ಮೇ 31ರಂದು ವಿಶ್ವ ತಂಬಾಕು ರಹಿತ ದಿನ
ಉಡುಪಿ, ಮೇ 29: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಾರ್ಕಳ, ಸರಕಾರಿ ಪದವಿ ಪೂರ್ವ ಕಾಲೇಜು ಬಜಗೋಳಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ತಂಬಾಕು ರಹಿತ ದಿನವನ್ನು ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ ಎಂಬ ಘೋಷವಾಕ್ಯದಡಿಯಲ್ಲಿ ಮೇ 31ರಂದು ಬೆಳಗ್ಗೆ 10ಕ್ಕೆ ಕಾರ್ಕಳ ತಾಲೂಕಿನ ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಗುವುದು.
ಕಾರ್ಯಕ್ರಮವನ್ನು ಕಾರ್ಕಳ ಶಾಸಕ ಸುನೀಲ್‌ಕುಮಾರ್ ಉದ್ಘಾಟಿಸಲಿದ್ದು, ಕಾರ್ಕಳ ತಾಪಂ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story





