ಹಳೆಕೋಟೆಯಲ್ಲಿ ಶಾಲಾ ಪ್ರಾರಂಭೋತ್ಸವ

ಮಂಗಳೂರು, ಮೇ 29: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ವಿದ್ಯಾಸಂಸ್ಥೆಗಳಲ್ಲಿ 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವನ್ನು ಉಳ್ಳಾಲ ಕೇಂದ್ರ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಹಾಜಿ ಮುಹಮ್ಮದ್ ತ್ವಾಹಾ ಒಂದನೇ ತರಗತಿಗೆ ದಾಖಾಲಾತಿ ಮಾಡುವುದರೊಂದಿಗೆ ಬುಧವಾರ ಆಚರಿಸಲಾಯಿತು.
8ನೇ ತರಗತಿಗೆ ಸೈಯದ್ ಮದನಿ ಚಾರೀಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಹಾಜಿ ಯು.ಕೆ. ಇಬ್ರಾಹೀಂ ದಾಖಲಾತಿ ಮಾಡಿದರು. ಉಳ್ಳಾಲ ನಗರ ಸಭೆಯ ಸಹಾಯಕ ಅಭಿಯಂತರ ಉಮೇಶ್ ಕಾಮತ್ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರನ್ನು ಸ್ಮರಣಿಕೆ ನೀಡಿ ಗೌರವಿಸಿದರು. ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಡಾ.ಪ್ರಶಾಂತ್ 1ರಿಂದ 7 ನೇ ತರಗತಿಯವರೆಗಿನ ಮಕ್ಕಳಿಗೆ ಉಚಿತ ಪುಸ್ತಕ ವಿತರಿಸಿದರು.
ವೇದಿಕೆಯಲ್ಲಿ ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್‌ನ ಆಡಳಿತಾಧಿಕಾರಿ ಹಾಜಿ ಅಬ್ದುಲ್ ಲತೀಫ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಯು.ಎನ್. ಇಬ್ರಾಹೀಂ ,ಕೋಶಾಧಿಕಾರಿ ಅಬ್ದುಲ್ ಕರೀಂ, ಸದಸ್ಯರಾದ ಅಲ್ತಾಫ್ ಯು.ಎಚ್. ಉಪಸ್ಥಿತರಿದ್ದರು.
ವಿದ್ಯಾರ್ಥಿ ಮುಹಮ್ಮದ್ ಮಿಗ್ದಾದ್ ಕಿರಾಅತ್ ಪಠಿಸಿದರು. ಶಾಲಾ ಮುಖ್ಯ ಶಿಕ್ಷಕ ಕೆ.ಎಂ.ಕೆ. ಮಂಜನಾಡಿ ಸ್ವಾಗತಿಸಿದರು. ಶಿಕ್ಷಕಿ ಸಪ್ನಾ ವಂದಿಸಿದರು. ಶಿಕ್ಷಕಿ ಜಯಲಕ್ಷ್ಮಿ ಹಾಗೂ ದಿವ್ಯಾ ಕಾರ್ಯಕ್ರಮ ನಿರೂಪಿಸಿದರು.





