Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಮೋದಿ ಉತ್ಪನ್ನ’ವನ್ನು ಮಾರಿದ ಬಿಜೆಪಿ...

‘ಮೋದಿ ಉತ್ಪನ್ನ’ವನ್ನು ಮಾರಿದ ಬಿಜೆಪಿ ಜಯಿಸಿದ್ದು ಹೀಗೆ: ಶಶಿ ತರೂರ್ ವಿವರಣೆ

ವಾರ್ತಾಭಾರತಿವಾರ್ತಾಭಾರತಿ29 May 2019 9:45 PM IST
share
‘ಮೋದಿ ಉತ್ಪನ್ನ’ವನ್ನು ಮಾರಿದ ಬಿಜೆಪಿ ಜಯಿಸಿದ್ದು ಹೀಗೆ: ಶಶಿ ತರೂರ್ ವಿವರಣೆ

ಹೊಸದಿಲ್ಲಿ,ಮೇ 29: ಲೋಕಸಭಾ ಚುನಾವಣೆಯಲ್ಲಿ ಜನರು ತಮ್ಮ ಆರ್ಥಿಕ ಹಿತಾಸಕ್ತಿಗಾಗಿ ಮತ ಚಲಾಯಿಸಿರಲಿಲ್ಲ ಎಂದು ಹೇಳಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು,ಪ್ರಧಾನಿ ನರೇಂದ್ರ ಮೋದಿಯವರು ತನ್ನ ‘ಉತ್ಪನ್ನ ’ಎಂದು ಮೊದಲೇ ನಿರ್ಧರಿಸಿದ್ದ ಬಿಜೆಪಿಯು ಅವರ ಹಿಂಬಾಲಕರ ಅಸಾಧಾರಣ ಪಂಥವೊಂದನ್ನು ಸೃಷ್ಟಿಸುವ ಮೂಲಕ ಅವರನ್ನು ಅತ್ಯುತ್ತಮವಾಗಿ ‘ಮಾರಾಟ’ ಮಾಡಿತ್ತು ಎಂದು ಹೇಳಿದ್ದಾರೆ.

ಚುನಾವಣೆಯನ್ನು ‘ಖಾಕಿ ಜನಾಭಿಪ್ರಾಯ’ವನ್ನಾಗಿ ಪರಿವರ್ತಿಸುವ ತನ್ನ ಪ್ರಯತ್ನದಲ್ಲಿ ಬಿಜೆಪಿ ಭಾರೀ ಯಶಸ್ಸು ಪಡೆದ ಉತ್ತರ ಭಾರತದಲ್ಲಿ ಜನಮಾನಸದಲ್ಲಿ ಚುನಾವಣಾ ವಿಷಯವಾಗಿ ರಾಷ್ಟ್ರೀಯ ಭದ್ರತೆಯ ಪರಿಣಾಮವನ್ನ್ನು ಕಾಂಗ್ರೆಸ್ ಕಡೆಗಣಿಸಿರಬಹುದು ಎಂದೂ ಅವರು ಹೇಳಿದರು.

ಕಾಂಗ್ರೆಸ್ ತನ್ನ ಕನಿಷ್ಠ ಆದಾಯ ಖಾತರಿ ಯೋಜನೆ ‘ನ್ಯಾಯ್’ ಅನ್ನು ಆರು ತಿಂಗಳ ಮೊದಲೇ ಪ್ರಕಟಿಸಿದ್ದರೆ ಅದು ಹೆಚ್ಚು ಮತಗಳನ್ನು ಪಡೆಯಬಹುದಾಗಿತ್ತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ ತರೂರ್,ಕೆಲವು ಮೂಲಭೂತ ವಿಷಯಗಳನ್ನು ನಾವು ತಪ್ಪಾಗಿ ಗ್ರಹಿಸಿದ್ದೆವು ಎನ್ನುವುದನ್ನು ಚುನಾವಣಾ ಫಲಿತಾಂಶಗಳು ಸ್ಪಷ್ಟಪಡಿಸಿವೆ ಎಂದು ನಾನು ಭಾವಿಸಿದ್ದೇನೆ. ಈ ವಿಷಯಗಳು ಯಾವುದಾಗಿದ್ದವು ಎನ್ನುವುದನ್ನು ನಿಖರವಾಗಿ ಗುರುತಿಸಲು ಆತ್ಮಾವಲೋಕನ ಮತ್ತು ಸಮಗ್ರ ಮೌಲ್ಯಮಾಪನ ಅಗತ್ಯವಾಗಿವೆ ಎಂದರು.

