Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ...

ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿ: ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 May 2019 11:33 PM IST
share

ಶಿವಮೊಗ್ಗ, ಮೇ 30: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಪ್ಪಿಸಲು ಅಧಿಕಾರಿಗಳು ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಎ ದಯಾನಂದ್ ಆರೋಗ್ಯ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 

ಗುರುವಾರ ನಗರದ ಡಿ.ಸಿ. ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಗುಣಮಟ್ಟ ಖಾತ್ರಿ ಕಾರ್ಯಕ್ರಮದಲ್ಲಿ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಸ್ಥಿತಿಗತಿ ಮತ್ತು ಅಲ್ಲಿನ ಅವ್ಯವಸ್ಥೆಗಳ ಕುರಿತು ಅವರು ಸಂಬಂಧಿಸಿದ ಇಲಾಖಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. 

ಜಿಲ್ಲೆಯಲ್ಲಿ ನಕಲಿ ವೈದ್ಯರಿಂದ ಜನರಿಗೆ ತೊಂದರೆ ಆಗುತ್ತಿದ್ದು ಸಾವಿನ ಪ್ರಮಾಣ ಹೆಚ್ಚುತ್ತಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಔಷಧವನ್ನು ರೋಗಿಗಳಿಗೆ ನೀಡುವ ಮೂಲಕ ಔಷಧಗಳಿಗೆ ದಾಸರಾಗುವ ಹಾಗೂ ವ್ಯತಿರಿಕ್ತ ಪರಿಣಾಮ ಬೀರುವ ಸಂಭವ ಹೆಚ್ಚಿದೆ ಈ ಕುರಿತಾಗಿ ಅಧಿಕಾರಿಗಳು ನಿರ್ಲಕ್ಷ್ಯವನ್ನು ಬಿಡಬೇಕು ಎಂದು ಅವರು ಹೇಳಿದರು.

ಖಾಸಗಿ ಸ್ಕ್ಯಾನಿಂಗ್ ಸೆಂಟರ್ ಗಳಲ್ಲಿ ಭ್ರೂಣಲಿಂಗ ಪತ್ತೆ ಕುರಿತಾಗಿ ಅಧಿಕಾರಿಗಳು ಖುದ್ದು ಕಾರ್ಯಾಚರಣೆಯಲ್ಲಿ ಭಾಗವಹಿಸಿ ಅಂತಹ ಸಂಸ್ಥೆಗಳ ವಿರುಧ್ಧ ನಿರ್ಧಾಕ್ಷಿಣ್ಯ ಕ್ರಮಗಳನ್ನು ಕೈಗೊಳ್ಳಬೇಕು. ಯಾವುದೇ ವೈದ್ಯರ ಸಲಹೆ ಇಲ್ಲದಂತೆ ಮಾರುಕಟ್ಟೆಯಲ್ಲಿ ದೊರೆಯುವ ಗರ್ಭಪಾತದ ಮಾತ್ರೆಗಳ ಬಳಕೆಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮ ಹಾಗೂ ಸಂಭವಿಸಬಹುದಾದ ಸಾವಿನ ಬಗ್ಗೆ ಸಹ ಜಾಗ್ರತೆ ಮೂಡಿಸುವ ಕಾರ್ಯವಾಗಬೇಕಿದೆ. ವೈದ್ಯರ ಚೀಟಿ ಇಲ್ಲದೆ ಔಷಧಗಳನ್ನು ನೀಡುವ ಮಳಿಗೆಗಳ ಮೇಲೆ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.

ಆಸ್ಪತ್ರೆಗಳಲ್ಲಿನ ತ್ಯಾಜ್ಯಗಳನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡದೆ ಸೂಜಿಗಳ ಸಮೇತ ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡುವುದು ಹಾಗೂ ಸುಡುವುದು ಗಮನಕ್ಕೆ ಬಂದಿದ್ದು, ಈ ಕುರಿತು ಶಿಘ್ರವಾಗಿ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದರು.

ಆಸ್ಪತ್ರೆಗಳಲ್ಲಿ ಅವ್ಯವಸ್ಥೆಗಳ ಕುರಿತು ಸಿಬ್ಬಂದಿಗಳು ಅಧಿಕಾರಿಗಳೊಂದಿಗೆ ಚರ್ಚಿಸಬೇಕು ಹಾಗೂ ಸೂಕ್ತ ಪರಿಹಾರಕ್ಕೆ ಬೇಡಿಕೆ ಇಡಬೇಕು. ನೀವು ಮಾಹಿತಿ ನೀಡದೆ ಮೌನವಹಿಸಿದರೆ ಅಧಿಕಾರಿಗಳಿಗಾಗಲಿ, ಸರ್ಕಾರಕ್ಕಾಗಲಿ ಸಮಸ್ಯೆ ತಿಳಿಯುವುದು ಹೇಗೆ ? ಮತ್ತು ಅದು ಪರಿಹಾರ ಕಾಣುವುದು ಹೇಗೆ? ಆದ್ದರಿಂದ ಸಿಬ್ಬಂದಿಗಳು ಅಧಿಕಾರಿಗಳಿಗಾಗಲೀ ಸರ್ಕಾರಕ್ಕಾಗಲಿ ಸಮಸ್ಯೆಗಳನ್ನು ಗಮನಕ್ಕೆ ತರುವಂತೆ ತಿಳಿಸಿದರು.

ಜನರಲ್ಲಿ ಸರ್ಕಾರಿ ಆಸ್ಪತ್ರೆಗಳ ಮೇಲಿನ ತಿರಸ್ಕಾರ ಭಾವನೆ ಹೋಗಬೇಕು. ಇಲ್ಲಿ ಸಿಗುವ ಚಿಕಿತ್ಸೆಯನ್ನು ಪಡೆಯಲು ಮುಂದಾಗಬೇಕು. ಹಾಗೂ ಯಾವುದೇ ಸಿಬ್ಬಂದಿಗಳು ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ಗಮನಕ್ಕೆ ತರಬೇಕು, ಪ್ರಶ್ನಿಸಬೇಕು ಎಂದು ಸಲಹೆ ನೀಡಿದರು.

ಆಸ್ಪತ್ರೆಗಳಲ್ಲಿ ಸರಿಯಾದ ಆಡಳಿತ ಮಂಡಳಿ ಹೊಂದಿರಬೇಕು ಯಾವುದೇ ನಿರ್ಲಕ್ಷ್ಯ ಸ್ವಭಾವದ ಅಧಿಕಾರಿಗಳಿದ್ದರೆ ಕೂಡಲೆ ಅವರ ಸ್ಥಳದಲ್ಲಿ ಸೂಕ್ತ ಅಧಿಕಾರಿಗಳನ್ನ ನೇಮಿಸುವ ಕಾರ್ಯ ಆಗಬೇಕು ಎಂದರು. ಸಿಇಓ ಕೆ. ಶಿವರಾಮೇಗೌಡ ಹಾಗೂ ಸ್ಥಳೀಯ ಆರೋಗ್ಯಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X