Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ ಕ್ಷೇತ್ರದ ಸೋಲಿಗೆ ನಾನೇ ಹೊಣೆ:...

ಮಂಡ್ಯ ಕ್ಷೇತ್ರದ ಸೋಲಿಗೆ ನಾನೇ ಹೊಣೆ: ನಿಖಿಲ್ ಕುಮಾರಸ್ವಾಮಿ

"ರಾಜ್ಯಾದ್ಯಂತ ಪ್ರವಾಸ ಮಾಡಿ ಜೆಡಿಎಸ್‌ಗೆ ಶಕ್ತಿ ತುಂಬುತ್ತೇನೆ"

ವಾರ್ತಾಭಾರತಿವಾರ್ತಾಭಾರತಿ30 May 2019 9:47 PM IST
share
ಮಂಡ್ಯ ಕ್ಷೇತ್ರದ ಸೋಲಿಗೆ ನಾನೇ ಹೊಣೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು, ಮೇ 30: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ನಾನೇ ಹೊಣೆಗಾರ. ಯಾವುದೆ ಕಾರಣಕ್ಕೂ ನನ್ನ ಸೋಲಿಗೆ ಮೈತ್ರಿ ಪಕ್ಷದ ಶಾಸಕರನ್ನು, ಸಚಿವರನ್ನು ಟೀಕಿಸುವುದು ಬೇಡವೆಂದು ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು, ಚುನಾವಣೆಯ ಫಲಿತಾಂಶದ ಜವಾಬ್ದಾರಿಯನ್ನು ಸಂಪೂರ್ಣವಾಗಿ ನಾನೇ ಹೊರುತ್ತೇನೆ. ಈ ಫಲಿತಾಂಶದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಒಬ್ಬರನ್ನೇ ಟೀಕಿಸಿ. ಶಾಸಕರು, ವಿಧಾನ ಪರಿಷತ್ ಸದಸ್ಯರು, ಕಾರ್ಯಕರ್ತರು, ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಟೀಕಿಸುವುದು ಬೇಡ ಎಂದಿದ್ದಾರೆ.

ಮೈತ್ರಿ ಪಕ್ಷದ ಎಲ್ಲಾ ಕಾರ್ಯಕರ್ತರ ಬಳಿ ನಾನು ಕ್ಷಮೆಯಾಚಿಸುತ್ತೇನೆ. ಯಾಕೆಂದರೆ ಜನರು ನಿಖಿಲ್ ಕುಮಾರಸ್ವಾಮಿಯನ್ನು ತಿರಸ್ಕರಿಸಿದ್ದಾರೆ. ಇದರಿಂದ ಕೆಲವು ಕಾರ್ಯಕರ್ತರು ನನ್ನಿಂದ ನಿರಾಸೆಯಾಗಿದ್ದಾರೆ. ಆದರೂ ಮಂಡ್ಯದ ಅಭಿವೃದ್ಧಿಗೆ ಸದಾ ಕಾರ್ಯಪ್ರವೃತ್ತನಾಗಿರುತ್ತೇನೆಂದು ಅವರು ಹೇಳಿದರು.

ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಕುಮಾರಸ್ವಾಮಿ ಈ ವರ್ಷದ ಬಜೆಟ್ ಮಂಡನೆಯಲ್ಲಿ ಮಂಡ್ಯ ಜಿಲ್ಲೆಗಾಗಿ 8,671 ಕೋಟಿ ರೂ.ಬಿಡುಗಡೆ ಮಾಡಿದ್ದರು. ಹೀಗಾಗಿ ಆ ಕೆಲಸಗಳು ಸರಿಯಾಗಿ ನಡೆಯುತ್ತಿದೆಯೇ ಎನ್ನುವುದನ್ನು ನಾನು ನೋಡಿಕೊಳ್ಳುತ್ತೇನೆ. ನನ್ನ ಮೇಲೆ ನಂಬಿಕೆ ಇಟ್ಟು ಮತ ಹಾಕಿದ ಎಲ್ಲರಿಗೂ ಧನ್ಯವಾದಗಳು. 5 ಲಕ್ಷದ 76 ಸಾವಿರ 400 ಮತಗಳು ಬಂದಿವೆ. ಉಳಿದ ಮತದಾರರ ನಂಬಿಕೆ ಗಳಿಸಲು ಮುಂದಿನ ದಿನದಲ್ಲಿ ನಾನು ಪ್ರಯತ್ನ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, ನಾನು ಈ ಪಯಣದಲ್ಲಿ ಸಾಕಷ್ಟು ಪಡೆದುಕೊಂಡಿದ್ದೇನೆ ಎಂದು ಭಾವಿಸುತ್ತೇನೆ. ನಾನು ಮೊದಲ ದಿನದಿಂದ ಪಾಸಿಟಿವ್ ವ್ಯಕ್ತಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ಅಲ್ಲಿನ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುತ್ತೇನೆ. ಜೊತೆಗೆ ನಮ್ಮ ಪಕ್ಷದ ಕಾರ್ಯಕರ್ತರನ್ನು ಪ್ರೇರೇಪಿಸುತ್ತೇನೆ ಎಂದು ಅವರು ತಿಳಿಸಿದರು.

ಅಭಿಗೆ ಶುಭಾಶಯ: ಶುಕ್ರವಾರ ಬಿಡುಗಡೆಯಾಗುತ್ತಿರುವ ನನ್ನ ಸಹೋದರ ಅಭಿ ನಟನೆಯ ಚೊಚ್ಚಲ ಅಮರ್ ಸಿನಿಮಾ ಯಶಸ್ಸನ್ನು ಕಾಣಲಿ ಎಂದು ಹಾರೈಸುತ್ತಿದ್ದೇನೆ. ಎಲ್ಲರೂ ದಯವಿಟ್ಟು ಥಿಯೇಟರ್‌ಗಳಿಗೆ ಹೋಗಿ ಅಮರ್ ಚಿತ್ರವನ್ನು ನೋಡಿ ಎಂದು ಅವರು ಶುಭ ಹಾರೈಸಿದರು.

ಸುಮಲತಾಗೆ ಅಭಿನಂದನೆ: ಕೆಲವರು ನಾನು ತೋರ್ಪಡಿಕೆಗಾಗಿ ಅಭಿನಂದಿಸುತ್ತಿದ್ದೇನೆಂದು ಅಂದುಕೊಳ್ಳುತ್ತಾರೆ. ಅಂತಹವರಿಗೆ ನಾನು ಹೇಳಲು ಬಯಸುವುದೇನೆಂದರೆ ಪ್ರಚಾರದ ಸಮಯದಲ್ಲೂ ನಾನು ಸಂಬಂಧಗಳಿಗೆ ಬೆಲೆ ಕೊಡುತ್ತೇನೆ ಎಂದು ಹೇಳಿದ್ದೆ. ಈಗಲೂ ಅದನ್ನೇ ಹೇಳುತ್ತೇನೆ. ಸುಮಕ್ಕ ಮಂಡ್ಯದಲ್ಲಿ ಗೆದ್ದಿದ್ದಾರೆ. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜೊತೆಗೆ ನಾನು ಮಂಡ್ಯದ ಅಭಿವೃದ್ಧಿಗೆ ಯಾರ ಜೊತೆಗೆ ಬೇಕಾದರೂ ಕೈ ಜೋಡಿಸಲು ಸಿದ್ಧನಾಗಿದ್ದೇನೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X