ವಿಶ್ವಕಪ್ ಕ್ರಿಕೆಟ್: ಬೆಟ್ಟಿಂಗ್ ದಂಧೆಕೋರರಿಗೆ ಮಂಗಳೂರು ಕಮಿಷನರ್ ಎಚ್ಚರಿಕೆ

ಮಂಗಳೂರು, ಮೇ 30: ಗುರುವಾರದಿಂದ ವಿಶ್ವಕಪ್ ಕ್ರಿಕೆಟ್ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬೆಟ್ಟಿಂಗ್ ವಿರುದ್ಧ ಮೊದಲ ದಿನವೇ ಮಂಗಳೂರು ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆ ಐಪಿಎಲ್ ಪಂದ್ಯ ಆರಂಭವಾಗುವ ಮೊದಲೇ ಅವರು ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಟ್ವೀಟ್‌ನಲ್ಲಿ ಎಚ್ಚರಿಕೆ ನೀಡಿದ್ದರು. ಬಳಿಕ ನಡೆದ ಕಾರ್ಯಾಚರಣೆಯಲ್ಲಿ 18 ಪ್ರಕರಣ ಪತ್ತೆ ಹಚ್ಚಿ ಬೆಟ್ಟಿಂಗ್ ದಂಧೆಕೋರರಿಗೆ ಭಯ ಹುಟ್ಟಿಸಿದ್ದರು.
ಬೆಟ್ಟಿಂಗ್ ಹಾವಳಿ ತಡೆಗೆ ಮಂಗಳೂರು ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಇದೀಗ ವಿಶ್ವಕಪ್ ಕ್ರಿಕೆಟ್ ಆರಂಭವಾಗುತ್ತಿದ್ದಂತೆ ಪೊಲೀಸ್ ಕಮಿಷನರ್ ಮತ್ತೆ ಎಚ್ಚರಿಕೆ ನೀಡಿದ್ದಾರೆ.
ವಿಶ್ವಕಪ್‌ನಲ್ಲಿಯೂ ಬೆಟ್ಟಿಂಗ್ ಆಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುವ ಮೂಲಕ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಬೆಟ್ಟಿಂಗ್‌ನಿಂದ ಜನರು ಕಷ್ಟಪಟ್ಟು ದುಡಿದ ಹಣ ಕಳೆದುಕೊಳ್ಳಬೇಕಾಗುತ್ತದೆ. ಜನರು ಬೆಟ್ಟಿಂಗ್‌ನಲ್ಲಿ ಪಾಲ್ಗೊಳ್ಳದಂತೆ ಪೊಲೀಸ್ ಕಮೀಷನರ್ ಸಂದೀಪ್ ಪಾಟೀಲ್ ಸೂಚಿಸಿದ್ದಾರೆ.







