ಏಕಲವ್ಯ/ಜೀವಮಾನ ಸಾಧನೆ, ಕ್ರೀಡಾರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ
ಉಡುಪಿ, ಮೇ 29: ಕರ್ನಾಟಕ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಕರ್ನಾಟಕದಿಂದ ಆಯ್ಕೆಯಾಗಿ ಉನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಪ್ರತೀವರ್ಷ ನೀಡುವ ಏಕಲವ್ಯ ಪ್ರಶಸ್ತಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಕ್ರೀಡಾಪಟು ವಾಗಿ/ತರಬೇತುದಾರರಾಗಿ ನಿರಂತರ ಸೇವೆ ಸಲ್ಲಿಸಿ ಸಾಧನೆ ಮಾಡಿದ ಹಿರಿಯ ತರಬೇತುದಾರರಿಗೆ ಕ್ರೀಡಾ ಕ್ಷೇತ್ರದಲ್ಲಿ ಜೀವನ ಪರ್ಯಂತ ಸಾಧನೆ ಪ್ರಶಸ್ತಿ ಮತ್ತು ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗಳನ್ನು ನೀಡಿ ಗೌರವಿಸುತ್ತಿದ್ದು, ಇದಕ್ಕಾಗಿ ಈ ವರ್ಷ ಆಸಕ್ತ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಕ್ರೀಡಾಪಟುಗಳು ಜೀವಮಾನ ಸಾಧನೆ ಪ್ರಶಸ್ತಿ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಆನ್‌ಲೈನ್ ಮೂಲಕ ಇಲಾಖೆ ಅಧಿಕೃತ ವೆಬ್‌ಸೈಟ್ -http://serviceonline.gov.in/Karnataka ಮೂಲಕ ಹಾಗೂ ಏಕಲವ್ಯ ಪ್ರಶಸ್ತಿಗಾಗಿ -www.karnataka.gov.in/dyes- ಮೂಲಕ ಪ್ರಸ್ತಾವನೆಗಳನ್ನು ಜೂನ್ 15ರೊಳಗೆ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಸಲ್ಲಿಸಿದ ಪ್ರಸ್ತಾವನೆಗಳ ಯಥಾಪ್ರತಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು, ಉಡುಪಿ ಇಲ್ಲಿಗೂ ಸಲ್ಲಿಸಬೇಕು. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಡಾ.ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ (ದೂರವಾಣಿ:0820-2521324, 9480886467) ಇವರನ್ನು ಸಂಪರ್ಕಿಸುಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.







