Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾರ್ವಜನಿಕ ಸಮೂಹ ಸಾರಿಗೆ ಬಳಕೆಗೆ...

ಸಾರ್ವಜನಿಕ ಸಮೂಹ ಸಾರಿಗೆ ಬಳಕೆಗೆ ಮುನ್ನುಡಿ ಬರೆದ ಜಿಲ್ಲಾಧಿಕಾರಿ ಹೆಪ್ಸಿಬಾ

ವಾರ್ತಾಭಾರತಿವಾರ್ತಾಭಾರತಿ30 May 2019 8:56 PM IST
share
ಸಾರ್ವಜನಿಕ ಸಮೂಹ ಸಾರಿಗೆ ಬಳಕೆಗೆ ಮುನ್ನುಡಿ ಬರೆದ ಜಿಲ್ಲಾಧಿಕಾರಿ ಹೆಪ್ಸಿಬಾ

ಉಡುಪಿ, ಮೇ 30: ಪ್ರತಿನಿತ್ಯ ಹವಾನಿಯಂತ್ರಿತ ವಾಹನದಲ್ಲಿ ಓಡಾಡುತ್ತಿದ್ದ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಮ್ಮ ಕಾರು, ದ್ವಿಚಕ್ರ ವಾಹನಗಳಲ್ಲಿ ಕಚೇರಿಗೆ ಆಗಮಿಸುತ್ತಿದ್ದ ಇತರೆ ಸಿಬ್ಬಂದಿಗಳು, ಗುರುವಾರ ಸಾರ್ವಜನಿಕ ಸಾರಿಗೆ ಕಲ್ಪನೆಯಲ್ಲಿ ಎಲ್ಲರೂ ಒಂದೇ ವಾಹನದಲ್ಲಿ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸುವ ಮೂಲಕ ಹೊಸ ಉಪಕ್ರಮಕ್ಕೆ ಮುಂದಾದರು.

ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಆಶಯ ಹಾಗೂ ನಿರ್ದೇಶನದಂತೆ ಸಾರ್ವಜನಿಕ ಸಮೂಹ ಸಾರಿಗೆ ಬಳಕೆಗೆ ಮುನ್ನುಡಿ ಬರೆದ ಇವರೆಲ್ಲರೂ ಇಂದು ಒಂದೇ ವಾಹನದಲ್ಲಿ ಉಡುಪಿಯಿಂದ ಮಣಿಪಾಲಕ್ಕೆ ಪ್ರಯಾಣಿಸಿ ಕಚೇರಿಗೆ ಆಗಮಿಸುವ ಮೂಲಕ ಜಿಲ್ಲೆಯಲ್ಲಿ ಸಾರ್ವಜನಿಕ ಸಾರಿಗೆ ಬಳಕೆಗೆ ಎಲ್ಲರಿಗೂ ಮಾದರಿಯಾದರು.

ಗುರುವಾರ ಬೆಳಗ್ಗೆ 9:30ಕ್ಕೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಅವರು ತಮ್ಮ ಅಧಿಕೃತ ಸರಕಾರಿ ವಾಹನವನ್ನು ಮನೆಯಲ್ಲೇ ಬಿಟ್ಟು, ಅಜ್ಜರಕಾಡಿ ನಲ್ಲಿರುವ ನಿವಾಸದಿಂದ ತಮ್ಮ ವಾಹನಚಾಲಕ ಹಾಗೂ ಅಂಗರಕ್ಷಕನೊಂದಿಗೆ ಸಾರ್ವಜನಿಕ ವಾಹನ ಏರಿದರು. ಜಿಲ್ಲಾಧಿಕಾರಿ ನಿವಾಸ ಪಕ್ಕದಲ್ಲೇ ಇರುವ ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸಹ ತಮ್ಮ ವಾಹನ ಬಿಟ್ಟು ಜಿಲ್ಲಾಧಿಕಾರಿಗೆ ಸಾಥ್ ನೀಡಿದರು. ಬಳಿಕ ಅಜ್ಜರಕಾಡಿನ ವಸತಿಗೃಹದಲ್ಲಿರುವ ವಿವಿಧ ಅಧಿಕಾರಿಗಳು ಸಹ ತಮ್ಮ ಸರಕಾರಿ ವಾಹನ ಬಿಟ್ಟು ಸಾರ್ವಜನಿಕ ಸಾರಿಗೆ ಏರಿದರು. ವಸತಿಗೃಹದಲ್ಲಿರುವ ವಿವಿಧ ಇಲಾಖೆಯ ಸಿಬ್ಬಂದಿಗು ಸಹ ಇವರನ್ನು ಸೇರಿಕೊಂಡರು.

ಜಿಲ್ಲಾಧಿಕಾರಿ ನಿವಾಸದಿಂದ ಹೊರಟ ವಾಹನ, ಬನ್ನಂಜೆಯ ತಾಲೂಕು ಕಚೇರಿ ಮಾರ್ಗವಾಗಿ, ಸಿಟಿ ಬಸ್‌ನಿಲ್ದಾಣ, ಎಂಜಿಎಂ ಕಾಲೇಜು ಮಾರ್ಗದಲ್ಲಿ ಸಾಗಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ತೆರಳಲು ಕಾಯುತ್ತಿದ್ದ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಬೆಳಗ್ಗೆ 9:50ಕ್ಕೆ ಸರಿಯಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿತು.

ವಾರದಲ್ಲಿ ಒಂದು ದಿನವಾದರೂ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕ ಸಾರಿಗೆ ಬಳಸುವುದರ ಮೂಲಕ, ವಾತಾವರಣದಲ್ಲಿ ಇಂಗಾಲದ ಅಂಶ ಕಡಿಮೆ ಮಾಡುವುದರ ಜೊತೆಗೆ ವಾಯು ಮಾಲಿನ್ಯ ನಿಯಂತ್ರಣ ಸಹ ಸಾಧ್ಯವಾಗಲಿದೆ. ಜೊತೆಗೆ ಸಾರ್ವಜನಿಕ ಸಾರಿಗೆಗೂ ಸಹ ಉತ್ತೇಜನ ದೊರೆಯಲಿದೆ ಎಂಬ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಈ ಚಿಂತನೆ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ, ಪ್ರತಿ ಗುರುವಾರ, ಈ ರೀತಿಯ ಸಾರ್ವಜನಿಕ ಸಮೂಹ ಸಾರಿಗೆ ಬಳಸಲು ನಿರ್ಧರಿಸಿದ್ದಾರೆ. ಸಂಜೆ 5:30ಕ್ಕೆ ಕಚೇರಿ ಸಮಯ ಮುಕ್ತಾಯದ ನಂತರವೂ ಸಹ ಸಾರ್ವಜನಿಕ ವಾಹನದಲ್ಲಿಯೇ ಜಿಲ್ಲಾಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಮನೆಗಳಿಗೆ ಮರಳಿದರು.

ವಾಹನದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಎಚ್.ಆರ್.ಲಮಾಣಿ ಮತ್ತಿತರರು ಪ್ರಯಾಣಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X