ ವರ್ಮಾ, ಮಣಿಪಾಲ್ ಗ್ರೂಪ್‌ನ ನಿರ್ದೇಶಕ ಡಾ.ಮನೀಶ್ ರೈ, ದೀಪಕ್ ವೇಣುಗೋಪಾಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X