ಯುವತಿಗೆ ಆ್ಯಸಿಡ್ ಎರಚುವ ಬೆದರಿಕೆ: ಯುವಕ ಸೆರೆ
ಬೆಂಗಳೂರು, ಮೇ 29: ಯುವತಿಯ ಮೇಲೆ ಆ್ಯಸಿಡ್ ಎರಚುವ ಬೆದರಿಕೆ ಹಾಕಿದ್ದ ಆರೋಪದಡಿ ಯುವಕನೋರ್ವನನ್ನು ಇಲ್ಲಿನ ಜೆಜೆ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ನಗರದ ನಿವಾಸಿ ಫೈಸಲ್ ಎಂಬಾತ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ಫೆಬ್ರವರಿಯಿಂದ ಯುವತಿಯನ್ನು ಮದುವೆಯಾಗುವಂತೆ ಆರೋಪಿ ಫೈಸಲ್ ಒತ್ತಾಯಿಸುತ್ತಿದ್ದ. ಆದರೆ, ಆಕೆ ನಿರಾಕರಿಸಿದ ಹಿನ್ನೆಲೆ ಯುವತಿ ಕುಟುಂಬಸ್ಥರೊಂದಿಗೆ ಜಗಳವಾಗಿ, ಆ್ಯಸಿಡ್ ಹಾಕುವ ಬೆದರಿಕೆ ಹಾಕಿದ್ದ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗಿತ್ತು. ದೂರಿನನ್ವಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ವಿಚಾರಣೆಗೊಳಪಡಿಸಿದ್ದಾರೆ.
Next Story





