Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಫ್ತಾರ್ ಕೂಟ: ಸೌಹಾರ್ದದಿಂದ ಬದುಕಬೇಕು-...

ಇಫ್ತಾರ್ ಕೂಟ: ಸೌಹಾರ್ದದಿಂದ ಬದುಕಬೇಕು- ಐವನ್ ಡಿಸೋಜ

ವಾರ್ತಾಭಾರತಿವಾರ್ತಾಭಾರತಿ29 May 2019 9:59 PM IST
share
ಇಫ್ತಾರ್ ಕೂಟ: ಸೌಹಾರ್ದದಿಂದ ಬದುಕಬೇಕು- ಐವನ್ ಡಿಸೋಜ

ಮಂಗಳೂರು, ಮೇ 29: ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ನೇತೃತ್ವದಲ್ಲಿ 4ನೇ ವರ್ಷದ ಸೌಹಾರ್ದ ಸಭೆ ಹಾಗೂ ಇಫ್ತಾರ್ ಕೂಟವನ್ನು ನಗರದ ಫಾದರ್‌ಮುಲ್ಲರ್ ಕನ್ವೇನ್‌ಶನ್ ಹಾಲ್‌ನಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿತ್ತು.

ಸೌಹಾರ್ದ ಸಭೆಯಲ್ಲಿ ಮಾತನಾಡಿದ ಐವನ್ ಡಿಸೋಜ, ಕಳೆದ ಹಲವು ವರ್ಷಗಳಿಂದ ರಮಝಾನ್, ದೀಪಾವಳಿ, ಕ್ರಿಸ್‌ಮಸ್ ಸೌಹಾರ್ದ ಸಭೆಗಳನ್ನು ಆಯೋಜಿಸುತ್ತಾ ಬಂದಿದ್ದೇನೆ. ಇದಕ್ಕೆ ಮಂಗಳೂರಿನ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಮಾಜದಲ್ಲಿ ಎಲ್ಲರೂ ಸೌಹಾರ್ದದಿಂದ ಬದುಕಬೇಕು ಎಂದು ಹೇಳಿದರು.

ನಾವು ಎಲ್ಲರ ಹಬ್ಬಗಳನ್ನೂ ಆಚರಿಸುತ್ತೇವೆ. ಮಂಗಳೂರಿನಲ್ಲಿ ಎಲ್ಲ ಧರ್ಮಗಳ ಜನತೆಯೂ ಒಗ್ಗಟ್ಟಾಗಿದ್ದಾರೆ ಎನ್ನುವುದು ಇಂತಹ ಸೌಹಾರ್ದ ಸಭೆಗಳ ಉದ್ದೇಶವಾಗಿದೆ. ಸೌಹಾರ್ದದಿಂದ ಬಾಳುವುದರಿಂದ ಉತ್ಕೃಷ್ಠ ಬದುಕನ್ನು ನಡೆಸಬಹುದು. ಸರ್ವಧರ್ಮಗಳಲ್ಲೂ ಸಹಿಷ್ಣುತೆ ಇರಬೇಕು ಎಂದು ಹೇಳಿದರು.

ನಮ್ಮ ಧರ್ಮವನ್ನು ಪಾಲಿಸಬೇಕು. ಜತೆಗೆ ಪ್ರತಿಯೊಬ್ಬರು ಉಳಿದ ಧರ್ಮಗಳನ್ನು ಗೌರವಿಸಬೇಕು. ಸೌಹಾರ್ದದಿಂದ ನೂರಕಾಲ ಬದುಕಬೇಕು. ಧರ್ಮ ಸಹಿಷ್ಣುತೆ ಎನ್ನುವುದು ತುಂಬ ಶ್ರೇಷ್ಠವಾದ ಪದ. ಎಲ್ಲ ಧರ್ಮಗಳ ಜನರೂ ನಮ್ಮ ಸಹೋದರರಿದ್ದಂತೆ ಎಂದು ಹೇಳಿದರು.

ಸೌಹಾರ್ದ ಸಭೆಯಲ್ಲಿ ಸಂತ ಸೆಬಾಸ್ಟಿಯನ್ ಚರ್ಚ್ ಪೆರ್ಮನ್ನೂರ್ ಧರ್ಮಗುರು ರೆ.ಫಾ.ಜೆ.ಬಿ.ಸಲ್ದಾನಾ, ಎಸ್‌ಡಿಎಂ ಕಾನೂನು ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ದೇವರಾಜು, ದ.ಕ. ಜಿಲ್ಲಾ ಜಮಾಅತ್ ಇಸ್ಲಾಂ ಹಿಂದ್‌ನ ಅಧ್ಯಕ್ಷ ಮುಹಮ್ಮದ್ ಕುಂಞಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಹಾರೈಸಿದರು. ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಶುಭ ಹಾರೈಸಿದರು.

ಸಮಾರಂಭದಲ್ಲಿ ಜಪ್ಪಿನಮೊಗರು ಜುಮ್ಮಾ ಮಸೀದಿಯ ಖತೀಬರಾದ ಖಲಂದರ್ ಶಾಫಿ ಮದನಿ, ಉಳ್ಳಾಲ ಸೈಯದ್ ಮದನಿ ದರ್ಗಾದ ಅಧ್ಯಕ್ಷ ಹಾಜಿ ರಶೀದ್, ಮಂಗಳೂರು ಮೂಡಾ ಮಾಜಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹೀಂ, ಮಾಜಿ ಮೇಯರ್ ಭಾಸ್ಕರ್ ಕೆ., ಮನಪಾ ಮಾಜಿ ಸಚೇತಕ ಶಶಿಧರ್ ಹೆಗ್ಡೆ, ಕಾರ್ಪೊರೇಟರ್ ನವೀನ್ ಡಿಸೋಜ, ಡಿ.ಕೆ.ಅಧೋಕ್, ಆಶಾ ಡಿಸಿಲ್ವಾ ಹಾಗೂ ಜಯರಾಮ ಶೇಖ, ಮುಹಮ್ಮದ್ ಗುಲಾಂ, ಜೆ.ಎ.ಸಲೀಂ, ಶಾಹುಲ್ ಹಮೀದ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಜಪ್ಪಿನಮೊಗರು ಜುಮಾ ಮಸೀದಿಯ ವಿದ್ಯಾರ್ಥಿ ಅಹ್ಮದ್ ಸಹದ್ ಕಿರಾಅತ್ ಪಠಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X