ನಿರುದ್ಯೋಗ ಸಮಸ್ಯೆ,ಕೃಷಿ ಬಿಕ್ಕಟ್ಟಿನಂತಹ ಘೋರ ಆರ್ಥಿಕ ಸಮಸ್ಯೆಗಳು ಮತ್ತು ನೋಟು ನಿಷೇಧದಂತಹ ಇತರ ಕ್ರಮಗಳ ವಿನಾಶಕಾರಿ ಪರಿಣಾಮ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎನ್ನುವುದು ಕಾಂಗ್ರೆಸ್‌ಗೆ ಮನವರಿಕೆಯಾಗಿತ್ತು. ಹೇಗಿದ್ದರೂ ಜನರು ತಮ್ಮ ಆರ್ಥಿಕ ಹಿತಾಸಕ್ತಿಗನುಗುಣವಾಗಿ ಮತವನ್ನು ಚಲಾಯಿಸುತ್ತ್ತಾರೆ ಎನ್ನುವುದು ಸಾಮಾನ್ಯ ನಂಬಿಕೆ. ಆದರೆ ಈ ಬಾರಿ ಭಾರತೀಯ ಮತದಾರ ಅದನ್ನು ಮಾಡಲಿಲ್ಲ ಮತ್ತು ಏಕೆ ಎನ್ನುವುದನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದು ತಿರುವನಂತಪುರದಿಂದ ಲೋಕಸಭೆಗೆ ಮರುಆಯ್ಕೆಯಾಗಿರುವ ತರೂರ್ ನುಡಿದರು.

ಬಿಜೆಪಿ ನಿರ್ಣಾಯಕ ಸಂದೇಶಗಳನ್ನು ಉತ್ತಮವಾಗಿ ತಲುಪಿಸುತ್ತದೆ ಎನ್ನುವುದು ಬಹುಶಃ ಅದರ ವಿಜಯಕ್ಕೆ ಒಂದು ಕಾರಣವಾಗಿರಬಹುದು. ತಮ್ಮ ‘ಉತ್ಪನ್ನ’ ಮೋದಿ ಎಂದು ಅವರು ಬಹಳ ಮೊದಲೇ ನಿರ್ಧರಿಸಿದ್ದರು ಮತ್ತು ಅವರನ್ನು ಅತ್ಯುತ್ತಮವಾಗಿ ‘ಮಾರಾಟ ಮಾಡಿದರು ಎಂದ ಅವರು,ಬಿಜೆಪಿ ಮೋದಿಯವರನ್ನು ಪ್ರಮುಖವಾಗಿ ಬಿಂಬಿಸಲು ಅವರ ಹಿಂಬಾಲಕರ ಬೃಹತ್ ಪಡೆಯನ್ನು ಸೃಷ್ಟಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ತನ್ನ ಕೋಟ್ಯಂತರ ಯೋಧರನ್ನು ರೂಪಿಸಿತ್ತು ಮತ್ತು ದಿನದ 24 ಗಂಟೆಯೂ ಪ್ರಚಾರ ವ್ಯವಸ್ಥೆ ನಿರಂತರವಾಗಿರುವಂತೆ ನೋಡಿಕೊಂಡಿತ್ತು. ಬಿಜೆಪಿ ಇದಕ್ಕಾಗಿ 5,600 ಕೋ.ರೂ.ಗಳ ತೆರಿಗೆದಾರರ ಹಣವನ್ನು ಬಳಸಿಕೊಂಡಿತ್ತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X